ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ; ವಿಧಾನಮಂಡಲ ಅಧಿವೇಶನದಲ್ಲಿ ಬದಲಾವಣೆ ಇಲ್ಲ

ಯಾದಗಿರಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ರಾಜಕೀಯ ಗಣ್ಯರು, ಆಪ್ತರು ಸುರಪುರದಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಹಾಘೂ ಇಂದು ಎಂದಿನಂತೆ ಅಧಿವೇಶನ ನಡೆಯಲಿದೆ.

ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ; ವಿಧಾನಮಂಡಲ ಅಧಿವೇಶನದಲ್ಲಿ ಬದಲಾವಣೆ ಇಲ್ಲ
ಶಾಸಕ ರಾಜಾ ವೆಂಕಟಪ್ಪ ನಾಯಕ
Follow us
ಅಮೀನ್​ ಸಾಬ್​
| Updated By: ಆಯೇಷಾ ಬಾನು

Updated on: Feb 26, 2024 | 7:26 AM

ಯಾದಗಿರಿ, ಫೆ.26: ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ(67) (raja venkatappa nayaka) ಅವರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸುರಪುರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಲವು ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಇಂದು ಸದನ ಮುಂದೂಡಲಾಗುತ್ತೆ ಎಂದು ಹೇಳಲಾಗುತ್ತಿತ್ತು. ಸದ್ಯ ನಿಗದಿಯಂತೆ ಇಂದು ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಕಚೇರಿಯಿಂದ ಶಾಸಕರಿಗೆ ಮೆಸೇಜ್ ರವಾನೆಯಾಗಿದೆ.

ಯಾದಗಿರಿ ಜಿಲ್ಲೆ ಸುರಪುರದ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬೆಂಗಳೂರಿನಿಂದ ಸುರಪುರಕ್ಕೆ ಪಾರ್ಥಿವ ಶರೀರ ಆಗಮನದ ಬಳಿಕ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಇಪತ್ತು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಗೆ ದಾಖಲಾದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣ್ತಾಯಿತ್ತು. ಜನರಲ್ ವಾರ್ಡ್​ಗೂ ಸಹ ಶಿಫ್ಟ್ ಮಾಡಿದ್ರು. ಆದರೆ ನಿನ್ನೆ ದಿಢೀರ್ ಆಗಿ ಬಿಪಿ ಕಡಿಮೆ ಆಗ್ತಾ ಬಂತು. ದಿಢೀರ್ ಆಗಿ ‌ನಿನ್ನೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೊನೆ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಕೇಳಿದ್ರು. ಪತ್ನಿ ಮುಂದೆ ಖರ್ಗೆ ಅವರ ಬಗ್ಗೆ ಕೇಳಿದ್ರು. ಬೆಳಗ್ಗೆ ಪಾರ್ಥಿವ ಶರೀರ ಸುರಪುರಕ್ಕೆ ಬಂದಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನ ಮಾಡಲಾಗುತ್ತೆ. ಬಳಿಕ 11 ಗಂಟೆಗೆ ಪ್ರಭು ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ ಎಂದ ಮಾಹಿತಿ ನೀಡಿದರು.

ಇನ್ನು ವಸಂತಮಹಲ್ ನಿವಾಸದಲ್ಲಿ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರಿಂದ ಪೂಜೆ ನೆರವೇರಿದೆ. ಬೆಳಗ್ಗೆ 7 ಗಂಟೆಯಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಯಾದಗಿರಿ ಜಿಲ್ಲೆ ಸುರಪುರದ ಪ್ರಭು ಕಾಲೇಜಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿದ್ದು ಸಂಜೆ 4 ಗಂಟೆಗೆ ಮಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಪ್ಯಾಪ್ಲಿ ರಾಜ ಮನೆತನದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಲವು ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜಾ ವೆಂಕಟಪ್ಪ ನಾಯಕ ಆಪ್ತ ರಾಜಶೇಖರಗೌಡ ವಜ್ಜಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚಾರ್ಮಾಡಿ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋದ DYSP ಸಂಬಂಧಿಕರು ನಾಪತ್ತೆ

ಇಂದು ನಿಗದಿಯಂತೆ ಅಧಿವೇಶನ ಮುಂದುವರಿಯುತ್ತೆ

ನಿಗದಿಯಂತೆ ಇಂದು ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಕಚೇರಿಯಿಂದ ಶಾಸಕರಿಗೆ ಮೆಸೇಜ್ ರವಾನೆಯಾಗಿದೆ. ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಹಿನ್ನೆಲೆ ಇಂದು ಸದನ ಮುಂದೂಡಿದ್ದ ಬಗ್ಗೆ ಗುಮಾನಿ ಎದ್ದಿತ್ತು. ಹೀಗಾಗಿ ನಿಗದಿಯಂತೆ ಅಧಿವೇಶನ ಮುಂದುವರಿಯುವ ಬಗ್ಗೆ ಸ್ಪೀಕರ್ ಕಚೇರಿಯಿಂದ ಮೆಸೇಜ್ ಪಾಸ್ ಆಗಿದೆ.

ರಾಜವೆಂಕಟಪ್ಪ ನಾಯಕ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಇಂದು ಮಧ್ಯಾಹ್ನ‌ 12 ಗಂಟೆಗೆ HAL ಏರ್‌ಪೋರ್ಟ್‌ನಿಂದ ಯಾದಗಿರಿ ಜಿಲ್ಲೆ ಸುರಪುರಕ್ಕೆ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಅಂತ್ಯಸಂಸ್ಕಾರ ನಡೆದ ನಂತರ ಸಂಜೆಯೇ ಬೆಂಗಳೂರಿಗೆ ಸಿಎಂ ಹಿಂದಿರುಗಲಿದ್ದಾರೆ.

ಸ್ವಯಂ ಪ್ರೇರಿತವಾಗಿ ಬಂದ್ ಆದ ಸುರಪುರ

ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶರಾದ ಹಿನ್ನಲೆ ಇಂದು ಸ್ವಯಂ ಪ್ರೇರಿತವಾಗಿ ಸುರಪುರ ನಗರ ಬಂದ್ ಆಗಿದೆ. ನಗರದ ಪ್ರತಿಯೊಂದು ಅಂಗಡಿ ಮುಗ್ಗಟ್ಟು ಬಂದ್ ಆಗಿದೆ. ಇಡೀ ಸುರಪುರ ಶೋಕದಲ್ಲಿ ಮುಳುಗಿದೆ. ಹೀಗಾಗಿ ತಾವಾಗೆ ಅಂಗಡಿಗಳನ್ನ ಬಂದ್ ಮಾಡಿ ಮಾಲೀಕರು ಸಂತಾಪ ಸೂಚಿಸಿದ್ದಾರೆ. ನಿನ್ನೆ ಸಾವಿನ ಸುದ್ದಿ ತಿಳಿಯುತ್ತಿದ್ದ ಹಾಗೆಯೇ ಅಂಗಡಿಗಳನ್ನು ಬಂದ್ ಮಾಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್