ಯಾದಗಿರಿ: ಪ್ರಚೋದನಾಕಾರಿ ಹೇಳಿಕೆ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್​ಐಆರ್

ಮಂಡ್ಯದ ನಾಗಮಂಗಲ ಗಲಭೆ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ನಡೆದ ಕಲ್ಲುತೂರಾಟ ಪ್ರಕರಣಗಳನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾದಗಿರಿಯ ಶಹಾಪುರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಯಾದಗಿರಿ: ಪ್ರಚೋದನಾಕಾರಿ ಹೇಳಿಕೆ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್​ಐಆರ್
ಪ್ರತಾಪ್ ಸಿಂಹ
Follow us
ಅಮೀನ್​ ಸಾಬ್​
| Updated By: Ganapathi Sharma

Updated on:Sep 25, 2024 | 10:02 AM

ಯಾದಗಿರಿ, ಸೆಪ್ಟೆಂಬರ್ 25: ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾದಗಿರಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಹಾಪುರ ಗಣೇಶ ವಿಸರ್ಜನಾ ಶೋಭಾ ಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಇದೇ 21ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾ ಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗಿಯಾಗಿ ಭಾಷಣ ಮಾಡಿದ್ದರು. ಆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಅವರ ಮೇಲಿದೆ.

ಏನು ಹೇಳಿದ್ದರು ಪ್ರತಾಪ್ ಸಿಂಹ?

ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರತಾಪ್ ಸಿಂಹ, ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲುತೂರಾಟ ಮಾಡುವ ಪ್ರವೃತ್ತಿ ಕಾಣಿಸುತ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಮಾತ್ರ ಯಾಕೆ ಬರುತ್ತದೆ? ಹಿಂದುಗಳು ಎಲ್ಲರೂ ಕೈಯಲ್ಲಿ ಒಂದೊಂದು ಕಲ್ಲು ಹಿಡಿದುಕೊಂಡರೆ ನಿಮ್ಮ (ಮುಸ್ಲಿಮರನ್ನು ಉದ್ದೇಶಿಸಿ) ಕಥೆ ಏನು ಆಗುತ್ತದೆ ಗೊತ್ತೇ ಎಂದು ಪ್ರಶ್ನಿಸಿದ್ದರು.

ಪರಮಾಣು ಬಾಂಬ್ ಸಿದ್ಧಪಡಿಸುವುದನ್ನು ಕಂಡುಹಿಡಿದ ಹಿಂದುಗಳಿಗೆ ಪೆಟ್ರೋಲ್ ಬಾಂಬ್ ತಯಾರಿಸಲು ಬರುವುದಿಲ್ಲವೇ? ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣಮಾತ್ರದಲ್ಲಿ ಮಾಡಲು ಹಿಂದುಗಳಿಗೆ ಬರುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದ್ದರು.

ಪ್ರತಾಪ್ ಸಿಂಹ, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡುವಂತಹ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಮರು ಆರೋಪಿಸಿದ್ದರು. ಪ್ರತಾಪ್ ಸಿಂಹ ಗಲಭೆಗೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಮರು ಆರೋಪಿಸಿದ್ದರು. ಈ ಸಂಬಂಧ ಅವರ ವಿರುದ್ಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಮೆರವಣಿಗೆ ತೆರಳುವಾಗ ಮುಸಲ್ಮಾನರಂತೆ ಸನ್ನದ್ಧರಾಗಿ ಹೋಗುವಂತೆ ಕರೆ

ಶಹಾಪುರ ಪಿಎಸ್ಐ ಡಿವಿ ನಾಯಕ ಅವರು ಪ್ರತಾಪ್ ಸಿಂಹ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಂಹ ಜೊತೆಗೆ ಇತರ ಇವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಿಎನ್ಎಸ್ ಕಾಯ್ದೆಯ ಸೆಕ್ಷನ್ 299, 192 ಅಡಿ ಕೇಸ್ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:55 am, Wed, 25 September 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ