ಗುರುಮಠಕಲ್: ವಸತಿ ನಿಲಯದಲ್ಲಿ ಊಟ ಸೇವಿಸಿ 28 ವಿದ್ಯಾರ್ಥಿನಿಯರು ಅಸ್ವಸ್ಥ, ಮೂವರ ಸ್ಥಿತಿ ಗಂಭೀರ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ 28 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್​​​ಗೆ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುರುಮಠಕಲ್: ವಸತಿ ನಿಲಯದಲ್ಲಿ ಊಟ ಸೇವಿಸಿ 28 ವಿದ್ಯಾರ್ಥಿನಿಯರು ಅಸ್ವಸ್ಥ, ಮೂವರ ಸ್ಥಿತಿ ಗಂಭೀರ
ವಿದ್ಯಾರ್ಥಿನಿಯರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Updated By: Ganapathi Sharma

Updated on: Dec 11, 2025 | 1:23 PM

ಯಾದಗಿರಿ, ಡಿಸೆಂಬರ್ 11: ಯಾದಗಿರಿ (Yadgir) ಜಿಲ್ಲೆಯ ಗುರುಮಠಕಲ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‌ನಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ 28 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಊಟ ಸೇವಿಸಿದ ಕೆಲವೇ ಗಂಟೆಗಳಲ್ಲೇ ವಿದ್ಯಾರ್ಥಿನಿಯರಿಗೆ ಅತಿಸಾರ, ವಾಂತಿ ಹಾಗೂ ತಲೆಸುತ್ತು ಲಕ್ಷಣಗಳು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಅಸ್ವಸಥರಾಗಿರುವ ಮೂವರನ್ನು ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ವಸತಿ ನಿಲಯದ ಅಡುಗೆಮನೆ, ಬಳಸಿದ ಸಾಮಗ್ರಿಗಳನ್ನು ಪರಿಶೀಲಿಸಿದ ಅಧಿಕಾರಿಗಳು ಫುಡ್ ಪಾಯಿಸನಿಂಗ್ ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಜಿಲ್ಲಾಧಿಕಾರಿ ಮಾತನಾಡಿ, ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿಯ ಬಗ್ಗೆ ನಿಗಾ ವಹಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಹೊಲಕ್ಕೆ ದೃಷ್ಟಿಯಾಗಬಾರದೆಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Thu, 11 December 25