ಸಿವಿಲ್ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆಯಲ್ಲಿ ಹೈ ಅಲರ್ಟ್; ENT ತಜ್ಞರಿಂದ ಅಭ್ಯರ್ಥಿಗಳ ಕಿವಿ ತಪಾಸಣೆ
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಅಕ್ರಮ ನಡೆಸಲಾಗಿತ್ತು. ಹೀಗಾಗಿ ಇಂದಿನ ಸಿವಿಲ್ ಪೇದೆ ಪರೀಕ್ಷೆಗೆ ENT ತಜ್ಞರಿಂದ ಕಿವಿ ತಪಾಸಣೆ ಮಾಡಿಸಲಾಗುತ್ತಿದೆ. ಯಾದಗಿರಿ ಪರೀಕ್ಷಾ ಕೇಂದ್ರದ ಎದುರು ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ. ಪರೀಕ್ಷಾ ಕೇಂದ್ರದ ಹೊರಗೆ ಅಭ್ಯರ್ಥಿಗಳನ್ನ ತೀವ್ರ ತಪಾಸಣೆ ನಡೆಸಿದ ಬಳಿಕವೇ ಒಳಗೆ ಬಿಡಲಾಗುತ್ತಿದೆ.
ಯಾದಗಿರಿ, ಡಿ.10: ಇಂದು ರಾಜ್ಯ ಸಿವಿಲ್ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ (State Civil Police Constable Recruitment Exam)ನಡೆಯುತ್ತಿದ್ದು ಯಾದಗಿರಿ ಪರೀಕ್ಷಾ ಕೇಂದ್ರದ ಎದುರು ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ. ಕೆಇಎ ಪರೀಕ್ಷಾ ಅಕ್ರಮದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪ್ರತಿಯೊಂದು ಪರೀಕ್ಷಾ ಕೇಂದ್ರದ ಎದುರು ಬಯೋಮೆಟ್ರಿಕ್ ಪರಿಶೀಲನಾ ಯಂತ್ರ ಅಳವಡಿಸಿದೆ. ಪರೀಕ್ಷಾ ಕೇಂದ್ರದ ಹೊರಗೆ ಅಭ್ಯರ್ಥಿಗಳನ್ನ ತೀವ್ರ ತಪಾಸಣೆ ನಡೆಸಿದ ಬಳಿಕವೇ ಒಳಗೆ ಬಿಡಲಾಗುತ್ತಿದೆ. ಮೆಟಲ್ ಡಿಟೆಕ್ಟರ್ ಮೂಲಕ ಅಭ್ಯರ್ಥಿಗಳ ಪರಿಶೀಲನೆ ನಡೆಸಲಾಗುತ್ತಿದೆ.
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಅಕ್ರಮ ನಡೆಸಲಾಗಿತ್ತು. ಹೀಗಾಗಿ ಇಂದಿನ ಸಿವಿಲ್ ಪೇದೆ ಪರೀಕ್ಷೆಗೆ ENT ತಜ್ಞರಿಂದ ಕಿವಿ ತಪಾಸಣೆ ಮಾಡಿಸಲಾಗುತ್ತಿದೆ. ಪ್ರತೀ ಕೊಠಡಿಗೆ 20 ಅಭ್ಯರ್ಥಿಗಳು ಕುಳಿತುಕೊಳ್ಳಲು ಮಾತ್ರ ಅವಕಾಶ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ 2,840 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಂದೊಂದು ಪರೀಕ್ಷಾ ಕೇಂದ್ರಕ್ಕೆ ಸಿಪಿಐ, ಪಿಎಸ್ಐ ಸೇರಿ 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಸ್ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?
ಕೆಪಿಎಸ್‌ಸಿ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ
ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ವಿವಿಧ ಅಧಿಸೂಚನೆಗಳಲ್ಲಿ ವಿವಿಧ ಗ್ರೂಪ್ ಸಿ ಹುದ್ದೆಗಳ ಲಿಖಿತ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 242 (RPC) ಮತ್ತು ಕಿರಿಯ ಲೆಕ್ಕ ಸಹಾಯಕರು 67 (RPC), ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು 47 (RPC) ಮತ್ತು ಸಹಕಾರ ಸಂಘಗಳ ನಿರೀಕ್ಷಕರು 53 (ಹೈದ್ರಾಬಾದ್ ಕರ್ನಾಟಕ) ಹುದ್ದೆಗಳಿಗೆ ದಿನಾಂಕ 16-12-2023ರಿಂದ ಪರೀಕ್ಷೆ ನಡೆಯಲಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ