AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿ, ಮಗುವಾದ ಮೇಲೆ ಹೆಂಡ್ತಿಗೆ ಮೋಸ ಮಾಡಿದ ಯಾದಗಿರಿಯ ವ್ಯಕ್ತಿ

Yadagiri Love dokha: 2014 ರಲ್ಲಿ ಬೆಂಗಳೂರಿನಲ್ಲಿ ಪರಸ್ಪರ ಪರಿಚಯವಾಗಿದ್ದರು. ಆರು ವರ್ಷದ ಪ್ರೀತಿಯ ಬಳಿಕ 2020 ರಲ್ಲಿ ಹಿರಿಯರ ಸಮ್ಮುಖದಲ್ಲಿ ಸಿಂಧೂ ಹಾಗೂ ಶರಣು ಮದುವೆಯಾಗಿದ್ದಾರೆ. ಆದರೆ ತನಗೆ ಮೋಸ ಮಾಡಿ ಇನ್ನೊಂದು ಮದುವೆಯಾಗಿದ್ದಾನೆ ಎಂದು ಸಿಂಧೂ ಯಾದಗಿರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿ, ಮಗುವಾದ ಮೇಲೆ ಹೆಂಡ್ತಿಗೆ ಮೋಸ ಮಾಡಿದ ಯಾದಗಿರಿಯ ವ್ಯಕ್ತಿ
ಮಗುವಾದ ಮೇಲೆ ಮತ್ತೊಂದು ಮದುವೆಯಾದ ಯಾದಗಿರಿ ಯುವಕ
ಅಮೀನ್​ ಸಾಬ್​
| Edited By: |

Updated on:Feb 05, 2024 | 4:08 PM

Share

ಯಾದಗಿರಿ: ಪ್ರೀತಿಸಿ ಮದುವೆಯಾಗಿದ್ದ ಯುವತಿಗೆ ಯುವಕ ಮೋಸ (Love dokha) ಮಾಡಿರುವ ಪ್ರಸಂಗ ನಡೆದಿದೆ. ಮದುವೆಯಾಗಿ ಒಂದು ಮಗುವಾದ ಬಳಿಕ ಯುವಕ ಮತ್ತೊಂದು ಮದುವೆ ಮಾಡಿಕೊಂಡಿದ್ದಾನೆ. ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿ ಗ್ರಾಮದ ಶರಣು ದೋರನಹಳ್ಳಿ ಮೋಸ ಮಾಡಿದ ಯುವಕ ಎಂದು ತಿಳಿದುಬಂದಿದೆ. ದೂರದ ರಾಮನಗರ ಜಿಲ್ಲೆಯ ಕನಕಪುರದ ಯುವತಿ (Kanakapura woman) ಸಿಂಧೂ ಮೋಸ ಹೋದ ಯುವತಿ (Yadagiri police).

ಶರಣು ದೋರನಹಳ್ಳಿ ಮತ್ತು ಸಿಂಧೂ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ಮದುವೆ ಬಳಿಕ ದಂಪತಿಗೆ ಒಂದು ಗಂಡು ಮಗು ಜನಿಸಿದೆ. ಆದರೆ ಶರಣು ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ಮಾಡಿ ಹೆಂಡತಿ ಸಿಂಧೂಳನ್ನು ಮನೆಯಿಂದ ಹೊರ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಶರಣು ವಿರುದ್ಧ ಜನವರಿ 10 ರಂದು ಶಹಾಪುರ‌ ಪೊಲೀಸ್ ಠಾಣೆಯಲ್ಲಿ 307 ಕಲಂ ಅಡಿ ಕೇಸ್ ದಾಖಲಾಗಿದೆ. ಸಿಂಧೂ ಮನೆಯಿಂದ ಹೊರ ಹಾಕಿ ಶರಣು ಇನ್ನೊಂದು ಮದುವೆ ಮಾಡಿಕೊಂಡಿದ್ದಾನೆ ಎಂದು ಸಿಂಧೂ ಆರೋಪ ಮಾಡಿದ್ದಾಳೆ. ಸಿಂಧೂಗೆ ವಿಚ್ಛೇದನ ನೀಡದೆ ಮತ್ತೊಂದು ಮಾಡಿಕೊಂಡಿದ್ದಾನೆ ಎಂಬುದು ಆರೋಪವಾಗಿದೆ. ಹೀಗಾಗಿ ನ್ಯಾಯಕ್ಕಾಗಿ ಸಿಂಧೂ ಹಾಗೂ ಪೋಷಕರು ಯಾದಗಿರಿ ಪೊಲೀಸ್​ ವರಿಷ್ಠಾಧಿಕಾರಿಯ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಮಣ್ಣಿನ ಮೋಹಕ್ಕೆ ಹೊಲದಲ್ಲಿ ಕೊಲೆಯಾದ ಮಹಿಳೆ, ಡೇಟ್ ಫಿಕ್ಸ್ ಮಾಡಿ‌ ಹೊಡಿತೀನಿ ಎಂದಿದ್ದ ಹಂತಕ! ಯಾಕೆ?

2014 ರಲ್ಲಿ ಇಬ್ಬರು ಬೆಂಗಳೂರಿನಲ್ಲಿ ಪರಸ್ಪರ ಪರಿಚಯವಾಗಿದ್ದರು. ಇಂಡಿಯನ್ ಸೋಷಿಯಲ್ ಇನ್ಸ್ಟಿಟ್ಯೂಟ್ ನಲ್ಲಿ ತರಬೇತಿ ಪಡೆಯುವಾಗ ಇಬ್ಬರದೂ ಪರಿಚಯವಾಗಿದೆ. ಆರು ವರ್ಷದ ಪ್ರೀತಿಯ ಬಳಿಕ 2020 ರಲ್ಲಿ ಹಿರಿಯರ ಸಮ್ಮುಖದಲ್ಲಿ ಸಿಂಧೂ ಹಾಗೂ ಶರಣು ಮದುವೆಯಾಗಿದ್ದಾರೆ. ಆದರೆ ತನಗೆ ಮೋಸ ಮಾಡಿ ಇನ್ನೊಂದು ಮದುವೆಯಾಗಿದ್ದಾನೆ ಎಂದು ಸಿಂಧೂ ಆರೋಪ ಮಾಡಿದ್ದಾಳೆ. ಶರಣುನನ್ನು ಬಂಧಿಸಿ, ನ್ಯಾಯ ಕೊಡಿಸುವಂತೆ ಸಿಂಧೂ ಹಾಗೂ ಪೋಷಕರು ಯಾದಗಿರಿ ಪೊಲೀಸರನ್ನು ಆಗ್ರಹಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Fri, 2 February 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?