ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇಂದು ಬೆಳಗ್ಗೆ ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟಿನಲ್ಲಿ ಹಲ್ಲಿಬಿದ್ದ ಪರಿಣಾಮ ಅದನ್ನು ಸೇವಿಸಿ 27ಕ್ಕೂ ಹೆಚ್ಚು ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳು
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jul 08, 2023 | 3:51 PM

ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27ಕ್ಕೂ ಹೆಚ್ಚು ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು (students) ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟು ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಬಳಿಕ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯತನದಿಂದ ಹೀಗಾಗಿದೆ ಎಂದು ಪೋಷಕರ ಆರೋಪ ಮಾಡಿದ್ದಾರೆ.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 4 ವಿದ್ಯಾರ್ಥಿಗಳು ಅಸ್ವಸ್ಥ

ಇತ್ತೀಚೆಗೆ ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಸರ್ಕಾರ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ ಪರಿಣಾಮ 4 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಕೂಡಲೇ ವೈದ್ಯರನ್ನು ಶಾಲೆಗೆ ಕರೆಸಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಹೀಗಾಗಲು ಕಾರಣ ಎಂದು ಪೋಷಕರು ಆರೋಪಿಸಿದ್ದರು.

ಇದನ್ನೂ ಓದಿ: Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಿಂದ ಮಳಖೇಡ್ ಗ್ರಾಮಕ್ಕೆ ಬಸ್ ಸೌಲಭ್ಯಕ್ಕಾಗಿ ನೂರಾರು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ನಾನು ಹೂಡಾ ಬಿ ಗ್ರಾಮದಿಂದ ಮಳಖೇಡ್ ಗ್ರಾಮಕ್ಕೆ ಶಾಲೆ, ಕಾಲೇಜಿಗೆ ಹೋಗುತ್ತೇವೆ. ಆದರೆ ಬಸ್ ಇಲ್ಲದೇ ಇರೋದರಿಂದ ಇದೀಗ ನಡೆದುಕೊಂಡು ಹೋಗಬೇಕಾಗಿದೆ. ಬಸ್ ಸೌಲಭ್ಯ ಕಲ್ಪಿಸುವಂತೆ ಹತ್ತಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡಾ ಪ್ರಯೋಜನವಾಗಿಲ್ಲಾ. ಕೂಡಲೇ ಬಸ್ ಸೌಲಭ್ಯ ಕಲ್ಪಿಸಬೇಕು ಅಂತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ನೆಚ್ಚಿನ ಶಿಕ್ಷಕರ ವರ್ಗಾವಣೆಗೆ ವಿದ್ಯಾರ್ಥಿಗಳು ಕಣ್ಣೀರು

ಗದಗ: ನಗರದ ಖಾನತೋಟ ಓಣಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ 2 ರಲ್ಲಿ ದೈಹಿಕ ಶಿಕ್ಷಕ ವರ್ಗಾವಣೆಗೊಂಡಿದ್ದಾರೆ. ಇದರಿಂದ ತಮ್ಮ ನೆಚ್ಚಿನ ಶಿಕ್ಷಕನನ್ನು ತಬ್ಬಿಕೊಂಡು ಶಾಲೆಯ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ದೈಹಿಕ ಶಿಕ್ಷಕ ಎಸ್ ಬಿ ಪೂಜಾರ ಕಳೆದ ಒಂದೂವರೆ ವರ್ಷದಿಂದ ಈ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ: ವೈದ್ಯರನ್ನು ಕರೆಸಿ ಶಾಲೆಯಲ್ಲೇ ಮಕ್ಕಳಿಗೆ ಚಿಕಿತ್ಸೆ

ಈಗ ಗದಗ ತಾಲೂಕಿನ ವೆಂಕಟಾಪುರ ಗ್ರಾಮದ ಸರಕಾರಿ ಶಾಲೆಗೆ ವರ್ಗಾವಣೆಗೊಳಿಸಿ ಬಿಇಓ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರಿಂದ ಬೀಳ್ಕೊಡುವ ಸಮಾರಂಭ ಆಯೋಜನೆ ಮಾಡಲಾಗಿತ್ತು. ಬೀಳ್ಕೊಡುವ ಸಮಾರಂಭದಲ್ಲಿ ತಮ್ಮ ನೆಚ್ಚಿನ ಶಿಕ್ಷಕನನ್ನು ಸುತ್ತುವರೆದು ಮಕ್ಕಳು ಕಣ್ಣೀರು ಹಾಕಿದ್ದಾರೆ. ಮಕ್ಕಳನ್ನು ಸಮಾಧಾನಪಡಿಸಿ ಮತ್ತೆ ಇದೇ ಶಾಲೆಗೆ ಬರ್ತೀನಿ ಎಂದು ಶಿಕ್ಷಕ ತಮ್ಮ ಪ್ರೀತಿಯ ವಿಧ್ಯಾರ್ಥಿನಿಯರನ್ನು ಸಮಾಧಾನ ಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ