AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಮಾಣಿಕವಾಗಿ ಜಾತಿ ಗಣತಿ ಮಾಡಿಸಿಲ್ಲ ಎಂದ ಜಯಮೃತ್ಯುಂಜಯ ಸ್ವಾಮೀಜಿ

ವರದಿ ಬಗ್ಗೆ ಚರ್ಚೆ ಮಾಡಲು ಲಿಂಗಾಯತ ಸಮುದಾಯದ ಸ್ವಾಮಿಗಳು ,ಜನಪ್ರತಿನಿಧಿಗಳು ಸಭೆ ಕರೆಯಲಿ. ಈ ಬಗ್ಗೆ ಖುದ್ದು ಸಿಎಂ ಹತ್ತಿರ ತೆರಳಿ ಚರ್ಚೆ ಮಾಡೋಣವಂತೆ. ಸಿಎಂ ಅವರು ವರದಿಯ ಗೊಂದಲ ಸರಿಪಡಿಸದಿದ್ದರೆ, ಕಾನೂನಾತ್ಮಕ, ಸಾಮಾಜಿಕವಾಗಿ ಹೋರಾಟ ಮಾಡುವ ಬಗ್ಗೆ ನಾವು ಚರ್ಚೆ ಮಾಡುತ್ತೆವೆ ಎಂದು ಜಯಮೃತ್ಯುಂಜಯ ಸ್ವಾಮಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಪ್ರಾಮಾಣಿಕವಾಗಿ ಜಾತಿ ಗಣತಿ ಮಾಡಿಸಿಲ್ಲ ಎಂದ ಜಯಮೃತ್ಯುಂಜಯ ಸ್ವಾಮೀಜಿ
ಜಯಮೃತ್ಯುಂಜಯ ಸ್ವಾಮೀಜಿ
ಅಮೀನ್​ ಸಾಬ್​
| Edited By: |

Updated on:Mar 01, 2024 | 2:45 PM

Share

ಯಾದಗಿರಿ, ಮಾ.01: ಜಾತಿ ಗಣತಿ(Caste Census) ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ನಿನ್ನೆ(ಫೆ.29) ಸಲ್ಲಿಕೆ ಮಾಡಿದೆ. ಈ ವಿಚಾರವಾಗಿ ಯಾದಗಿರಿಯಲ್ಲಿ ಕೂಡಲಸಂಗಮದ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ(Jayamrutyunjaya swamiji) ಮಾತನಾಡಿ, ‘ ರಾಜ್ಯ ಸರ್ಕಾರ ಕಾಂತರಾಜು ವರದಿಯನ್ನು ತಿರಸ್ಕರಿಸಬೇಕು. ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ಈ ವರದಿಯನ್ನ ನಾವು ಒಪ್ಪಲ್ಲ. ಅದು ಅಲ್ಲದೆ ಮನೆ ಮನೆಗೆ ಹೋಗಿ ಪ್ರಾಮಾಣಿಕವಾಗಿ ಜಾತಿ ಗಣತಿ ಮಾಡಿಸಿಲ್ಲ. ಬದಲಾಗಿ ಪ್ರಮುಖ ಜಾಗದಲ್ಲಿ ಕುಳಿತುಕೊಂಡು ಸಮೀಕ್ಷೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ವೈಜ್ಞಾನಿಕವಾಗಿ ಮತ್ತೆ ಜಾತಿ ಗಣತಿ ಮಾಡಿಸಬೇಕು ಎಂದಿದ್ದಾರೆ.

ಪ್ರಾಮಾಣಿಕವಾಗಿ ಜಾತಿಗಣತಿ ನಡೆಯಲಿ

ಪ್ರಮಾಣಿಕವಾಗಿ ಜಾತಿಗಣತಿ ಮಾಡಲು ಲಿಂಗಾಯತ ಸಮುದಾಯ ಸಂಪೂರ್ಣ ಬೆಂಬಲ ನೀಡುತ್ತದೆ. ಲಿಂಗಾಯತ ಸಮುದಾಯವನ್ನು ಕಡಿಮೆ ತೋರಿಸುವ ಉದ್ದೇಶದಿಂದ ತರಾತುರಿಯಾಗಿ ಈ ವರದಿ ಸ್ವೀಕಾರ ಮಾಡಲಾಗಿದೆ ಎಂಬ ಅನುಮಾನ ಕಾಡುತ್ತಿದೆ. ಜಾತಿ-ಜಾತಿ ನಡುವೆ ಅಸಮಾಧಾನ ಮಾಡುವ ಪ್ರಯತ್ನ ಸರಕಾರ ಮಾಡಿದೆ. ಕರ್ನಾಟಕದಲ್ಲಿ ಲಿಂಗಾಯತರ ವಿರುದ್ಧ ವರದಿ ಬಂದಾಗ ವಿರೋಧ ಮಾಡಿರುವ ಇತಿಹಾಸವಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.

ಇದನ್ನೂ ಓದಿ:ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

ಲಿಂಗಾಯತರ ಹೆಸರಿನಲ್ಲಿ ಮತ ಪಡೆದು ಸರ್ಕಾರ ಅಧಿಕಾರಕ್ಕೆ ಬಂದಿದೆ

ಸಮೀಕ್ಷೆ ಮಾಡಲು ನನ್ನ ಹತ್ತಿರ ಬಂದಿಲ್ಲವೆಂದು ತುಮಕೂರು ಸ್ವಾಮಿಗಳು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸರ್ಕಾರ ತಪ್ಪು ಸಂದೇಶ ಸಾರುವ ಕೆಲಸ ಮಾಡಬಾರದು. ಲಿಂಗಾಯತ ಸಮುದಾಯದ ಶಾಸಕರು ಕಾಂತರಾಜ್ ವರದಿ ಅವೈಜ್ಞಾನಿಕವಾಗಿದೆ, ಹೀಗಾಗಿ ಅದನ್ನು ತಿರಸ್ಕರಿಸಿ ಎಂದು ಸಿಎಂ ಬಳಿ ಮನವಿ ಮಾಡಿದ್ದರು. ಆದರೂ ಸಿಎಂ ಅವರು ವರದಿ ಸ್ವೀಕಾರ ಮಾಡಿದ್ದಾರೆ. ಲಿಂಗಾಯತರ ಹೆಸರಿನಲ್ಲಿ ಮತ ಪಡೆದು ಸರ್ಕಾರ ಅಧಿಕಾರಿಕ್ಕೆ ಬಂದಿದೆ. ಈ ಹಿನ್ನಲೆ ಮತ್ತೊಮ್ಮೆ ಪುನರ್ ಪರಿಶೀಲನೆ ಮಾಡಿ ಜಾತಿ ಗಣತಿ ಮಾಡಬೇಕಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಈ ಬಗ್ಗೆ ಮಧ್ಯ ಪ್ರವೇಶ ಮಾಡಲಿ

ಕರ್ನಾಟಕದ ಲೋಕಸಭಾ ಸದಸ್ಯರು ಈ ಬಗ್ಗೆ ಮಧ್ಯ ಪ್ರವೇಶ ಮಾಡಿ ಈ ವರದಿ ಬಗ್ಗೆ ಕೇಂದ್ರಕ್ಕೆ ಮನವೊರಿಕೆ ಮಾಡಬೇಕು. ಇದನ್ನು ಲಿಂಗಾಯತ ಸಮುದಾಯದ ಸಚಿವರು ಹಾಗೂ ಶಾಸಕರು ಸರಿಪಡಿಸುವ ಕೆಲಸ ಮಾಡಬೇಕು. ರಾಜ್ಯದಲ್ಲಿ 24 ಪ್ರತಿಶತ ಲಿಂಗಾಯತ ಸಮುದಾಯದವರು ಇದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರು ಸಮಾಜಕ್ಕೆ ತಪ್ಪು ಸಂದೇಶ ಕೊಡಬಾರದು. ಒಂದು ಟಿಕೆಟ್ ಪಡೆಯಲು ಅಧಿಕಾರಕ್ಕಾಗಿ ಸಮಾಜಕ್ಕೆ ತೊಂದರೆ ಕೊಡುವ ತರಾತುರಿ ವರದಿ ಕೊಡಬಾರದಿತ್ತು. ಜನಸಾಮಾನ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ವರದಿ ಬಗ್ಗೆ ಚರ್ಚೆ ಮಾಡಲು ಲಿಂಗಾಯತ ಸಮುದಾಯದ ಸ್ವಾಮಿಗಳು ,ಜನಪ್ರತಿನಿಧಿಗಳು ಸಭೆ ಕರೆಯಲಿ. ಈ ಬಗ್ಗೆ ಖುದ್ದು ಸಿಎಂ ಹತ್ತಿರ ತೆರಳಿ ಚರ್ಚೆ ಮಾಡೋಣವಂತೆ. ಸಿಎಂ ಅವರು ವರದಿಯ ಗೊಂದಲ ಸರಿಪಡಿಸದಿದ್ದರೆ, ಕಾನೂನಾತ್ಮಕ, ಸಾಮಾಜಿಕವಾಗಿ ಹೋರಾಟ ಮಾಡುವ ಬಗ್ಗೆ ನಾವು ಚರ್ಚೆ ಮಾಡುತ್ತೆವೆ. ಈಗಾಗಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಅವರು ಲಿಂಗಾಯತ ಸಮುದಾಯದ ಶಾಸಕರ ಅಭಿಪ್ರಾಯ ಪಡೆದು ವರದಿ ಅನುಷ್ಠಾನ ಮಾಡುವ ಬಗ್ಗೆ ನಿರ್ಧಾರ ಮಾಡಲಿ. ಸಿಎಂ ಅವರು ಸಣ್ಣಪುಟ್ಟ ಲಿಂಗಾಯತ ಸಮುದಾಯ ಬೇರ್ಪಡಿಸಿ ಲಿಂಗಾಯತ ಧರ್ಮ ಬೇರ್ಪಡಿಸುವ ಕಾರ್ಯ ಮಾಡಬಾರದು ಎಂದು ಯಾದಗಿರಿಯಲ್ಲಿ ಜಯಮೃತ್ಯುಂಜಯ ಸ್ವಾಮಿ ಸಿಎಂಗೆ ಕಿವಿ ಮಾತು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Fri, 1 March 24

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ