ಪುಣ್ಯ ಸ್ತ್ರೀಯಳ ಒಲುಮೆ ಬಣ್ಣ ಭಜನೆ ಅಲ್ಲ: ಶಿವರಾತ್ರಿಯಂದು ಕೊಡೇಕಲ್ ಕಾಲಜ್ಞಾನ ಬಸವಣ್ಣ ನುಡಿದ ರಾಜಕೀಯ ಭವಿಷ್ಯದ ಮರ್ಮವೇನು?

ಕೊಡೇಕಲ್ ಕಾಲಜ್ಞಾನ ಬಸವಣ್ಣನ(Kalagnani Basavanna) ಭವಿಷ್ಯದ ನುಡಿ ಹೊರ ಬಿದ್ದಿದ್ದು ಪಕ್ಷಾಂತರಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಪುಣ್ಯ ಸ್ತ್ರೀಯಳ ಒಲುಮೆ ಬಣ್ಣ ಭಜನೆ ಅಲ್ಲ: ಶಿವರಾತ್ರಿಯಂದು ಕೊಡೇಕಲ್ ಕಾಲಜ್ಞಾನ ಬಸವಣ್ಣ ನುಡಿದ ರಾಜಕೀಯ ಭವಿಷ್ಯದ ಮರ್ಮವೇನು?
ಕೊಡೇಕಲ್ ಕಾಲಜ್ಞಾನ ಬಸವಣ್ಣ
Follow us
| Updated By: ಆಯೇಷಾ ಬಾನು

Updated on:Feb 19, 2023 | 10:10 AM

ಯಾದಗಿರಿ: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ರಾಜಕೀಯ ಪಕ್ಷಗಳು ಈಗಾಗಲೇ ನಾನಾ ತಯಾರಿಯಲ್ಲಿ ತೊಡಗಿಕೊಂಡಿವೆ. ಇದರ ನಡುವೆ ಕೊಡೇಕಲ್ ಕಾಲಜ್ಞಾನ ಬಸವಣ್ಣನ(Kalagnani Basavanna) ಭವಿಷ್ಯದ ನುಡಿ ಹೊರ ಬಿದ್ದಿದ್ದು ಪಕ್ಷಾಂತರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷಾಂತರ, ಕುದುರೆ ವ್ಯಾಪಾರಕ್ಕೆ ಒಳಗಾಗುವವರಿಗೆ ಅಧಿಕಾರದ ಯೋಗವಿಲ್ಲ ಎಂದು ಕಾಲಜ್ಞಾನಿ ಕೊಡೇಕಲ್ ಬಸವಣ್ಣ ಭವಿಷ್ಯ ನುಡಿದಿದ್ದಾರೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಕಾಲಜ್ಞಾನಿ ಬಸವಣ್ಣನ ದೇವಸ್ಥಾನವಿದೆ. ಇಲ್ಲಿ ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನ ಕಾಲಜ್ಞಾನಿ ಬಸವಣ್ಣನವರ ವಚನಗಳನ್ನ ನುಡಿಯಲಾಗುತ್ತೆ. ನಿನ್ನೆ ನಡೆದ ಶಿವರಾತ್ರಿ ಹಬ್ಬದ ಭವಿಷ್ಯನುಡಿಯಲ್ಲಿ ಬಸವಣ್ಣ ಪಕ್ಷಾಂತರಿಗಳಿಗೆ ಎಚ್ಚರಿಕೆ ನೀಡಿದೆ. 2023ರ ಚುನಾವಣೆಯಲ್ಲಿ ಪಕ್ಷಾಂತರ, ಕುದುರೆ ವ್ಯಾಪಾರಕ್ಕೆ ಒಳಗಾಗುವವರಿಗೆ ಅಧಿಕಾರದ ಯೋಗವಿಲ್ಲ. ಜನರೇ ತಕ್ಕ ಶಾಸ್ತಿ ಮಾಡುತ್ತಾರೆ. ನುಡಿದಂತೆ ನಡೆಯುವರಿಗೆ ಮತ್ತೆ ಅಧಿಕಾರದ ಗದ್ದುಗೆ ಸಿಗುತ್ತೆ ಎಂದು ಭವಿಷ್ಯ ನುಡಿದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದ ಬಸವರಾಜ ದೇವರು

ಪುಣ್ಯ ಸ್ತ್ರೀಯಳ ಒಲುಮೆ ಬಣ್ಣ ಭಜನೆ ಅಲ್ಲ. ತನ್ನ ಪುರುಷನೆ ತನಗೆ ಗತಿ ಎಂದು ಇದ್ದರೆ ಮನ್ನಣೆ ಉಂಟು ಶಿವನಲ್ಲಿ ಎಂಬ ಶಿವರಾತ್ರಿ ನುಡಿಯನ್ನು ನುಡಿಯಲಾಗಿದ್ದು ಇದನ್ನು ಹಲವು ಅರ್ಥದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ಪಕ್ಷಾಂತರ, ಕುದುರೆ ವ್ಯಾಪಾರ ಮಾಡುವ ಪಕ್ಷದವರಿಗೆ ಶಾಸಕರಿಗೆ ಅಧಿಕಾರ ಯೋಗವಿಲ್ಲ. ಬಣ್ಣದ ಮಾತನಾಡುವರಿಗೆ ಈ ಬಾರಿ ಚುನಾವಣೆಯಲ್ಲಿ ಗೆಲುವು ಕಷ್ಟ. ನುಡಿದಂತೆ ನಡೆದುಕೊಳ್ಳುವರು ಜನರ ನಂಬಿಕೆ ಇಟ್ಟುಕೊಂಡವರಿಗೆ ಅಧಿಕಾರ ಗದ್ದುಗೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಈ ಹಿಂದೆ ಕೂಡ ಶಿವರಾತ್ರಿ ನುಡಿ ಭವಿಷ್ಯ ನಿಜವಾಗಿದೆ. ಹೀಗಾಗಿ ಈ ಬಾರಿ ಕೂಡ ಇದು ನಿಜವಾಗಲಿದೆ ಎಂದು ವಿಶ್ಲೇಷಕ ಬಸವರಾಜ ಭದ್ರಗೋಳ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:10 am, Sun, 19 February 23

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ