ಅನುದಾನ ಬಿಡುಗಡೆ ಮಾಡದ ಕಾಂಗ್ರೆಸ್ ಸರ್ಕಾರ; ಯಾದಗಿರಿ ನಗರದಲ್ಲಿ ನೀರಿಗಾಗಿ ಹಾಹಾಕಾರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 19, 2024 | 7:08 PM

ಯಾದಗಿರಿ(Yadgiri) ನಗರದಲ್ಲಿಯೂ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಹೌದು, ಜಾಕ್ ವೆಲ್ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಾಮಗಾರಿ ಪೂರ್ಣಗೊಂಡಿದ್ದರೆ ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಶುರುವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅನುಮೋದನೆಗೊಂಡ ಅನುದಾನವನ್ನ ಬಿಡುಗಡೆ ಮಾಡುತ್ತಿಲ್ಲ. ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾರಣಕ್ಕೆ ಯಾದಗಿರಿ ನಗರದ ಜನ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಿಸುವಂತಾಗಿದೆ.

ಅನುದಾನ ಬಿಡುಗಡೆ ಮಾಡದ ಕಾಂಗ್ರೆಸ್ ಸರ್ಕಾರ; ಯಾದಗಿರಿ ನಗರದಲ್ಲಿ ನೀರಿಗಾಗಿ ಹಾಹಾಕಾರ
ಯಾದಗಿರಿಯಲ್ಲಿ ನೀರಿಗಾಗಿ ಹಾಹಾಕಾರ
Follow us on

ಯಾದಗಿರಿ, ಮಾ.19: ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ದಿನೇ ದಿನೇ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಅದರಂತೆ ಯಾದಗಿರಿ(Yadgiri) ನಗರದಲ್ಲಿಯೂ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಹೌದು, ಜಾಕ್ ವೆಲ್ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಾಮಗಾರಿ ಪೂರ್ಣಗೊಂಡಿದ್ದರೆ ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಶುರುವಾಗುತ್ತಿರಲಿಲ್ಲ. 40 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಹಳೆ ಜಾಕ್​ವೆಲ್​ನಿಂದಲೇ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ.

ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2019 ರಲ್ಲಿ 19.90 ಕೋಟಿ ರೂ. ವೆಚ್ಚದಲ್ಲಿ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಬಳಿಯ ಭೀಮಾ ನದಿ ದಡದಲ್ಲಿ ಚಾಕ್ ವೆಲ್ ನಿರ್ಮಾಣ ಮಾಡಲಾಗಿತ್ತು. ಬಳಿಕ ಜಾಕ್ ವೆಲ್​​ನಿಂದ ನಗರಕ್ಕೆ ಪೈಪ್ ಲೈನ್​ಗಾಗಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಮತ್ತೆ ಹೆಚ್ಚುವರಿ 53 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬೊಮ್ಮಾಯಿ ಸರ್ಕಾರ ಪ್ರಸ್ತಾವನೆಗೆ ಅನುಮೋದನೆ ಕೂಡ ನೀಡಿತ್ತು.

ಇದನ್ನೂ ಓದಿ:ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹೇಳಿದ್ದೇನು?

ಅನುದಾನ ಬಿಡುಗಡೆ ಮಾಡ್ತಿಲ್ಲ ಕಾಂಗ್ರೆಸ್​ ಸರ್ಕಾರ

ಆದರೆ, ಈಗ ಬಂದಿರುವ ಕಾಂಗ್ರೆಸ್ ಸರ್ಕಾರ ಅನುಮೋದನೆಗೊಂಡ ಅನುದಾನವನ್ನ ಬಿಡುಗಡೆ ಮಾಡುತ್ತಿಲ್ಲ. ಇದೇ ಕಾರಣಕ್ಕೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾರಣಕ್ಕೆ ಯಾದಗಿರಿ ನಗರದ ಜನ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಿಸುವಂತಾಗಿದೆ. ಇದೀಗ ವಾರಕ್ಕೆ ಎರಡು ಬಾರಿ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಕೂಡಲೇ ಅನುದಾನ ಬಿಡುಗಡೆ ಮಾಡಿ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣಗೊಳಿಸುವಂತೆ ಜನರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ