AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಶೀಲ ಶಂಕಿಸಿ 2 ಮಕ್ಕಳ ಕೊಂದ ಪಾಪಿ: ಬದುಕುಳಿದ ಬಾಲಕನ ಸ್ಥಿತಿ ಗಂಭೀರ

ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕುಡುಗೋಲಿನಿಂದ ಕೊಚ್ಚಿ ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತಲೆಮರೆಸಿಕೊಂಡಿರೋ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ಪತ್ನಿ ಶೀಲ ಶಂಕಿಸಿ 2 ಮಕ್ಕಳ ಕೊಂದ ಪಾಪಿ: ಬದುಕುಳಿದ ಬಾಲಕನ ಸ್ಥಿತಿ ಗಂಭೀರ
ಪತ್ನಿ ಶೀಲ ಶಂಕಿಸಿ 2 ಮಕ್ಕಳ ಕೊಂದ ಪಾಪಿ
ಅಮೀನ್​ ಸಾಬ್​
| Edited By: |

Updated on:Sep 26, 2025 | 2:44 PM

Share

ಯಾದಗಿರಿ, ಸೆಪ್ಟೆಂಬರ್​ 26: ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕುಡುಗೋಲಿನಿಂದ ಕೊಚ್ಚಿ ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ (Yadgir) ತಾಲೂಕಿನ ದುಗನೂರು ಕ್ಯಾಂಪ್ ನಲ್ಲಿ ನಡೆದಿದೆ. ಭಾರ್ಗವ್ (3) ಮತ್ತು ಸಾನ್ವಿ (5) ಮೃತ ಮಕ್ಕಳಾಗಿದ್ದು, ಮತ್ತೋರ್ವ ಬಾಲಕ ಹೇಮಂತ್ (8) ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಬಳಿಕ ಆರೋಪಿ ಶರಣಪ್ಪ ಪರಾರಿಯಾಗಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ರಾತ್ರಿ ಕುಟುಂಬದ ಜೊತೆ ಕೂತು ಒಟ್ಟಿಗೆ ಊಟ ಮಾಡಿದ್ದ ಶರಣಪ್ಪ, ಪತ್ನಿ ಮತ್ತು ಮಕ್ಕಳ ಜೊತೆಗೇ ಮಲಗಿದ್ದ. ಬೆಳಗ್ಗೆ ಪತ್ನಿ ಜಯಮ್ಮ ಮತ್ತು ಆತನ ತಾಯಿ ಭೀಮವ್ವ ಬಹಿರ್ದೆಸೆಗೆ ಹೋದ ವೇಳೆ ಮನೆಯಲ್ಲಿದ್ದ ಕುಡುಗೋಲು ಬಳಸಿ ಶರಣಪ್ಪ ಮೂವವರು ಮಕ್ಕಳ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಇಬ್ಬರು ಮೃತ ಪಟ್ಟಿದ್ದಾರೆ. ಹಿರಿಯ ಮಗ ಹೇಮಂತ್​ ಬೆನ್ನಿಗೆ ಗಾಯವಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಹೇಮಂತನಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

2 ವರ್ಷಗಳ ಹಿಂದೆ ತವರು ಸೇರಿದ್ದ ಪತ್ನಿ

ಹತ್ತು ವರ್ಷಗಳ ಹಿಂದೆ ಜಯಮ್ಮಳ ಜೊತೆ ಶರಣಪ್ಪ ಮದುವೆ ಆಗಿದ್ದ. ಆರಂಭದ ವರ್ಷಗಳಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಇಬ್ಬರ ದಾಂಪತ್ಯಕ್ಕೆ ಸಾಕ್ಷಿಯೆಂಬಂತೆ ಮೂರು ಜನ ಮುದ್ದಾದ ಮಕ್ಕಳೂ ಇದ್ದರು. ಆದರೆ ಕಳೆದ ಎರಡು ವರ್ಷಗಳಿಂದ ವಿಪರೀತವಾಗಿ ಪತ್ನಿಯ ಶೀಲ ಶಂಕಿಸುತ್ತಿದ್ದ ಶರಣಪ್ಪ, ಜಯಮ್ಮ ಯಾರ ಜೊತೆಗೆ ಮಾತಾಡಿದ್ರೂ ಅನುಮಾನ ಪಡುತ್ತಿದ್ದ. ಇರುವ ಮೂವರು ಮಕ್ಕಳು ತನಗೆ ಹುಟ್ಟಿಲ್ಲ ಎನ್ನುತ್ತಿದ್ದ. ಇದೇ ಕಾರಣಕ್ಕೆ ಜೀವ ಭಯದಿಂದ ಎರಡು ವರ್ಷಗಳ ಹಿಂದೆ ಮಕ್ಕಳ ಜೊತೆ ಜಯಮ್ಮ ತವರು ಸೇರಿದ್ದರು. ರಾಜಿ ಪಂಚಾಯತಿ ಬಳಿಕ ಕಳೆದ 15 ದಿನಗಳ ಹಿಂದೆಯಷ್ಟೇ ಪತಿ ಮನೆಗೆ ವಾಪಸ್​ ಬಂದಿದ್ದರು.

ಇದನ್ನೂ ಓದಿ: ರಕ್ಷಣೆಗಾಗಿ ಯಾರ ಕೂಗಲಿ: ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್​​ಮೇಲ್ ಮಾಡಿದ ಸ್ವಂತ ಅಣ್ಣಂದಿರು

ಇಬ್ಬರು ಮಕ್ಕಳನ್ನ ಕಳೆದುಕೊಂಡಿರುವ ತಾಯಿ ಜಯಮ್ಮ ರೋದನೆ ಮುಗಿಲು ಮುಟ್ಟಿದ್ದರೆ, ಪಾಪಿ ಶರಣಪ್ಪನೇ ಕೊಲೆ ಮಾಡಿ ಓಡಿ ಹೋಗಿದ್ದಾನೆ ಅವನು ಸಿಕ್ರೆ ಅಲ್ಲೇ ಸಾಯಿಸಬೇಕು ಅಂತ ಆರೋಪಿಯ ತಾಯಿ ಭೀಮವ್ವ ಕಣ್ಣೀರು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರೂ ಆಗಮಿಸಿದ್ದು, ಮನೆಯಲ್ಲಿ ನಿರವ ಮೌನ ಆವರಿಸಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ತಂಡ ರಚಿಸಿ ಹುಡುಕಾಟ ನಡೆಸಲಾಗ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:38 pm, Fri, 26 September 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ