ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್​ನಿಂದ ರೈತರು, ಕಾರ್ಖಾನೆ ಮಾಲೀಕರು, ಕಾರ್ಮಿಕರು ತತ್ತರಿಸಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಭತ್ತದ ಬೆಳೆ ಒಣಗಲು ಆರಂಭವಾಗಿದ್ದು, ಐಪಿಸೆಟ್​ಗೆ ಕೇವಲ 3 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿರುವುದರಿಂದ ಅನ್ನಧಾತರು ಸಂಕಷ್ಟ ಸಿಲುಕಿದ್ದಾರೆ.

ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on:Oct 20, 2023 | 6:48 PM

ಯಾದಗಿರಿ, ಅ.20: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್​ನಿಂದ ರೈತರು, ಕಾರ್ಖಾನೆ ಮಾಲೀಕರು, ಕಾರ್ಮಿಕರು ತತ್ತರಿಸಿದ್ದಾರೆ. ಯಾದಗಿರಿ (Yadgir) ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಭತ್ತದ ಬೆಳೆ ಒಣಗಲು ಆರಂಭವಾಗಿದ್ದು, ಐಪಿಸೆಟ್​ಗೆ ಕೇವಲ 3 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿರುವುದರಿಂದ ಅನ್ನಧಾತರು ಸಂಕಷ್ಟ ಸಿಲುಕಿದ್ದಾರೆ.

ಗುರುಮಠಕಲ್ ತಾಲೂಕಿನ ಕಾಕಲವಾರ್ ಗ್ರಾಮದ ರೈತ ಚನ್ನಪ್ಪ ಅವರು ಜಮೀನಿನಲ್ಲೇ ನಿಂತು ನೋವು ತೋಡಿಕೊಂಡಿದ್ದಾರೆ. ರೈತರ ಗೋಳು ಯಾರಿಗೆ ಅರ್ಥವಾಗುತ್ತದೆ? ಆರು ಗಂಟೆ ವಿದ್ಯುತ್ ಕೊಟ್ಟು ವೊಲ್ಟೇಜ್ ಸಮಸ್ಯೆ ಮಾಡುತ್ತಿದ್ದಾರೆ.

ಇದರಿಂದಾಗಿ ಬೆಳೆಗೆ ನೀರು ಹರಿಸಲು ಆಗುತ್ತಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ರೈತ ಚನ್ನಪ್ಪ ಅವರು ಆಕ್ರೋಶ ಹೊರಹಾಕಿದ್ದಾರೆ. ಬರಗಾಲದಿಂದ ತತ್ತರಿಸಿ ರೈತರು ಸಾಯುತ್ತಿದ್ದಾರೆ. ರೈತರ ಗೋಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಯಾರಿಗೆ ಅರ್ಥವಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ, ರೈತರು ಬದುಕು ನಡೆಸಲು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲೋಡ್ ಶೆಡ್ಡಿಂಗ್ ನಿಂದ ಕಂಗಾಲಾದ ಪೀಣ್ಯಾ ಇಂಡಸ್ಟ್ರಿಯಲ್ ಏರಿಯಾ, ಕೋಟ್ಯಾಂತರ ರೂ. ಲಾಸ್

ಒಂದೆಡೆ ಸರಿಯಾದ ಮಳೆ ಇಲ್ಲ. ಮತ್ತೊಂದೆಡೆ ಹಲವು ಜಿಲ್ಲೆಗಳಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಈ ನಡುವೆ ರಾಜ್ಯದ ಉದ್ದಗಲಕ್ಕೂ ಅಘೋಷಿತ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಆರಂಭದಲ್ಲಿ ಸೈಲೆಂಟ್ ಆಗಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಕೊನೆಗೆ ನಿಜ ಒಪ್ಪಿಕೊಂಡಿದ್ದಾರೆ. ರಾಜ್ಯವನ್ನು ಕತ್ತಲೆಗೆ ದೂಡಿ ಸಚಿವ ಕೆಜೆ ಜಾರ್ಜ್​​​​ ಕಾಣೆಯಾಗಿದ್ದಾರೆ ಎಂದು ವಿಪಕ್ಷ ಬಿಜೆಪಿ ಟೀಕಿಸಿತ್ತು.

ಈ ನಡುವೆ ಸಚಿವ ಕೆ.ಜೆ.ಜಾರ್ಜ್‌ ಅವರು ದೆಹಲಿಯಲ್ಲಿ ಕೇಂದ್ರ ಇಂಧನ ಸಚಿವ ಆರ್‌.ಕೆ.ಸಿಂಗ್​ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಹೆಚ್ಚುವರಿ ಅಗತ್ಯ ವಿದ್ಯುತ್‌ ಪೂರೈಸುವಂತೆ ಮನವಿ ಮಾಡಿದ್ದರು. ಒಟ್ಟಾರೆಯಾಗಿ ಅಘೋಷಿತ ಲೋಡ್ ಶೆಡ್ಡಿಂಗ್​ನಿಂದಾಗಿ ಕಾರ್ಖಾನೆಗಳು, ರೈತರು, ಕಾರ್ಮಿಕರು, ನೇಕಾರರು ತತ್ತರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Fri, 20 October 23