ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಖರ್ಗೆ ಅಳಿಯ ಕಣಕ್ಕೆ: ಅಚ್ಚರಿಯ ಹೇಳಿಕೆ ನೀಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್​

| Updated By: ಗಂಗಾಧರ​ ಬ. ಸಾಬೋಜಿ

Updated on: Oct 01, 2023 | 11:07 PM

ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧಿಸುತ್ತಾರೆ ಗೊತ್ತಿಲ್ಲ. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಯಾರನ್ನು ನಿಲ್ಲಿಸುತ್ತಾರೆ ಗೊತ್ತಿಲ್ಲ. ನನ್ನ ಪ್ರಕಾರ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಿಲ್ಲಿಸಬಹುದು ಎಂದು ಹೇಳುವ ಮೂಲಕ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ​ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಖರ್ಗೆ ಅಳಿಯ ಕಣಕ್ಕೆ: ಅಚ್ಚರಿಯ ಹೇಳಿಕೆ ನೀಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್​
ಮಾಜಿ ಸಚಿವ ಬಾಬುರಾವ್ ಚಿಂಚನಸೂರ್
Follow us on

ಯಾದಗಿರಿ, ಅಕ್ಟೋಬರ್​ 01: ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿಸಬಹುದು ಎಂದು ಹೇಳುವ ಮೂಲಕ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Baburao Chinchansur) ಅಚ್ಚರಿ ಹೇಳಿಕೆ ನೀಡಿದ್ದಾರೆ. ಯಾದಗಿರಿಯ ಗುರುಮಠಕಲ್ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧಿಸುತ್ತಾರೆ ಗೊತ್ತಿಲ್ಲ. ಡಾ. ಮಲ್ಲಿಕಾರ್ಜುನ ಖರ್ಗೆ ಯಾರನ್ನು ನಿಲ್ಲಿಸುತ್ತಾರೆ ಗೊತ್ತಿಲ್ಲ. ನನ್ನ ಪ್ರಕಾರ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ.

ನಾವು ರಾಧಾಕೃಷ್ಣ ದೊಡ್ಡಮನಿ ಅವರಿಗೆ ಟಿಕೆಟ್ ನೀಡಲು ಒತ್ತಾಯ ಮಾಡುತ್ತೇವೆ. ಒಂದು ವೇಳೆ ಅವರು ಸ್ಪರ್ಧಿಸಿದರೆ ಹೆಚ್ಚು ಮತಗಳಿಂದ ಗೆಲ್ಲಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದರು.

ಇದನ್ನೂ ಓದಿ: ಸಿಎಂ ಇಬ್ರಾಹಿಂರನ್ನು ಪರಿಗಣಿಸದಿರುವುದು ಅವರ ಪಕ್ಷಕ್ಕೆ ಸಂಬಂಧಿಸಿದ್ದು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಮತದಾರರಿಗೆ ನ್ಯಾಯ ಕೊಡಿಸಲು ನಾನು ರಾಜಕೀಯದಲ್ಲಿ ಜೀವಂತ ಇದ್ದೇನೆ. ಉಪ ಮುಖ್ಯಮಂತ್ರಿಯಾಗಿ ರಾಜಕೀಯ ನಿವೃತ್ತಿಯಾಗುತ್ತೇನೆ. ಲಿಂಗಾಯತ ಸಿಎಂ ವಿಚಾರ ಚರ್ಚೆ ವೇಳೆಯೇ ಡಿಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ವಿಧಾನಸಭೆ ಚುನಾವಣೆ ವೇಳೆ ರಸ್ತೆ ಅಪಘಾತವಾಗಿತ್ತು. ನನಗೆ ಆರು ಆಪರೇಷನ್ ಆಗಿವೆ. ನನ್ನ ವಿರೋಧಿಗಳು ಸಾಯುತ್ತಾರೆಂದು ಚುನಾವಣೆ ಸಂದರ್ಭದಲ್ಲಿ ಅಪಪ್ರಚಾರ ಮಾಡಿದ್ದರು. ಇದರಿಂದ ನಾನು ಸೋತಿದ್ದೇನೆ. ಇದರಿಂದ ನನ್ನ ಆತ್ಮಕ್ಕೆ ಬೆಂಕಿ ಹತ್ತಿದೆ. ಕೋಲಿ ಸಮಾಜವನ್ನು ಎಸ್​ಟಿ ಸೇರ್ಪಡೆ ಮಾಡುತ್ತೇನೆ ಎಂದರು.

ಮೈತ್ರಿಯಿಂದ ಯಾವುದೇ ಪರಿಣಾಮ ಆಗುವುದಿಲ್ಲ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಮೈತ್ರಿಯಿಂದ ಯಾವುದೇ ಪರಿಣಾಮ ಆಗುವುದಿಲ್ಲ. ಕಾಂಗ್ರೆಸ್ ಪಕ್ಷವು ಮತ್ತೆ ಸ್ಟ್ರಾಂಗ್ ಆಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.