ಯಾದಗಿರಿ; ನರೇಗಾದಡಿ ಕೂಲಿ ಕೆಲಸ ಕೇಳಿದ ಮಹಿಳೆ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರಿಂದ ಹಲ್ಲೆ

| Updated By: ಆಯೇಷಾ ಬಾನು

Updated on: Oct 10, 2023 | 12:30 PM

ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಗ್ರಾಮ ಪಂಚಾಯತ್​ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಕೇಳಲು ಮಹಿಳೆ ಕಚೇರಿಗೆ ಬಂದಿದ್ದರು. ಈ ವೇಳೆ ಪದ್ಮಾವತಿ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಪ್ಪ ಅಲ್ಲಿಪುರ, ಗ್ರಾಮ ಪಂಚಾಯತ್ ಸದಸ್ಯ ಶಿವಪ್ಪ ಹಾಗೂ ಗ್ರಾಮ ಪಂಚಾಯತ್ ಸದಸ್ಯೆಯ ಪುತ್ರ ನಿಂಗಪ್ಪ ಎಂಬ ಮೂವರ ವಿರುದ್ಧ ದೂರು ದಾಖಲಾಗಿದೆ.

ಯಾದಗಿರಿ; ನರೇಗಾದಡಿ ಕೂಲಿ ಕೆಲಸ ಕೇಳಿದ ಮಹಿಳೆ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರಿಂದ ಹಲ್ಲೆ
ಹಲ್ಲೆಗೊಳಗಾದ ಮಹಿಳೆ
Follow us on

ಯಾದಗಿರಿ, ಅ.10: ನರೇಗಾದಡಿ ಕೂಲಿ ಕೆಲಸ ಕೇಳಲು ಹೋದ ಮಹಿಳೆ ಮೇಲೆ ಹಲ್ಲೆ (Assault) ಮಾಡಲಾಗಿರುವ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಪ್ಪ ಅಲ್ಲಿಪುರ ಎಂಬಾತ ಮಹಿಳೆ (Woman) ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಗ್ರಾಮ ಪಂಚಾಯತ್​ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಕೇಳಲು ಮಹಿಳೆ ಕಚೇರಿಗೆ ಬಂದಿದ್ದರು. ಈ ವೇಳೆ ಪದ್ಮಾವತಿ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಪ್ಪ ಅಲ್ಲಿಪುರ, ಗ್ರಾಮ ಪಂಚಾಯತ್ ಸದಸ್ಯ ಶಿವಪ್ಪ ಹಾಗೂ ಗ್ರಾಮ ಪಂಚಾಯತ್ ಸದಸ್ಯೆಯ ಪುತ್ರ ನಿಂಗಪ್ಪ ಎಂಬ ಮೂವರಿಂದ ಪದ್ಮಾವತಿ ಮೇಲೆ ಹಲ್ಲೆ ನಡೆದಿದೆ ಹಾಗೂ ಜೀವ ಬೇದರಿಕೆ ಹಾಕಲಾಗಿದೆ ಎಂದು ದೂರು ದಾಖಲಾಗಿದೆ. ಹಲ್ಲೆಗೊಳಗಾದ ಪದ್ಮಾವತಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೇಮಳಖೇಡದಲ್ಲಿ ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಗ್ರಾಮದ ಗಣೇಶ್(10) ಹಾಗೂ ಸಾಯಿನಾಥ್(15) ಮೃತ ದುರ್ದೈವಿಗಳು. ಹೊಂಡದಿಂದ ನೀರು ತರಲು ಹೋಗಿದ್ದಾಗ ನೀರಿನ ಹೊಂಡದಲ್ಲಿ ಮುಳುಗಿ ದುರ್ಘಟನೆ ಸಂಭವಿಸಿದೆ. ಮೊದಲಿಗೆ ಓರ್ವ ಬಾಲಕ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಆಗ ರಕ್ಷಣೆಗೆ ಹೋಗಿದ್ದ ಮತ್ತೊಬ್ಬ ಬಾಲಕ ಕೂಡ ಪ್ರಾಣ ಕಳೆದುಕೊಂಡಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹೊಂಡದಿಂದ ಬಾಲಕರ ಶವ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಬೇಮಳಖೇಡ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಬಸ್​ ಸ್ಟ್ಯಾಂಡ್​ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ನೇಣು ಬಿಗಿದುಕೊಂಡು ಡಿಎಆರ್​ ಕಾನ್ಸ್​ಟೇಬಲ್ ಆತ್ಮಹತ್ಯೆ

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಆನೇಕಲ್ ತಾಂಡಾ ನಿವಾಸಿ ಪ್ರಕಾಶ್ ನಾಯ್ಕ್(25) ಬಳ್ಳಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು 1 ವರ್ಷದ ಹಿಂದೆ‌ಯಷ್ಟೇ ಡಿಎಆರ್​ ಕಾನ್ಸ್​ಟೇಬಲ್ ಆಗಿ ಕೆಲಸಕ್ಕೆ ಸೇರಿದ್ದರು. ಡಿಎಆರ್ ಹೆಡ್​ ಕ್ವಾರ್ಟ​ರ್ಸ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರ ಬ್ಯಾಚ್​ನಲ್ಲಿ DAR ಪೊಲೀಸ್ ಆಗಿ ನೇಮಕವಾಗಿದ್ದ ಮೃತ ಪ್ರಕಾಶ್ ಅವರಿಗೆ ಸಿಸಿಟಿ ತರಬೇತಿಗೆ ಬೆಂಗಳೂರಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದರು. ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ