Water contamination: ಗುರುಮಠಕಲ್ -ಕಲುಷಿತ ನೀರಿಗೆ ಮತ್ತೆ ಮೂವರು ಬಲಿ, ಕುಡಿಯಲು ಯೋಗ್ಯವಲ್ಲದ ನೀರು ಎಂದ ಲ್ಯಾಬ್ ರಿಪೋರ್ಟ್!
ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅನಪುರ ಗ್ರಾಮದ ನಾಲ್ಕು ಕಡೆ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗುತ್ತಿದೆ.
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದೆ. ಇಂದು ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಅನಪುರ ಗ್ರಾಮದ ನಾಲ್ಕು ಕಡೆ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗುತ್ತಿದೆ. ಕುಡಿಯುವ ನೀರಿನ ಸ್ಯಾಂಪಲ್ನಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಕುಡಿಯಲು ಯೋಗ್ಯವಲ್ಲದ ನೀರು ಎಂದು ಡಿಬಿಹೆಚ್ಎಲ್ ಲ್ಯಾಬ್ನಿಂದ ವರದಿ ಬಂದಿದೆ ಎಂದು ಯಾದಗಿರಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಾಜೀದ್ ಮಾಹಿತಿ ನೀಡಿದ್ದಾರೆ.
ಗ್ರಾಮದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ
ಇನ್ನು ಘಟನಾ ಸ್ಥಳಕ್ಕೆ ಯಾದಗಿರಿ ಡಿಸಿ ಸ್ನೇಹಲ್ ಆರ್ ಹಾಗೂ ಸಿಇಒ ಅಮರೇಶ ನಾಯಕ್ ಕೂಡ ಬೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಈಗಾಗಲೇ ನೀರು ಸಂಗ್ರಹದ ಲ್ಯಾಬ್ ರಿಪೋರ್ಟ್ ಸಹ ಅಧಿಕಾರಿಗಳ ಕೈ ಸೇರಿದೆ. ಕುಡಿಯಲು ಯೋಗ್ಯವಲ್ಲದ ನೀರು ಎಂದು ರಿಪೋರ್ಟ್ ಬಂದ ಕೂಡಲೇ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ದೌಡಾಯಿಸಿದ್ದಾರೆ. ಗ್ರಾಮದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸರಬರಾಜು ಆಗಿದ್ದ ಕಾರಣಕ್ಕೆ ಇಡೀ ಗ್ರಾಮದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಕಲುಷಿತ ನೀರು ಸರಬರಾಜು ಆಗ್ತಾ ಇದೆ. ಗ್ರಾಮದಲ್ಲಿರುವ ನೀರಿ ಟ್ಯಾಂಕ್ ನಿಂದ ಪೈಪ್ ಲೈನ್ ಮೂಲಕ ಕುಡಿಯುವ ನೀರು ಸರಬರಾಜು ಆಗುತ್ತೆ. ಇದೆ ಪೈಪ್ ಲೈನ್ ಕೆಲ ಕಡೆ ಒಡೆದು ಹೋಗಿದ್ದು ಚರಂಡಿ ನೀರು ಸೇರಿರುವ ಅನುಮಾನ ಕಾಡ್ತಾಯಿದೆ. ಇದೆ ಪೈಪ್ ಲೈನ್ ಮೂಲಕ ಸರಬರಾಜು ಆಗಿರುವ ನೀರಿನ್ನ ಗ್ರಾಮದ ವಾರ್ಡ್ ನಂ 1 ಮತ್ತು 2 ರ ನಿವಾಸಿಗಳು ಸೇವಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಇದೆ ಕಲುಷಿತ ನೀರು ಸೇವನೆ ಮಾಡಿದ್ದಾರೆ. ಹೀಗಾಗಿ ಎರಡು ವಾರ್ಡ್ ನ 30 ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೆಲವರು ಕೂಡ್ಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನುಳಿದವರು ನಿನ್ನೆ ಆಸ್ಪತ್ಪೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸಮೀಪದಲ್ಲೇ ಇರುವ ಪಕ್ಕದ ತೆಲಂಗಾಣದ ನಾರಾಯಣಪೇಟ ಹಾಗೂ ಮಹಿಬೂಬನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡ 13 ಜನರನ್ನ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಯಾದಗಿರಿ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು
ಕಲುಷಿತ ನೀರು ಸೇವಿಸಿ ನಿನ್ನೆ ಮೃತಪಟ್ಟಿದ್ದ ಮಹಿಳೆ
ಕಲುಷಿತ ನೀರು ಸೇವನೆ ಮಾಡಿ ಆಸ್ವಸ್ಥಗೊಂಡಿದ್ದ ಗ್ರಾಮದ 35 ವರ್ಷದ ಸಾವಿತ್ರಮ್ಮಗೆ ಮಹಿಬೂಬನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ನಿನ್ನೆ ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಸಾವಿನ ಮನೆ ಸೇರಿದ್ದಾರೆ. ಇಂದು ಮತ್ತೆ ಮೂವರು ಪ್ರಾಣ ಬಿಟ್ಟಿದ್ದಾರೆ. ರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಮೂರು ತಂಡಗಳನ್ನ ರಚನೆ ಮಾಡಿ ಗ್ರಾಮಸ್ಥರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತಿದೆ. ಇನ್ನು ಕೂಡ್ಲೆ ವಾಂತಿ ಬೇಧಿ ಪ್ರಕರಣಗಳು ಕಂಡು ಬಂದ್ರೆ ಗ್ರಾಮದ ಸರ್ಕಾರಿ ಹಾಸ್ಟೆಲ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗ್ರಾಮಕ್ಕೆ ಸರಬರಾಜು ಆಗುತ್ತಿದ್ದು ನೀರನ್ನ ಬಂದ್ ಮಾಡಲಾಗಿದೆ. ಪರಸ್ಥಿತಿ ನಿಯಂತ್ರಣಕ್ಕೆ ಬರುವ ತನಕ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪ್ಲಾನ್ ಮಾಡಲಾಗಿದೆ. ಇನ್ನು ಗ್ರಾಮದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ರೆ ಕೆಲಸಕ್ಕೆ ಬರ್ತಾಯಿಲ್ಲ. ಕಳೆದ ಒಂದು ವಾರದ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿದೆ. ಹೀಗಾಗಿ ಗ್ರಾಮದಲ್ಲಿ ಅಶುದ್ಧ ಕುಡಿಯುವ ನೀರು ಸರಬರಾಜು ಆಗ್ತಾಯಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:57 am, Thu, 16 February 23