ಯಾದಗಿರಿ: ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ತಾಯಿ
ತಾಯಿ-ಮಗ ಇಬ್ಬರೂ ಒಂದೇ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಅಪರೂಪದ ಪ್ರಸಂಗ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ತಾಯಿ ಗಂಗಮ್ಮ ಹಾಗೂ ಮಗನ ಮಲ್ಲಿಕಾರ್ಜುನ ಒಂದೇ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಯಾದಗಿರಿ, ಮಾರ್ಚ್.25: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಭಾಗ್ಯ ತನ್ನ ಮಗಳು ತನ್ವಿ ಜೊತೆ ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ಬರೆಯುವ ಎಪಿಸೋಡ್ ಪ್ರಸಾರವಾಗುತ್ತಿದೆ. ಸದ್ಯ ಇದೇ ಮಾದರಿಯ ರಿಯಲ್ ಕಥೆಯೊಂದು ಯಾದಗಿರಿಯಲ್ಲಿ ಕಂಡು ಬಂದಿದೆ. ಆದರೆ ಇಲ್ಲಿ 32 ವರ್ಷದ ತಾಯಿ ತನ್ನ ಮಗನ ಜೊತೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಂದೇ ಪರೀಕ್ಷಾ ಕೇಂದ್ರದಲ್ಲಿ ತಾಯಿ-ಮಗ ಪರೀಕ್ಷೆ ಬರೆಯುತ್ತಿರುವ ಅಪರೂಪದ ಪ್ರಸಂಗ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ತಾಯಿ ಗಂಗಮ್ಮ (32) ಹಾಗೂ ಆಕೆಯ ಮಗನ ಮಲ್ಲಿಕಾರ್ಜುನ ಒಂದೇ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನನ್ನ ಮಗನೊಟ್ಟಿಗೆ ಬರೆಯುತ್ತಿರುವುದು ಸಂತಸ ತಂದಿದೆ ಎಂದು ಗಂಗಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ಮಗ ಮಲ್ಲಿಕಾರ್ಜುನ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು, ಶಹಾಪುರ ತಾಲೂಕಿನ ಸಗರ ಪರೀಕ್ಷಾ ಕೇಂದ್ರದಲ್ಲಿ ತಾಯಿಯೊಡನೆ ಪರೀಕ್ಷೆ ಬರೆಯುತ್ತಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
