ಮೆಣಸಿನಕಾಯಿ ಬೆಳೆಗೆ ನೀರು ಬಿಡಲು ಆಗ್ರಹಿಸಿ ರೈತರ ಧರಣಿ; ಆತ್ಮಹತ್ಯೆಯ ಎಚ್ಚರಿಕೆ

ಯಾದಗಿರಿ ಶಹಾಪುರ ತಾಲೂಕಿನ ಭೀಮರಾಯನಗುಡಿ ಬಳಿಯ ಕೆಬಿಜೆಎನ್ಎಲ್ ಕಚೇರಿ ಮುಂದೆ ನೀರು ಬಿಡುವಂತೆ ಆಗ್ರಹಿಸಿ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅದರಂತೆ ಇಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ನೀರು ಬಿಡದೆ ಇದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮೆಣಸಿನಕಾಯಿ ಬೆಳೆಗೆ ನೀರು ಬಿಡಲು ಆಗ್ರಹಿಸಿ ರೈತರ ಧರಣಿ; ಆತ್ಮಹತ್ಯೆಯ ಎಚ್ಚರಿಕೆ
ಶಹಪುರದಲ್ಲಿ ರೈತರ ಪ್ರತಿಭಟನೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 04, 2024 | 5:07 PM

ಯಾದಗಿರಿ, ಜ.04: ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಬಳಿಯ ಕೆಬಿಜೆಎನ್ಎಲ್ ಕಚೇರಿ ಮುಂದೆ ನೀರು ಬಿಡುವಂತೆ ಆಗ್ರಹಿಸಿ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅದರಂತೆ ಇಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ನೀರು ಬಿಡದೆ ಇದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಯಾದಗಿರಿ(Yadagiri) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಬಸವಸಾಗರ ಡ್ಯಾಂನಿಂದ ಎಡದಂಡೆ ಕಾಲುವೆಗೆ ನೀರು ಬಿಡುವಂತೆ 18 ದಿನಗಳಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.

ನೀರು ಹರಿಸಿ ಬೆಳೆದು ನಿಂತ ಮೆಣಸಿನಕಾಯಿ ಬೆಳೆಯನ್ನ ಉಳಿಸಿ ಎಂದು ಮನವಿ

ಕಳೆದ 18 ದಿನಗಳಿಂದ ಧರಣಿ ನಡೆಸುತ್ತಿರುವ ರೈತರು ಕಾಲುವೆ ಮೂಲಕ ನೀರು ಹರಿಸಿ ಬೆಳೆದು ನಿಂತ ಮೆಣಸಿನಕಾಯಿ ಬೆಳೆಯನ್ನ ಉಳಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ರೈತರ ಹೋರಾಟಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂಧಿಸದ ಕಾರಣಕ್ಕೆ ಇಂದು ಕೆಬಿಜೆಎನ್ಎಲ್ ಕಚೇರಿಯ ಕಟ್ಟಡವೇರಿ ಆತ್ಮಹತ್ಯೆಗೆ ಯತ್ನಿಸಲು ರೈತರು ಮುಂದಾಗಿದ್ದರು.

ಇದನ್ನೂ ಓದಿ:ದಾವಣಗೆರೆ: ಭದ್ರಾ ಡ್ಯಾಂನಿಂದ ಭತ್ತದ ಬೆಳೆಗೆ ನೀರು ಹರಿಸುವಂತೆ ಧರಣಿ, ಆತ್ಮಹತ್ಯೆಗೆ ಯತ್ನಿಸಿದ ರೈತ

ಆತ್ಮಹತ್ಯೆಗೆ ಯತ್ನಿಸಿದ ರೈತರಿಗೆ ತಡೆಯಲು ಪೊಲೀಸರು ಹರಸಾಹಸ ಪಡುವಂತಾಗಿತ್ತು. ಇನ್ನು ಮೇಲಿಂದ ಬಿದ್ದು ಸಾಯುತ್ತೆವೆ ಹೀಗಾಗಿ ನಮ್ಗೆ ಇಲ್ಲೇ ಜೆಸಿಬಿಯಿಂದ ತಗ್ಗು ತೋಡಿ ಶವ ಸಂಸ್ಕಾರ ಮಾಡಿ ಎಂದು ಆಕ್ರೋಶ ವ್ಯಕ್ತ ಪಡಿಸಿ ಸ್ಥಳಕ್ಕೆ ರೈತರು ಜೆಸಿಬಿ ಕೂಡ ತರಿಸಿದ್ರು. ಇನ್ನು ಕೆಲವೊತ್ತು ಪೊಲೀಸರ ಜೊತೆ ರೈತರ ವಾಗ್ವಾದ ಕೂಡ ನಡೆಯಿತ್ತು. ವಾಗ್ವಾದದ ವೇಳೆ ಕುಸಿದು ಬಿದ್ದು ರೈತ ಮುಖಂಡನಿಗೆ ಸ್ಥಳದಲ್ಲೇ ಆರೋಗ್ಯ ತಪಾಸಣೆ ನಡೆಸಲಾಯ್ತು. ಕೆಲ ರೈತರು ನೀರು ಬಿಟ್ಟಿಲ್ಲ ಅಂತ ಕಣ್ಣೀರಿಟ್ಟಿರುವ ಘಟನೆ ಕೂಡ ನಡೆಯಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Thu, 4 January 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು