ಕೋಮು ಪ್ರಚೋದನೆ ಭಾಷಣ ಪ್ರಕರಣ: ಆಂದೋಲ ಸಿದ್ದಲಿಂಗ ಸ್ವಾಮಿ ದೋಷಿ ಎಂದ ಕೋರ್ಟ್

TV9 Digital Desk

| Edited By: ರಮೇಶ್ ಬಿ. ಜವಳಗೇರಾ

Updated on:Mar 17, 2023 | 11:54 AM

ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯದ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ.

ಕೋಮು ಪ್ರಚೋದನೆ ಭಾಷಣ ಪ್ರಕರಣ: ಆಂದೋಲ ಸಿದ್ದಲಿಂಗ ಸ್ವಾಮಿ ದೋಷಿ ಎಂದ ಕೋರ್ಟ್
ಸಿದ್ದಲಿಂಗ ಸ್ವಾಮಿ, ಶ್ರೀರಾಮಸೇನೆ ರಾಜ್ಯಾಧ್ಯಕ್ಷ

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ(Karnataka Sri Ram Sene president Siddalinga Swamy) ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ. ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ ಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಇಂದು (ಮಾರ್ಚ್ 17) ಯಾದಗಿರಿಯ ಸಿವಿಲ್ ಕೋರ್ಟ್(Yadgir civil court )ನ್ಯಾಯಾಧೀಶ ರವೀಂದ್ರ ಹೊನೋಲೆ​ ಅವರು, ಸಿದ್ದಲಿಂಗ ಸ್ವಾಮಿಯನ್ನು ದೋಷಿ ಎಂದು ತೀರ್ಪು ನೀಡಿದರು. ಅಲ್ಲದೇ ದೋಷಿಯ ಹಿನ್ನಲೆಯ ವರದಿ ನೀಡುವಂತೆ ಪ್ರೊಬೇಷನರಿ ಅಧಿಕಾರಿಗಳಿಗೆ ತಿಳಿಸಿದ್ದು, ವರದಿ ಮೇಲೆ ಶಿಕ್ಷೆಯ ಪ್ರಮಾಣ ನಿರ್ಧಾರವಾಗಲಿದೆ.

2015ರ ಜನವರಿ 2ರಂದು ಯಾದಗಿರಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ್ದರು. ಈ ಬಗ್ಗೆ ಯಾದಗಿರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿಸಿಕೊಂಡಿದ್ದ ಯಾದಗಿರಿ ನಗರ ಠಾಣೆ ಪೊಲೀಸರು ಐಪಿಸಿ ಕಲಂ 153 (ಎ), 295ರ ಅಡಿಯಲ್ಲಿ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada