ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಬಂಧಿತ 16ರ ಪೈಕಿ 9 ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸ್
ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಎಂ ನ್ಯಾಯಾಧೀಶರ ಅನುಮತಿ ಪಡೆದು ಬಂಧಿತ 16 ಆರೋಪಿಗಳ ಪೈಕಿ 9 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 9 ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಯಾದಗಿರಿ, ನವೆಂಬರ್ 06: ಕೆಇಎ (KEA) ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಎಂ ನ್ಯಾಯಾಧೀಶರ ಅನುಮತಿ ಪಡೆದು ಬಂಧಿತ 16 ಆರೋಪಿಗಳ ಪೈಕಿ 9 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 9 ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಹೊರಗಿದ್ದು ಪರೀಕ್ಷೆ ಬರೆಯಲು ಸಹಾಯ ಮಾಡಿದ 7 ಜನರು ಇನ್ನು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಿಪಿಐ ಹಂತದ ಐದು ಜನ ಅಧಿಕಾರಿಗಳ ತನಿಖೆ ಮಾಡಲಾಗುತ್ತಿದೆ.
ಕಳೆದ 10 ದಿನಗಳ ಹಿಂದೆ KEA ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಆರೋಪಿಗಳು ಪರೀಕ್ಷೆ ಬರೆದಿದ್ದರು. ಯಾದಗಿರಿ ನಗರದ ಐದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ, ಸರ್ಕಾರ ಎಂಬ ಹೆಸರಿನ ಮೇಲೆ ಅಭ್ಯರ್ಥಿಗಳಿಗೆ ಫೋನ್ ಕರೆ
16 ಆರೋಪಿಗಳ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ವೇಳೆ ಮಾಹಿತಿ ಸಿಕ್ಕಿದ್ದು, ಸರ್ಕಾರ ಎಂಬ ಹೆಸರಲ್ಲಿ ಸೇವ್ ಆಗಿದ್ದ ನಂಬರ್ನಿಂದ ವಾಟ್ಸಪ್ ಕಾಲ್ ಮಾಡಲಾಗಿದೆ. ಪರೀಕ್ಷೆಯ ಹಿಂದಿನ ದಿನ ಬಂಧನಕ್ಕೊಳಗಾದ ಆರೋಪಿ ನಂಬರ್ಗೆ ಆಡಿಯೋ ಕಾಲ್ ಬಂದಿದೆ.
ಇದನ್ನೂ ಓದಿ: ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಮತ್ತೆ7 ಜನರ ಬಂಧನ
ಆಡಿಯೋ ಕಾಲ್ ಮಾಡಿ ಮಾಹಿತಿ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸರ್ಕಾರ ಎಂಬ ಹೆಸರಿನ ನಂಬರ್ ಕಲಬುರಗಿ ಜಿಲ್ಲೆ ಅಫಜಲಪುರದ್ದು. ಬಂಧನಕ್ಕೊಳಗಾದ 16 ಜನರಲ್ಲಿ 15 ಆರೋಪಿಗಳು ಅಫಜಲಪುರದವರು.
ಬಿಜೆಪಿಯಿಂದ ಪ್ರತಿಭಟನೆ: ಆರ್.ಡಿ ಪಾಟೀಲ್ ಬಂಧನಕ್ಕೆ ಆಗ್ರಹ
ಕೆಇಎ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆ ಯಾದಗಿರಿಯಲ್ಲಿ ಬಿಜೆಪಿ ಜಿಲ್ಲಾ ಘಕಟದಿಂದ ನಗರದ ಸುಭಾಷ್ ವೃತ್ತದಲ್ಲಿ ನಡೆದ ಪ್ರತಿಭಟನೆ ಮಾಡಲಾಗಿದೆ. ಅಕ್ರಮದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಬಂಧಿಸುವಂತೆ ಆಗ್ರಹ ಹಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಪೊಲೀಸರ ನಿರಾಕರಣೆ ಮಧ್ಯೆಯೂ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದು, ನೀರು ತಂದು ಸ್ವತ: ಪೊಲೀಸರು ಬೆಂಕಿ ಹಾರಿಸಿದ್ದಾರೆ. ಬಳಿಕ ಮಾನವ ಸರಪಳಿ ನಿರ್ಮಿಸಿ ನಿರ್ಮಿಸಿ ಪ್ರತಿಭಟನೆ ಮಾಡಿದ್ದಕ್ಕೆ ಕೆಲ ಕಾಲ ವಾಹನ ಸವಾರರು ಪರದಾಡಿದ್ದಾರೆ.
ಕಿಂಗ್‌ಪಿನ್ ಆರ್.ಡಿ ಪಾಟೀಲ್ ಜೊತೆ ಡಿಲ್ ಮಾಡಿಕೊಂಡಿದ್ದ ಪೋಷಕರ ಪೀಕಲಾಟ
ಇನ್ನು ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಜೊತೆ ಡಿಲ್ ಮಾಡಿಕೊಂಡಿದ್ದ ಪೋಷಕರಿಗೆ ಪೀಕಲಾಟ ಶುರುವಾಗಿದೆ. ಅತ್ತ ಮಕ್ಕಳಿಗೆ ನೌಕರಿಯು ಇಲ್ಲದೇ, ಹಣವೂ ಇಲ್ಲದೇ ಪೋಷಕರು ಅಲೆದಾಡುತ್ತಿದ್ದಾರೆ. ಹಣ ವಾಪಾಸು ಕೊಡುವಂತೆ ಅಭ್ಯರ್ಥಿಗಳ ಪೋಷಕರು ಬೀದರ್‌ನ ಹುಮನಬಾದ್ ರಸ್ತೆಯಲ್ಲಿ ಆರ್‌ಡಿ ಪಾಟೀಲ್ ಕಾರನ್ನು ಆರ್‌ಡಿ ಪಾಟೀಲ್‌ಗೆ ಅಡ್ಡಗಟ್ಟಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:54 pm, Mon, 6 November 23