AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ತಾಪಕ್ಕೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಮಹಿಳೆ ಬಲಿ: ಇನ್ನಷ್ಟು ಶಾಖಾಘಾತ ಮುನ್ಸೂಚನೆ

ಉತ್ತರ ಕರ್ನಾಟಕದಲ್ಲಿ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಯಾದಗಿರಿಯಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ಮಹಿಳೆ ಬಿಸಿಲಿನ ತಾಪ ತಾಳಲಾರದೇ ಕೂಲಿ ಮಾಡುವ ಕೆಲಸದ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಇನ್ನು ಹವಾಮಾನ ಇಲಾಖೆಯಿಂದ ಇನ್ನಷ್ಟು ತಾಪಮಾನ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬಿಸಿಲಿನ ತಾಪಕ್ಕೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಮಹಿಳೆ ಬಲಿ: ಇನ್ನಷ್ಟು ಶಾಖಾಘಾತ ಮುನ್ಸೂಚನೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 29, 2024 | 10:27 PM

ಯಾದಗಿರಿ, (ಏಪ್ರಿಲ್ 29): ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ತಾಪಮಾನದಲ್ಲಿ (temperature) ಭಾರಿ ಹೆಚ್ಚಳವಾಗಿದೆ. ಅದರಲ್ಲೂ ಮುಖ್ಯವಾಗಿ ಹೈದಾರಾಬಾದ್ ಕರ್ನಾಟಕ(Hyderabad Karnataka) ಭಾಗದಲ್ಲಿ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಇಂದು (ಏಪ್ರಿಲ್ 29) ಯಾದಗಿರಿ(Yadgir) ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಶೇ.40 ರಿಂದ ಶೇ.44 ಡಿಗ್ರಿ ಸೆಲ್ಸಿಯಸ್‌ ತಲುಪಿದೆ. ಇನ್ನು ಉಷ್ಣದ ಅಲೆಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದ್ದು, ಮೃತರನ್ನು ಹಣಮಂತಿ (60) ಎಂದು ಗುರುತಿಸಲಾಗಿದೆ.

ಮೃತ ಹಣಮಂತಿ ಅವರು ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಧ್ಯಾಹ್ನ ಬಿಸಿಲಿನ ಪ್ರಮಾಣ ಹೆಚ್ಚಳವಾಗಿತ್ತು. ಆದರೆ, ಬೆಳಗ್ಗೆ ವೇಳೆಯೇ ಊಟವನ್ನೂ ಮಾಡದೇ ಕೂಲಿ ಕೆಲಸಕ್ಕೆ ಮಹಿಳೆ ಹೋಗಿ ಬಿಸಿಲನ್ನೂ ಲೆಕ್ಕಿಸದೇ ಕೆಲಸ ಮಾಡುತ್ತಿದ್ದಳು. ಈ ವೇಳೆ ಕೂಲಿ ಕೆಲಸ ಮಾಡುತ್ತಿರುವಾಗಲೇ ಮಹಿಳೆ ಹಣಮಂತಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಅವರಿಗೆ ನೀರನ್ನು ಕುಡಿಸಿ ಬದುಕಿಸಲು ಯತ್ನಿಸಿದರೂ ಅವರು ಬದುಕಲೇ ಇಲ್ಲ. ಇನ್ನು ಆಸ್ಪತ್ರೆಗೆ ಸೇರಿಸುವ ಮುನ್ನವೇ ಕಾರ್ಮಿಕ ಮಹಿಳೆ ಹಣಮಂತಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಶಾಖಾಘಾತ ಮುನ್ಸೂಚನೆ

ಈಗಾಗಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ 40ರ ಮೇಲೆಯೇ ಇರುತ್ತದೆ. ಇನ್ನು ಕೆಲ ಜಿಲ್ಲೆಗಳಲ್ಲಿ 44ರವರೆಗೂ ಹೋಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ಮಧ್ಯೆ ಹವಾಮಾನ ಇಲಾಖೆ ಇನ್ನಷ್ಟು ಶಾಖಾಘಾತ ಮುನ್ಸೂಚನೆ ನೀಡಿದೆ. ಮೇ 2ರವರೆಗೆ ಈಗಿರುವುದಕ್ಕಿಂತ ಹೆಚ್ಚುವರಿಯಾಗಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 pm, Mon, 29 April 24

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ