ಕೆಇಎ ಪರೀಕ್ಷೆ ಅಕ್ರಮ: ಮತ್ತೊಂದು ವಾಟ್ಸ್​ಆ್ಯಪ್ ಚಾಟ್ ಬಯಲು, ಕೋಡ್​ವರ್ಡ್ ಹೇಗಿದೆ ಗೊತ್ತಾ?

ಯಾದಗಿರಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಮತ್ತೊಂದು ವಾಟ್ಸಪ್ ಚಾಟ್ ಬಯಲಾಗಿದೆ. ಇನ್ನೊಂದೆಡೆ, ಕಲಬುರಗಿಯಲ್ಲೂ ನಡೆದ ಈ ಪರೀಕ್ಷಾ ಅಕ್ರಮದ ಕಿಂಗ್​ಪಿನ್​ ಆರ್​ಡಿ ಪಾಟೀಲ್​ ಆನ್‌ಲೈನ್‌ ಗೇಮ್​ಗಳಲ್ಲಿ ಹಣ ಹೂಡಿಕೆ ಮಾಡಿ ಆಟ ಆಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಕೆಇಎ ಪರೀಕ್ಷೆ ಅಕ್ರಮ: ಮತ್ತೊಂದು ವಾಟ್ಸ್​ಆ್ಯಪ್ ಚಾಟ್ ಬಯಲು, ಕೋಡ್​ವರ್ಡ್ ಹೇಗಿದೆ ಗೊತ್ತಾ?
ವಾಟ್ಸ್​ಆ್ಯಪ್​ನಿಂದ ಎಫ್​ಡಿಎ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗೆ ಕೋಡ್​​ವರ್ಡ್ ಮೂಲಕ ಉತ್ತರಗಳನ್ನು ಕಳುಹಿಸಿದ ಆರೋಪಿ
Follow us
| Edited By: Rakesh Nayak Manchi

Updated on: Nov 18, 2023 | 10:44 AM

ಯಾದಗಿರಿ, ನ.18: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಮತ್ತೊಂದು ವಾಟ್ಸಪ್ ಚಾಟ್ ಬಯಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಕೋಡ್​ವರ್ಡ್ ಮೂಲಕ ಪ್ರಶ್ನೆಗಳಿಗೆ ಉತ್ತರಗಳನ್ನು ಕಳುಹಿಸಿದ ಚಾಟ್​​ ಪ್ರತಿ ಟಿವಿ9ಗೆ ಲಭ್ಯವಾಗಿದೆ.

ಅಕ್ರಮದ ಪ್ರಮುಖ ಆರೋಪಿ ಸಿದ್ದರಾಮ ಅಲಿಯಸ್ ಪುಟ್ಟು ಮೊಬೈಲ್​ನಿಂದ ಬಂದಿದ್ದ ಉತ್ತರಗಳ ಪ್ರತಿ ಇದಾಗಿದೆ. ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆಯಲ್ಲಿದ್ದ ಅಕ್ಷರಗಳ ಆಧಾರದಲ್ಲಿ ಉತ್ತರಗಳು ಬಂದಿವೆ.

ಇದನ್ನೂ ಓದಿ: ಬಗೆದಷ್ಟು ಬಯಲಾಗುತ್ತಿದೆ ಆರ್​ಡಿ ಪಾಟೀಲ್ ಅಕ್ರಮ; ಕೆಇಎ ಪರೀಕ್ಷೆಯ ಮಾಸ್ಟರ್ ಪ್ಲಾನ್ ಹೇಗಿತ್ತು ಗೊತ್ತಾ?

ಏಳು ಅಕ್ಷರದ ಉತ್ತರವಿದ್ದರೆ ಏಳು ಅಂತ ಬರೆದು ವಾಟ್ಸ್​ಆ್ಯಪ್​ ಮೂಲಕ ಕಳುಹಿಸಲಾಗಿದೆ. ಸಾಮಾನ್ಯ ಜ್ಞಾನ, ಕನ್ನಡ ಹಾಗೂ ಕಂಪ್ಯೂಟರ್ ಮೂರು ವಿಷಯಗಳ ಉತ್ತರಗಳನ್ನು ಈ ಕೋಡ್​​ವರ್ಡ್ ಮೂಲಕ ರವಾನೆ ಮಾಡಿದ್ದಾರೆ. ಈ ಆರೋಪಿ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಗ್ಯಾಂಗ್​ಗೆ ಸೇರಿದವ ಎನ್ನಲಾಗುತ್ತಿದೆ.

ಆನ್​ಲೈನ್​ನಲ್ಲಿ ಗೇಮ್ ಆಡುವ ಆರ್​ಡಿ ಪಾಟೀಲ್

ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ ಆನ್‌ಲೈನ್‌ ಗೇಮ್​ಗಳಲ್ಲಿ ಹಣ ಹೂಡಿಕೆ ಮಾಡಿ ಆಟ ಆಡುವ ಚಾಳಿ ಹೊಂದಿದ್ದನು ಎಂದು ತಿಳಿದುಬಂದಿದೆ. ಆನ್ ಲೈನ್​ನಲ್ಲಿ ಕ್ಯಾಸಿನೊದಲ್ಲಿ ಆರ್ ಡಿ ಪಾಟೀಲ್ ಗೇಮ್ ಆಡುತ್ತಿದ್ದನು. MPC 91 ನಲ್ಲಿ ನಿತ್ಯವು ಆಟವಾಡುತ್ತಿದ್ದ.

ಆನ್‌ಲೈನ್ ಗೇಮ್‌ಗಾಗಿ ಮೂರು ಮೊಬೈಲ್ ನಂಬರ್ ಅನ್ನು ಬಳಕೆ ಮಾಡಿಕೊಳ್ಳುತ್ತಿದ್ದನು. ಕೆಲವೇ ತಿಂಗಳಲ್ಲಿ 30 ಲಕ್ಷಕ್ಕೂ ಅಧಿಕ ಹಣವನ್ನು ಹೂಡಿಕೆ ಮಾಡಿದ್ದನು. ಆ ಮೂಲಕ ಮೂರು ಅಕೌಂಟ್​ಗಳಲ್ಲಿನ ಅಕ್ರಮವಾಗಿ ಬಂದ ಹಣವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದ್ದನು. ಈ ಎಲ್ಲಾ ವಿಚಾರಗಳು ಅಪಾರ್ಟ್ಮೆಂಟ್‌ನಲ್ಲಿ‌ ಸಿಕ್ಕ ಮೊಬೈಲ್‌ ಪರಿಶೀಲನೆ ವೇಳೆ ಬಯಲಿಗೆ ಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?