ಯಾದಗಿರಿ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, 15 ಕಾರುಗಳು ಜಖಂ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಸಂಘರ್ಷ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.

ಯಾದಗಿರಿ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, 15 ಕಾರುಗಳು ಜಖಂ

Updated on: Apr 06, 2023 | 11:02 PM

ಮುಖ್ಯಾಂಶಗಳು

  • ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಕಲ್ಲು ತೂರಾಟ.
  • ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಸಂಘರ್ಷ.
  • ಸ್ಥಳಕ್ಕೆ ಯಾದಗಿರಿ ಎಸ್​​ಪಿ ಡಾ. ಸಿ.ಬಿ. ವೇದಾಮೂರ್ತಿ ಭೇಟಿ.

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ಮದ್ಯೆ ಗುರುವಾರ ಸಂಘರ್ಷ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 15 ಕಾರುಗಳು ಜಖಂಗೊಂಡಿವೆ. ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಯಾದಗಿರಿ ಎಸ್​​ಪಿ ಡಾ. ಸಿ.ಬಿ. ವೇದಾಮೂರ್ತಿ ಭೇಟಿ ನೀಡಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆರ್​ಎಸ್​​ಎಸ್ ಪ್ರಮುಖರ ಜೊತೆ ಬಿಜೆಪಿ ನಾಯಕರ ಸಭೆ; ಅಚ್ಚರಿ ಮೂಡಿಸಿದ ಸಚಿವ ವಿ.ಸೋಮಣ್ಣ ಉಪಸ್ಥಿತಿ

ಕೊಡೆಕಲ್ ಸುರಪುರದ ಬಿಜೆಪಿ ಶಾಸಕ ರಾಜುಗೌಡ ತವರೂರಾಗಿದೆ. ಸುರಪುರದ ಕಾಂಗ್ರೆಸ್​​ನ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸಮ್ಮುಖದಲ್ಲೇ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್ ಮುಖಂಡರ ಕಾರಿನ ಮೇಲೆ ಕೆಲವು ಮಂದಿ ಮಚ್ಚಿನಿಂದಲೂ ದಾಳಿ ನಡೆಸಿದ್ದಾರೆ.

ಈ ಮಧ್ಯೆ, ಒಳ‌‌ ಮೀಸಲಾತಿ ಜಾರಿ ವಿರೋಧಿಸಿ ಶಹಾಪುರ‌ ನಗರದಲ್ಲಿ ಇಂದು ಮೀಸಲಾತಿ ಸಂರಕ್ಷಣಾ ಒಕ್ಕೂಟ ನೇತೃತ್ವದಲ್ಲಿ ಬಂಜಾರ ಸಮುದಾಯದ ಜನರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಈ ಹಿನ್ನಲೆ ಚುನಾವಣೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಹಾಪುರ‌ ನಗರ ಹಾಗೂ ಶಹಾಪುರ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ನಿಷೇಧಾಜ್ಞೆ ಹೇರಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:28 pm, Thu, 6 April 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us