ಹೃದಯಾಘಾತದಿಂದ JDS​ ಮಾಜಿ ಶಾಸಕ ನಾಗನಗೌಡ ಕಂದಕೂರ್ ನಿಧನ

| Updated By: ಆಯೇಷಾ ಬಾನು

Updated on: Jan 28, 2024 | 1:01 PM

2018ರಲ್ಲಿ ಗುರುಮಠಕಲ್‌ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿದ್ದ ಜೆಡಿಎಸ್​ನ ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಆಸ್ಪತ್ರೆ ಬಳಿ ಸಂಬಂಧಿಕರು ಹಾಗೂ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದಾರೆ.

ಹೃದಯಾಘಾತದಿಂದ JDS​ ಮಾಜಿ ಶಾಸಕ ನಾಗನಗೌಡ ಕಂದಕೂರ್ ನಿಧನ
JDS​ ಮಾಜಿ ಶಾಸಕ ನಾಗನಗೌಡ ಕಂದಕೂರ್
Follow us on

ಯಾದಗಿರಿ, ಜ.28: ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಕ್ಷೇತ್ರದ ಜೆಡಿಎಸ್​ನ ಮಾಜಿ ಶಾಸಕ ನಾಗನಗೌಡ ಕಂದಕೂರ್ (Nagana Gowda Kandakur) ಅವರು ಹೃದಯಾಘಾತದಿಂದ (Heart Attack) ವಿಧಿವಶರಾಗಿದ್ದಾರೆ. ಬೆಳಗ್ಗೆ ನಾಗನಗೌಡ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಬೆಳಗ್ಗೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2018ರಲ್ಲಿ ಗುರುಮಠಕಲ್‌ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿದ್ದರು. ಆಸ್ಪತ್ರೆ ಬಳಿ ಸಂಬಂಧಿಕರು ಹಾಗೂ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದಾರೆ.

ನಾಗನಗೌಡ ಕಂದಕೂರು ಅವರಿಗೆ 79 ವರ್ಷ ವಯಸ್ಸು ಆಗಿತ್ತು. ಹಿರಿಯ ರಾಜಕಾರಣಿ. JDS ಪಕ್ಷದಲ್ಲಿ ಗುರುತಿಸಿಕೊಂಡು ಈ ಭಾಗದ ಜನರ ಸೇವೆ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಇನ್ನು ನಾಗನಗೌಡ ಕಂದಕೂರು ಅವರು ಓರ್ವ ಕೃಷಿಕ ಮತ್ತು ಸಮಾಜ ಸೇವೆಯಲ್ಲಿ ಜೀವನ ಕಳೆದವರು. ನಂತರ ರಾಜಕೀಯಕ್ಕೆ ಧುಮುಕಿ ಶಾಸಕರಾಗಿ ಆಯ್ಕೆಯಾಗಿದ್ದರು.

ಶರಣಗೌಡ ಕಂದಕೂರಗೆ ಟಿಕೆಟ್

2023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಿತೀಶ್​ ಕುಮಾರ್ ಹೇಳಿದ್ದೇನು?

‘ಶಕ್ತಿ’..141 ಕೋಟಿ ಮಹಿಳೆಯರು ಸಂಚಾರ’

ಶಕ್ತಿ ಯೋಜನೆಯಿಂದ ಈವರೆಗೆ 141 ಕೋಟಿ ಮಹಿಳೆಯರು ಸಂಚಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ರು. ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮಾತನಾಡಿದ ಸಿಎಂ, ಜೂನ್ 11ರಿಂದ ಈವರೆಗೆ 141 ಕೋಟಿ ಮಹಿಳೆಯರಿಗೆ ಹಣ ಉಳಿತಾಯವಾಗಿದೆ ಅಂತಂದ್ರು. ಅಲ್ದೇ, ಗೃಹಲಕ್ಷ್ಮೀ ಯೋಜನೆಯಲ್ಲಿ ಯಜಮಾನಿಗೆ 2 ಸಾವಿರ ಹಣ ನೀಡಲಾಗ್ತಿದೆ. ಯುವನಿಧಿ ಯೋಜನೆಯ ಹಣವೂ ಬರ್ತಿದೆ. ಇಂತಹ ಯೋಜನೆಗಳನ್ನು ಯಾವ ಸರ್ಕಾರವೂ ಜಾರಿ ಮಾಡಿಲ್ಲ ಎಂದು ತಿರುಗೇಟು ನೀಡಿದ್ರು.

ಕಿಡ್ನಿ ವೈಫಲ್ಯದಿಂದ ರೋಗಿಗಳಿಗೆ ಸಿಹಿಸುದ್ದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ 800 ಏಕ ಬಳಕೆ ಡಯಾ ಲೈಸರ್ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ರು. ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 20 ಡಯಾಲೈಸರ್ ಯಂತ್ರಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ರು. ಇದ್ರಿಂದ ಪ್ರತಿ ದಿನ 72 ರೋಗಿಗಳಿಗೆ ಡಯಾಲಿಸಿಸ್ ಸೇವೆ ಒದಗಿಸುವ ಸಾಮರ್ಥ್ಯ ಹೊಂದಲಿದೆ. ಉಚಿತ ಡಯಾಲಿಸಿಸ್​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:47 pm, Sun, 28 January 24