ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಮತ್ತೆ7 ಜನರ ಬಂಧನ

ಅಕ್ಟೋಬರ್​ 28 ರಂದು ಕೆಇಎ ನಡೆಸಿದ್ದ ಎಫಡಿಎ ಪರೀಕ್ಷೆಯನ್ನು ಇಬ್ಬರು ಅಭ್ಯರ್ಥಿಗಳು ಬ್ಲೂಟೂತ್ ಡಿವೈಸ್ ಬಳಸಿ ಬರೆಯುತ್ತಿದ್ದರು. ಈ ವೇಳೆ ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಸಂಬಂಧ ನಿನ್ನೆ (ಅ.29) ಪೊಲೀಸರು ಕಲಬುರಗಿಯಲ್ಲಿ ಒಂಬುತ್ತು ಜನರನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸಿದ್ದರು.

ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಮತ್ತೆ7 ಜನರ ಬಂಧನ
ಯಾದಗಿರಿ ಪೊಲೀಸ್​ ಠಾಣೆ
Follow us
| Updated By: ವಿವೇಕ ಬಿರಾದಾರ

Updated on:Oct 30, 2023 | 6:50 PM

ಯಾದಗಿರಿ ಅ.30: ಕೆಇಎ (KEA) ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಏಳು ಜನ ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 16ಕ್ಕೆ ಏರಿದೆ.  ಪೊಲೀಸರು ರವಿವಾರ ಒಂಬತ್ತು ಜನ ಆರೋಪಿಗಳನ್ನು ಬಂಧಿಸಿದ್ದರು. ಅಕ್ಟೋಬರ್​ 28 ರಂದು ಕೆಇಎ ನಡೆಸಿದ್ದ ಎಫಡಿಎ ಪರೀಕ್ಷೆಯನ್ನು ಇಬ್ಬರು ಅಭ್ಯರ್ಥಿಗಳು ಬ್ಲೂಟೂತ್ ಡಿವೈಸ್ ಬಳಸಿ ಬರೆಯುತ್ತಿದ್ದರು. ಈ ವೇಳೆ ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಸಂಬಂಧ ನಿನ್ನೆ (ಅ.29) ಪೊಲೀಸರು ಕಲಬುರಗಿಯಲ್ಲಿ ಒಂಬುತ್ತು ಜನರನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ ಪ್ರಕರಣದಲ್ಲಿ ಭಾಗಿಯಾಗಿದ್ದ ಏಳು ಜನರ ಹೆಸರನ್ನು ಆರೋಪಿಗಳು ಬಾಯಿಬಿಟ್ಟಿದ್ದರು. ಈ ಒಂಬತ್ತು ಆರೋಪಿಗಳ ವಿರುದ್ದ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರ ವಿಚಾರಣೆಯ ಮಾಹಿತಿ ಆಧಾರದ ಮೇಲೆ ಇಂದು ಮತ್ತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಏಳು ಆರೋಪಿಗಳ ಸ್ಥಳ ಮಹಜರು ಹಾಗೂ ಮೆಡಿಕಲ್ ಟೆಸ್ಟ್ ಮಾಡಿಸಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಏಳು ಜನರಲ್ಲಿ ಇಬ್ಬರು‌ ಪರೀಕ್ಷಾರ್ಥಿಗಳು ಐದು ಜನ ಹೊರಗಿದ್ದು ಸಹಾಯ ಮಾಡಿದವರು.

ಕೆಇಎ ಪರೀಕ್ಷೆ ಅಕ್ರಮ

ಎಫ್​​ಡಿಎ ಹುದ್ದೆಗಳಿಗೆ ನಡೆದ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ್ದ ಆರೋಪದ ಮೇಲೆ ಅಫಜಲಪುರ ಪೊಲೀಸ್​ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲೂ ಪಿಎಸ್​ಐ ಅಕ್ರಮದ ಕಿಂಗ್​​​ಪಿನ್​ ಆರ್​​.ಡಿ.ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಸಂಚುಕೋರನೇ ಎಫ್‌ಡಿಎ ಅಕ್ರಮಕ್ಕೂ ಕಿಂಗ್‌ಪಿನ್‌!

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾದ ಬಾಬು ಚಾಂದ್ ಶೇಖ್, ಸಂತೋಷ ಯಾಳಗಿ, ಆಕಾಶ್ ಬ್ಲೂಟುತ್ ಡಿವೈಸ್ ಬಳಸಿ ನಕಲು ಮಾಡುತ್ತಿದ್ದರು. ಈ ವೇಳೆ ಪರೀಕ್ಷಾ ಕೊಠಡಿ ಮೇಲ್ವಿಚಾರಕ ಇವರನ್ನು ರೆಡ್​​​ ಹ್ಯಾಂಡ್​ ಆಗಿ ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದರು. ಅಲ್ಲದೆ ಇವರಿಗೆ ಸಹಾಯ ಮಾಡಿದ್ದ ಹಾಗೂ ಬ್ಲೂಟುತ್ ಡಿವೈಸ್ ನೀಡಿದ್ದ ಆರ್​.ಡಿ ಪಾಟೀಲ್ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು.

ಯಾದಗಿರಿಯಲ್ಲೂ ಅಕ್ರಮ

ಅಕ್ಟೋಬರ್​​ 28 ರಂದು ರಾಜ್ಯಾದ್ಯಂತ ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಯಾದಗಿರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿರುವುದಾಗಿ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ಪೊಲೀಸರು ಅಭ್ಯರ್ಥಿಯನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:44 pm, Mon, 30 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ