ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧ ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿರುವುದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದ ವಿದ್ಯಮಾನವೊಂದರಿಂದ ದೃಢಪಟ್ಟಿದೆ. ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಬಗ್ಗೆ ವರದಿಯಾಗಿದೆ. ಹಾಗಾದರೆ ಆ ಗ್ರಾಮದಲ್ಲಿ ನಡೆದಿದ್ದೇನು? ಇಲ್ಲಿದೆ ವಿವರ.

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಸಾಮಾಜಿಕ ಬಹಿಷ್ಕಾರ
ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ
Follow us
ಅಮೀನ್​ ಸಾಬ್​
| Updated By: Ganapathi Sharma

Updated on: Sep 13, 2024 | 9:38 AM

ಯಾದಗಿರಿ, ಸೆಪ್ಟೆಂಬರ್ 13: ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಯಾದಗಿರಿಯಲ್ಲಿ ಇನ್ನೂ ಜೀವಂತ ಇರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ ಹಾಕಿದ ವಿದ್ಯಮಾನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಿಂದ ವರದಿಯಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸವರ್ಣೀಯ ಯುವಕನೊಬ್ಬನ ಮೇಲೆ ದಲಿತ ಕುಟುಂಬ ಪೊಲೀಸರಿಗೆ ದೂರು ನೀಡಿದ್ದೇ ಬಹಿಷ್ಕಾರಕ್ಕೆ ಕಾರಣವಾಗಿದೆ.

ದಲಿತರಿಗೆ ಅಂಗಡಿಗಳಲ್ಲಿ ಸಾಮಗ್ರಿ ನೀಡದಂತೆ ಸವರ್ಣೀಯರು ಕಟ್ಟಪ್ಪಣೆ ಮಾಡಿದ್ದಾರೆ. ಇದರಿಂದಾಗಿ ದಲಿತರ ಮಕ್ಕಳಿಗೆ ಪೆನ್ನು, ನೋಟ್ ಬುಕ್ ಕೂಡ ಸಿಗದ ಪರಿಸ್ಥಿತಿ ದಲಿತ ಕುಟುಂಬಗಳದ್ದಾಗಿದೆ.

ಪ್ರಕರಣದ ಹಿನ್ನೆಲೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಸವರ್ಣೀಯ ಯುವಕ ಅತ್ಯಾಚಾರ ಎಸಗಿದ್ದ. ಪರಿಣಾಮವಾಗಿ 15 ವರ್ಷದ ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಳು. ಪ್ರಕರಣ ಸಂಬಂಧ ಬಾಲಕಿ ಪೋಷಕರು ಯುವಕನ ವಿರುದ್ಧ ಪೊಕ್ಸೋ ಕೇಸ್ ದಾಖಲಿಸಿದ್ದರು. ಅಗಸ್ಟ್ 12 ರಂದು ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಲಾಗಿತ್ತು.

ಇದೇ ಸಂದರ್ಭದಲ್ಲಿ ಸಂಧಾನಕ್ಕೆ ಬರುವಂತೆ ಸವರ್ಣೀಯರಿಂದ ಬಾಲಕಿಯ ಪೋಷಕರಿಗೆ ಕರೆ ಹೋಗಿತ್ತು. ಆದರೆ, ಸಂಧಾನಕ್ಕೆ ಬಾರದೇ ಅವರು ಯುವಕನ ವಿರುದ್ಧ ಪೊಕ್ಸೋ ಕೇಸ್ ದಾಖಲಿಸಿದ್ದರು. ಇದರಿಂದ ಕೋಪಗೊಂಡು ಸವರ್ಣೀಯ ಮುಖಂಡರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಇದನ್ನೂ ಓದಿ: ನೀರಾವರಿ ಇಲಾಖೆಯಲ್ಲಿ ಗೋಲ್ಮಾಲ್​: ನಕಲಿ ಅಂಕಪಟ್ಟಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು!

ದಲಿತರಿಗೆ ದಿನಸಿ ಕಿರಾಣಿ ಹಾಗೂ ದೈನಂದಿನ ವಸ್ತುಗಳನ್ನು ಕೂಡ ನೀಡದಂತೆ ಕಟ್ಟಪ್ಪಣೆ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಪೆನ್, ಪೆನ್ಸಿಲ್ ಸಹ ನೀಡದಂತೆ ಸೂಚನೆ ನೀಡಲಾಗಿದೆ. ಇದೀಗ, ಗ್ರಾಮದ ದಲಿತರಿಗೆ ಬಹಿಷ್ಕಾರ ಹಾಕಿರುವ ಆಡಿಯೋವೊಂದು ಸಹ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ