AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಸಾಗರ ಜಲಾಶಯದ ನೀರು ತೆಲಂಗಾಣ ಪಾಲು: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ಸರ್ಕಾರದಿಂದ ಮತ್ತೊಂದು ಯಡವಟ್ಟು

Basava Sagar Reservoir: ಕರ್ನಾಟಕದಲ್ಲಿ ಬರದ ನಡುವೆಯೂ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಎಐತರ ಬೆಳೆಗೆ ನೀರಿಲ್ಲ ಎಂದು ಹೇಳಿದ್ದ ಸರ್ಕಾರ ಇದೀಗ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ತೆಲಂಗಾಣಕ್ಕೆ ನೀರು ಬಿಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಸವಸಾಗರ ಜಲಾಶಯದ ನೀರು ತೆಲಂಗಾಣ ಪಾಲು: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ಸರ್ಕಾರದಿಂದ ಮತ್ತೊಂದು ಯಡವಟ್ಟು
ಬಸವಸಾಗರ ಡ್ಯಾಂ
ಅಮೀನ್​ ಸಾಬ್​
| Edited By: |

Updated on: May 15, 2024 | 2:22 PM

Share

ಯಾದಗಿರಿ, ಮೇ 15: ರಾಜ್ಯದಲ್ಲಿ ಭೀಕರ ಬರಗಾಲವಿದ್ದ ಸಂದರ್ಭದಲ್ಲಿಯೂ ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಜನತೆಯ ಹಾಗೂ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸರ್ಕಾರ (Congress Government) ಇದೀಗ ಮತ್ತೆ ಅಂಥದ್ದೇ ಯಡವಟ್ಟು ಮಾಡಿಕೊಂಡಿದೆ. ಯಾದಗಿರಿ (Yadgir) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂನಿಂದ (Basava Sagar Reservoir) ಕೃಷ್ಣಾ ನದಿಯ (Krishna River) ಮೂಲಕ ತೆಲಂಗಾಣಕ್ಕೆ ನೀರು ಹರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಆರ್​ಟಿಪಿಎಸ್​​ಗೆ ನೀರು ಹರಿಸುವ ನೆಪದಲ್ಲಿ ತೆಲಂಗಾಣಕ್ಕೆ ನೀರು ಹರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ತೆಲಂಗಾಣಕ್ಕೆ ನೀರು ಬಿಡಲಾಗುತ್ತಿದೆ. ಡ್ಯಾಂನಲ್ಲಿ ನೀರು ಇಲ್ಲವೆಂದು ರೈತರ ಬೆಳೆಗೆ ನೀರು ಹರಿಸದ ಸರ್ಕಾರ ಈಗ ತೆಲಂಗಾಣಕ್ಕೆ ನೀರು ಬಿಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಡ್ಯಾಂ ನೀರು ಬಿಡುಗಡೆ ಮಾಡುವಂತೆ ರೈತರು ಸಾಕಷ್ಟು ಪ್ರತಿಭಟನೆಯನ್ನೂ ನಡೆಸಿದ್ದರು. ಆದರೆ, ನೀರಿನ ಕೊರತೆ ಇದೆ ಎಂಬ ನೆಪ ಹೇಳಿದ್ದ ಸರ್ಕಾರ ರೈತರಿಗೆ ನೀರು ಬಿಟ್ಟಿರಲಿಲ್ಲ. ಇದೀಗ ಕೊರತೆ ಇದ್ದರೂ ತೆಲಂಗಾಣಕ್ಕೆ ನೀರು ಹರಿಸುತ್ತಿದೆ ಎಂದು ಹೇಳಲಾಗಿದೆ.

ಬಸವಸಾಗರ ಡ್ಯಾಂ ಸಂಗ್ರಹ ಸಾಮರ್ಥ್ಯ

ಶಕ್ತಿ‌ ನಗರದಲ್ಲಿರುವ ಆರ್​​ಟಿಪಿಎಸ್ ವಿದ್ಯುತ್ ಸ್ಥಾವರಕ್ಕೆ ಎಂಬ ನೆಪದಲ್ಲಿ ಮೇ 12 ರ ರಾತ್ರಿಯಿಂದ ಇಲ್ಲಿವರಗೆ 1.25 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 14 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ.

ಯಾದಗಿರಿ ಹಾಗೂ ರಾಯಚೂರು ಗಡಿಭಾಗದ ಗುರ್ಜಾಪುರನಲ್ಲಿ ಆರ್​​​ಟಿಪಿಎಸ್​​​ಗೆ ನೀರು ಒದಗಿಸಲು ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ. ಈ ಬ್ಯಾರೇಜ್​​​ನಿಂದ ಹೇರಳವಾಗಿ ನೀರು ತೆಲಂಗಾಣ ಪಾಲಾಗುತ್ತಿದೆ.

ಇದನ್ನೂ ಓದಿ: ಮೇ 15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ತೆಲಂಗಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿರುವ ಕಾರಣ ಜುರಾಲಾ ಜಲಾಶಯಕ್ಕೆ ನೀರು ಹರಿಸಿತಾ ರಾಜ್ಯ ಸರ್ಕಾರ ಎಂಬ ಅನುಮಾನ ಈಗ ಬಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು