AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಜೆಎಂಸಿ ಕೋರ್ಟ್​ನಲ್ಲಿ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧರ ಆಗಲಿದೆ. ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ
ಮಲ್ಲಿಕಾರ್ಜುನ ಮುತ್ಯಾImage Credit source: google
ಅಮೀನ್​ ಸಾಬ್​
| Edited By: |

Updated on: Mar 02, 2026 | 8:53 PM

Share

ಯಾದಗಿರಿ, ಮಾರ್ಚ್​ 02: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ.

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಹಿನ್ನಲೆ ಇಂದು ಶಹಾಪುರ ಜೆಎಂಸಿ ಕೋರ್ಟ್ ನ್ಯಾಯಾಧೀಶರ ಮುಂದೆ ಸಂತ್ರಸ್ತ ಹೇಳಿಕೆ ದಾಖಲಿಸಲಾಗಿದೆ. ಬಳಿಕ ಬಾಲಕಿ ಹೇಳಿಕೆಯ ದಾಖಲು ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಹೀಗಾಗಿ ಸಂತ್ರಸ್ತ ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾ ಭವಿಷ್ಯ ನಿಂತಿದೆ.

ಇದನ್ನೂ ಓದಿ: ಪೋಕ್ಸೋ ಕೇಸ್​​:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್

ಇನ್ನು ತಮ್ಮ ವಿರುದ್ಧದ ಪೋಕ್ಸೋ ಕೇಸ್​ ರದ್ದು ಕೋರಿ, ಮಲ್ಲಿಕಾರ್ಜುನ ಮುತ್ಯಾ ಕೂಡ ಇತ್ತೀಚೆಗೆ ಕಲಬುರಗಿ ಹೈಕೋರ್ಟ್ ಮೋರೆ ಹೋಗಿದ್ದರು. ಪ್ರಕರಣದ ವಿಚಾರಣೆಯನ್ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿತ್ತು. ಮಲ್ಲಿಕಾರ್ಜುನ ಮುತ್ಯಾ ತೆರೆಮರೆಯಲ್ಲೇ ಇದ್ದು, ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆ ಮೂಲಕ ತಾವು ಎಲ್ಲಿಗೆ ಹೋಗಿದ್ದೇನೆ ಎನ್ನುವುದನ್ನು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು

ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ಹರಿಬಿಟ್ಟ ಬೆನ್ನಲ್ಲೇ ಸಂತ್ರಸ್ತೆ ಬಾಲಕಿಯ ಪೋಷಕರು ಕೂಡ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಕಿಡಿಗೇಡಿಗಳು ವಿಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಅಪ್ಪಾ ಅವರದ್ದೂ ಯಾವುದೇ ತಪ್ಪಿಲ್ಲ, ಅವರು ದೇವರ ಸಮಾನ ಎಂದು ಹೇಳಿದ್ದರು.

ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ಭಕ್ತ ಸಮೂಹ

ಇನ್ನು ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ಭಕ್ತ ಸಮೂಹ ನಿಂತಿದೆ. ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಹೋರಾಟ ಸಮಿತಿ ಹಾಗೂ ಮಠದ ಭಕ್ತರ ನೇತೃತ್ವದಲ್ಲಿ ಇಂದು ಕಲಬುರಗಿಯಲ್ಲಿ ಬೃಹತ್ ಮೆರವಣಿಗೆ ಮಾಡಲಾಗಿದೆ. ಮಲ್ಲಿಕಾರ್ಜುನ ಮುತ್ಯಾ ಭಾವಚಿತ್ರ ಹಿಡಿದು ಅವರ ಜೊತೆಯಲ್ಲಿ ನಾವು ನಿಲ್ಲುತ್ತೇವೆ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಹೋರಾಟಕ್ಕೆ ಸಾಥ್ ನೀಡಿದ ವಿವಿಧ ಮಠಾಧೀಶರಿಂದ ಪೋಕ್ಸೋ ಕೇಸ್​ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ