ಯಾದಗಿರಿ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, 15 ಕಾರುಗಳು ಜಖಂ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಸಂಘರ್ಷ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ಮದ್ಯೆ ಗುರುವಾರ ಸಂಘರ್ಷ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 15 ಕಾರುಗಳು ಜಖಂಗೊಂಡಿವೆ. ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ. ಸಿ.ಬಿ. ವೇದಾಮೂರ್ತಿ ಭೇಟಿ ನೀಡಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಆರ್ಎಸ್ಎಸ್ ಪ್ರಮುಖರ ಜೊತೆ ಬಿಜೆಪಿ ನಾಯಕರ ಸಭೆ; ಅಚ್ಚರಿ ಮೂಡಿಸಿದ ಸಚಿವ ವಿ.ಸೋಮಣ್ಣ ಉಪಸ್ಥಿತಿ
ಕೊಡೆಕಲ್ ಸುರಪುರದ ಬಿಜೆಪಿ ಶಾಸಕ ರಾಜುಗೌಡ ತವರೂರಾಗಿದೆ. ಸುರಪುರದ ಕಾಂಗ್ರೆಸ್ನ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸಮ್ಮುಖದಲ್ಲೇ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್ ಮುಖಂಡರ ಕಾರಿನ ಮೇಲೆ ಕೆಲವು ಮಂದಿ ಮಚ್ಚಿನಿಂದಲೂ ದಾಳಿ ನಡೆಸಿದ್ದಾರೆ.
ಈ ಮಧ್ಯೆ, ಒಳ ಮೀಸಲಾತಿ ಜಾರಿ ವಿರೋಧಿಸಿ ಶಹಾಪುರ ನಗರದಲ್ಲಿ ಇಂದು ಮೀಸಲಾತಿ ಸಂರಕ್ಷಣಾ ಒಕ್ಕೂಟ ನೇತೃತ್ವದಲ್ಲಿ ಬಂಜಾರ ಸಮುದಾಯದ ಜನರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಈ ಹಿನ್ನಲೆ ಚುನಾವಣೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಹಾಪುರ ನಗರ ಹಾಗೂ ಶಹಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ನಿಷೇಧಾಜ್ಞೆ ಹೇರಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:28 pm, Thu, 6 April 23