ಹಣ ಕೊಡುತ್ತೇವೆ ಅಂದರೂ ಬೇರೆ ರಾಜ್ಯಗಳಿಂದ ಸಿಗುತ್ತಿಲ್ಲ ವಿದ್ಯುತ್: ಯಾದಗಿರಿಯಲ್ಲಿ ಸಚಿವ ಕೃಷ್ಣ ಭೈರೇಗೌಡ ಅಳಲು

ವಿದ್ಯುತ್ ಸಮಸ್ಯೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಬಹಳ ಗಂಭೀರವಾಗಿ ಪರಿಣಿಸಿದ್ದಾರೆ. ಎಲ್ಲಾ ವಿದ್ಯುತ್ ಕಂಪನಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಇಂಧನ ಸಚಿವರು ವಿದ್ಯುತ್ ಖರೀದಿಸಲು ಎಲ್ಲಾ ಕಡೆ ಪ್ರಯತ್ನ ಮಾಡ್ತಿದ್ದಾರೆ. ಯಾದಗಿರಿ ಉಸ್ತುವಾರಿ ಸಚಿವರು ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಹಣ ಕೊಡುತ್ತೇವೆ ಅಂದರೂ ಬೇರೆ ರಾಜ್ಯಗಳಿಂದ ಸಿಗುತ್ತಿಲ್ಲ ವಿದ್ಯುತ್: ಯಾದಗಿರಿಯಲ್ಲಿ ಸಚಿವ ಕೃಷ್ಣ ಭೈರೇಗೌಡ ಅಳಲು
ಕೃಷ್ಣ ಭೈರೇಗೌಡ
Follow us
ಅಮೀನ್​ ಸಾಬ್​
| Updated By: Ganapathi Sharma

Updated on: Oct 26, 2023 | 7:03 PM

ಯಾದಗಿರಿ, ಅಕ್ಟೋಬರ್ 26: ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ವಿದ್ಯುತ್ (Power Crisis) ಸಮಸ್ಯೆಯಿದೆ. ಹಣ ಕೊಡುತ್ತೇವೆ ಅಂದರೂ ಬೇರೆ ರಾಜ್ಯಗಳಿಂದ ವಿದ್ಯುತ್ ಸಿಗುತ್ತಿಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದರು. ಯಾದಗಿರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ (Load Sheding) ಸಮಸ್ಯೆ ಇಲ್ಲ ಎನ್ನುವ ಇಂಧನ ಸಚಿವ ಜಾರ್ಜ್ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದರು.

ವಿದ್ಯುತ್ ಸಮಸ್ಯೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಬಹಳ ಗಂಭೀರವಾಗಿ ಪರಿಣಿಸಿದ್ದಾರೆ. ಎಲ್ಲಾ ವಿದ್ಯುತ್ ಕಂಪನಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಇಂಧನ ಸಚಿವರು ವಿದ್ಯುತ್ ಖರೀದಿಸಲು ಎಲ್ಲಾ ಕಡೆ ಪ್ರಯತ್ನ ಮಾಡ್ತಿದ್ದಾರೆ. ಯಾದಗಿರಿ ಉಸ್ತುವಾರಿ ಸಚಿವರು ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಇರುವುದರಲ್ಲೇ ವೇರಿಯೇಷನ್ ಮಾಡಿ ವಿದ್ಯುತ್ ನೀಡಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ಜಲವಿದ್ಯುತ್ ಉತ್ಪಾದನೆಗೂ ಸಮಸ್ಯೆಯಾಗಿದೆ. ಈ ಮಧ್ಯೆ, ರಾಜ್ಯಗಳಲ್ಲಿ ವಿದ್ಯುತ್ ಬಳಕೆ ಮಾಡೋದು ಏಕಕಾಲಕ್ಕೆ ಜಾಸ್ತಿ ಆಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದಲೂ ಸಿಗುತ್ತಿಲ್ಲ. ಈ ಸಮಸ್ಯೆಗೆ ಸರ್ಕಾರ ಪರಿಹಾರ ಕಂಡುಕೊಳ್ಳಲಿದೆ. ಸಮಸ್ಯೆ ಇಲ್ಲ‌ ಅಂತ‌ ನಾನು ಹೇಳುತ್ತಿಲ್ಲ. ಸಮಸ್ಯೆ ಇದೆ. ಅದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು

ಬರದ ಮಧ್ಯೆ ರೈತರ ಪಂಪ್​ಸೆಟ್​ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದಿರುವುದು ಕೃಷಿ ಚಟುವಟಿಕೆಗಳಿಗೂ ಹೊಡೆತ ನೀಡಿದೆ. ಈ ಮಧ್ಯೆ, ವಿದ್ಯುತ್ ಕೊರತೆ ವಿಚಾರವಾಗಿ ಪ್ರತಿಪಕ್ಷಗಳೂ ಸರ್ಕಾರವನ್ನು ತೀವ್ರರವಾಘಿ ತರಾಟೆಗೆ ತೆಗೆದುಕೊಳ್ಳುತ್ತಿವೆ. ರಾಜ್ಯದಲ್ಲಿ ಬರ ಇರುವುದು ನಿಜ. ಆದರೆ, ಅದರ ನುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ ಕೃತಕ ಅಭಾವ ಸೃಷ್ಟಿಸಿದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಇತ್ತೀಚೆಗೆ ಆರೋಪಿಸಿದ್ದರು. ಇದು ರಾಜಕೀಯವಾಗಿಯೂ ತೀವ್ರ ವಾಕ್ಸಮರಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ