ಯಾದಗಿರಿ: ಯಾದಗಿರಿ ನಗರದ ಹೊರ ಭಾಗದ ಮೆಡಿಕಲ್ ಕಾಲೇಜು ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬೈ ಮೂಲದ ಚಾಲಕ ಮುರಳೀಧರ್ ಮೃತಪಟ್ಟ ದುರ್ದೈವಿ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಾರಿ ಚಾಲಕ ಬಲಿಯಾದ ಎಂದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಯುವ ಆಟೋ ಚಾಲಕನ ಹತ್ಯೆ:
ವಿಜಯಪುರ ನಗರದ ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಆಟೋ ಚಾಲಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೈಲ್ವೆ ಸ್ಟೇಷನ್ ನಿವಾಸಿ ವೀರೇಶ್ ಬಂಥನಾಳ(22) ಬರ್ಬರ ಹತ್ಯೆಗೀಡಾದವ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅರಸೀಕೆರೆ ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ, ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ ಹಚ್ಚಲಾಗಿದೆ. ಅರಸೀಕೆರೆ ತಹಶೀಲ್ದಾರ್ ವಿದ್ಯಾ ನೇತೃತ್ವದಲ್ಲಿ ಅರಸೀಕೆರೆ ತಾಲೂಕಿನ ಹಲವು ಗೋಡೌನ್ಗಳ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಲಾಗಿದ್ದು, ಒಟ್ಟು 50 ಮೆಟ್ರಿಕ್ ಟನ್ಗಿಂತಲೂ ಅಧಿಕ ಪ್ರಮಾಣದ ಅಕ್ಕಿ ಜಪ್ತಿ ಮಾಡಲಾಗಿದೆ. ಡಿ. ಎಂ. ಕುರ್ಕೆ ಗ್ರಾಮದ ಹನುಮಂತಪ್ಪ ಎಂಬುವವರ ಗೋಡೌನ್
ಕೋಳಿ ಫಾರಂನಲ್ಲಿ ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ಜಪ್ತಿಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:31 pm, Sat, 4 June 22