ಯಾದಗಿರಿ ಸರ್ಕಾರಿ ಶಾಲೆಗೆ ಮೂಲಸೌಲಭ್ಯ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 12, 2024 | 10:38 PM

ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಗಂಗನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಮತ್ತು ನೀರು ಸರಬರಾಜಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಈ ವಿಚಾರವು ನಮ್ಮ ಅಧಿಕಾರಿಗಳ ಗಮನಕ್ಕೆ ಬಂದ ಕೆಲವೇ ಗಂಟೆಗಳ ಒಳಗೆ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಶಾಲೆಯ ಸಮಸ್ಯೆಗಳನ್ನು ಸರಿಪಡಿಸುವಂತೆ ದೂರವಾಣಿ ಮುಖಾಂತರ ಸೂಚಿಸಿದ್ದಾರೆ.

ಯಾದಗಿರಿ ಸರ್ಕಾರಿ ಶಾಲೆಗೆ ಮೂಲಸೌಲಭ್ಯ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us on

ಯಾದಗಿರಿ, ಫೆಬ್ರವರಿ 12: ಜಿಲ್ಲೆಯ ಶಹಪುರ ತಾಲ್ಲೂಕಿನ ಗಂಗನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಮತ್ತು ನೀರು ಸರಬರಾಜಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂಬ ಮನವಿಗೆ ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಂದಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆಯೊಂದರಲ್ಲಿನ ಅವ್ಯವಸ್ಥೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಗೆ ಟ್ಯಾಗ್ ಮಾಡಿ ಗಮನ ಸೆಳೆದ ಪರಿಣಾಮ ತುರ್ತು ಕಾಮಗಾರಿ ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಶಹಪುರ ತಾಲ್ಲೂಕಿನ ಗಂಗನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಮತ್ತು ನೀರು ಸರಬರಾಜಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿತ್ತು. ಈ ವಿಚಾರವು ನಮ್ಮ ಅಧಿಕಾರಿಗಳ ಗಮನಕ್ಕೆ ಬಂದ ಕೆಲವೇ ಗಂಟೆಗಳ ಒಳಗೆ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಶಾಲೆಯ ಸಮಸ್ಯೆಗಳನ್ನು ಸರಿಪಡಿಸುವಂತೆ ದೂರವಾಣಿ ಮುಖಾಂತರ ಸೂಚಿಸಿದ್ದಾರೆ.

ಕುಡಿಯುವ ನೀರು, ಬಿಸಿಯೂಟ ಮತ್ತು ಶೌಚಾಲಯಕ್ಕಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ನಮ್ಮ ಅಧಿಕಾರಿಗಳ ಸೂಚನೆಯ ಮೇರೆಗೆ ತುರ್ತು ಕಾಮಗಾರಿಯನ್ನು ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್ 


ಈ ಪ್ರಕರಣವನ್ನು ಪರಿಹರಿಸುವುದರ ಜೊತೆಗೆ ರಾಜ್ಯದ ಇತರೆ ಶಾಲೆಗಳಿಗೂ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನಸ್ಪಂದನ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಿಲ್ಲ.

ಇದನ್ನೂ ಓದಿ: ಸಮುದಾಯ ಭವನದಲ್ಲಿದ್ದ ಸರ್ಕಾರಿ ಶಾಲೆ ಕಟ್ಟಡ ಬೇರೆಡೆಗೆ ಸ್ಥಳಾಂತರ, ಪೋಷಕರು ಬೇಡ ಅನ್ನುತ್ತಿದ್ದಾರೆ ಯಾಕೆ ಗೊತ್ತಾ?

ಜನರ ಅಹವಾಲುಗಳಿಗೆ ಸಕಾರಾತ್ಮಕ ಪರಿಹಾರ ದೊರಕಿಸುವ ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ವಿವಿಧ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಸಾರ್ವಜನಿಕ ಕುಂದು ಕೊರತೆಗಳನ್ನು ಕೂಡ ಪರಿಗಣಿಸಿ ಬಗೆಹರಿಸಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ದನದ ಕೊಟ್ಟಿಗೆಯಂತಾಗಿದೆ ಚಟ್ನಳ್ಳಿ ಸರ್ಕಾರಿ ಶಾಲೆ, ಕಿಡಿಗೇಡಿಗಳು ರಾತ್ರಿ ಎಣ್ಣೆ ಪಾರ್ಟಿ ಮಾಡೋದು ಇಲ್ಲೇ

ಸಾರ್ವಜನಿಕ ಹಿತಾಸಕ್ತಿಯ ಕುಂದು ಕೊರತೆಗಳು ನಿಮ್ಮ ಗಮನಕ್ಕೆ ಬಂದರೆ @osd_cmkarnataka ಗೆ ಟ್ಯಾಗ್ ಮಾಡುವ ಮೂಲಕ ನಮ್ಮ ಕಚೇರಿಯ ಗಮನಕ್ಕೆ ತರಬಹುದಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.