ಯಾದಗಿರಿ: ಚಿಕ್ಕನಹಳ್ಳಿಯಲ್ಲಿ ಕಳೆದ 3 ದಿನಗಳಲ್ಲಿ 36 ಜನರಿಗೆ‌ ವಾಂತಿ ಭೇದಿ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುವ ಘಟನೆಗಳು ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿದೆ. ಇತ್ತೀ​ಚೆ​ಗೆ ಗುರುಮಠಕಲ್‌ ತಾಲೂಕಿನ ಅನಪುರ, ಶಿವಪುರ, ಮಾರ​ಲ​ಭಾವಿ, ಗಾಜರಕೋಟ್‌ನಲ್ಲಿ ಕಲುಷಿತ ನೀರು ಸೇವನೆಯಿಂದಾದ ಅನಾಹುತಗಳು ಮಾಸುವ ಮುನ್ನವೇ, ಇದೀಗ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕಳೆದ ಮೂರು‌‌ ದಿನಗಳಲ್ಲಿ 25 ಜನ ಶಾಲಾ ಮಕ್ಕಳು ಸೇರಿದಂತೆ 36 ಜನರಲ್ಲಿ‌ ವಾಂತಿ, ಭೇದಿ ಕಾಣಿಸಿಕೊಂಡಿದೆ.

ಯಾದಗಿರಿ: ಚಿಕ್ಕನಹಳ್ಳಿಯಲ್ಲಿ ಕಳೆದ 3 ದಿನಗಳಲ್ಲಿ 36 ಜನರಿಗೆ‌ ವಾಂತಿ ಭೇದಿ
ಆರೋಗ್ಯ ವಿಚಾರಿಸಿದ ಶಾಸಕ ರಾಜಾ ವೆಂಕಟಪ್ಪ ನಾಯಕ
Follow us
| Updated By: ವಿವೇಕ ಬಿರಾದಾರ

Updated on: Aug 29, 2023 | 10:18 AM

ಯಾದಗಿರಿ: ಜಿಲ್ಲೆಯ ಸುರಪುರ (Surapur) ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕಲುಷಿತ ನೀರು (Commuted Water) ಸೇವಿಸಿ ಜೊತೆಗೆ ಫುಡ್ ಪಾಯಿಸನ್​​ನಿಂದ ಕಳೆದ ಮೂರು‌‌ ದಿನಗಳಲ್ಲಿ 25 ಜನ ಶಾಲಾ ಮಕ್ಕಳು ಸೇರಿದಂತೆ 36 ಜನರಲ್ಲಿ‌ ವಾಂತಿ, ಭೇದಿ ಕಾಣಿಸಿಕೊಂಡಿದೆ. ಐವರು ವಿದ್ಯಾರ್ಥಿಗಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿಕ್ಕನಹಳ್ಳಿ ಗ್ರಾಮಕ್ಕೆ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಭೇಟಿ ನೀಡಿದ್ದು, ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

ನಿನ್ನೆ (ಆ.28) ರಂದು ಒಂದೇ ದಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಹಾಗೂ ಫುಡ್ ಪಾಯಿಸನ್ ನಿಂದ 24 ಜನರಿಗೆ ವಾಂತಿ ಭೇದಿಯಾಗಿತ್ತು. ಕೊಳವೆ ಬಾವಿಯ ನೀರು ಸೇವಿಸಿದ 16 ಮಕ್ಕಳಿಗೆ ವಾಂತಿ ಭೇದಿಯಾಗಿದ್ದು ಮಕ್ಕಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತು ಫುಡ್ ಪಾಯಿಸನ್​ನಿಂದ ಪಶ್ಚಿಮ ಬಂಗಾಳ ಮೂಲದ 8 ಕಾರ್ಮಿಕರಿಗೆ ವಾಂತಿ ಭೇದಿಯಾಗಿತ್ತು. ಇವರನ್ನು ಸರಿಯಾಗಿ ಬೇಯಿಸದೆ ಮೀನು ಆಹಾರ ಸೇವಿಸಿದ ಹಿನ್ನೆಲೆ ಕಾರ್ಮಿಕರಿಗೆ ವಾಂತಿ ಭೇದಿಯಾಗಿದೆ ಎನ್ನಲಾಗುತ್ತು. ಕಾರ್ಮಿಕರನ್ನು ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಐವರ ಸಾವು ಪ್ರಕರಣ; ಗಂಜಿ ಕೇಂದ್ರದ ಆಹಾರದಲ್ಲೂ ಜಿರಳೆ ಪತ್ತೆ

ಕಳೆದ ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ​ಲ​ಭಾವಿ ಗ್ರಾಮ​ದಲ್ಲಿ ಕಲುಷಿತ ನೀರು ಸೇವನೆಯಿಂದ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಮಾರಲಭಾವಿ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ವಸ್ತು ಸೇರಿದ್ದು, ಇದನ್ನು ಸೇವಿಸಿದವರಿಗೆ ವಾಂತಿಬೇಧಿ ಉಂಟಾಗಿತ್ತು.

ಮಕ್ಕಳು, ಯುವಕರು ಹಾಗೂ ವಯೋವೃದ್ಧರು ಸೇರಿದಂತೆ 10ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಗ್ರಾಮಕ್ಕೆ ಕುಡಿಯುವ ನೀರಿನ ಮೂಲವಾಗಿದ್ದ ಬಾವಿಯಲ್ಲಿ ಕೆಲವು ದಿನಗಳ ಹಿಂದೆ ಹಂದಿ ಸತ್ತು ಬಿದ್ದಿತ್ತಂತೆ, ಇದರ ಸ್ವಚ್ಛತೆಗೆ ಕ್ರಮ ಕೈಗೊಂಡಿರಲಿಲ್ಲ. ಈ ವಿಚಾರ ತಿಳಿಯದ ಕೆಲವರು ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು ಎಂಬ ಮಾತು ಕೇಳಿ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!