ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ

Yadgir News: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ಗ್ರಾಮ ಸಾಕ್ಷಿಯಾಗಿದೆ.

ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ
ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on:Aug 04, 2023 | 4:48 PM

ಯಾದಗಿರಿ, ಆಗಸ್ಟ್​ 04: ಜಿಲ್ಲೆಯ ಸುರಪುರ ತಾಲೂಕಿನ ನಗನೂರ (Naganur) ಗ್ರಾಮದಲ್ಲಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಶುಕ್ರವಾರ ನಡೆದಿದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ನಗನೂರ ಗ್ರಾಮ ಪಂಚಾಯತ್ ಚುನಾವಣೆ ಸಾಕ್ಷಿಯಾಗಿದೆ.

ಒಂದು ಮತ ಅಸಿಂಧು

ಒಟ್ಟು 19 ಜನ ಸದಸ್ಯರಿಂದ ಮತ ಚಲಾವಣೆ ಮಾಡಲಾಗಿದ್ದು, ಅದರಲ್ಲಿ ಒಂದು ಮತ ಅಸಿಂಧುಗೊಂಡಿದೆ. ಹಾಗಾಗಗಿ ಚುನಾವಣಾ ಫಲಿತಾಂಶ ಭಾರೀ ಗೊಂದಲ ಸೃಷ್ಠಿ ಮಾಡಿತ್ತು. ಇದರಿಂದಾಗಿ ನಗನೂರು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದರು. ಬಳಿಕ ಅಸಿಂಧು ಮತದಿಂದಾಗಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ/ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಬುಧವಾರ ದೆಹಲಿ ಹೈಕಮಾಂಡ್ ಸಭೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕರೆಲ್ಲ ಭ್ರಷ್ಟಾಚಾರದ ಆರೋಪಗಳ ಮೇಲೆ ಚರ್ಚೆ ನಡೆಯಲಿಲ್ಲ ಎನ್ನುತ್ತಾರೆ!

ಕಳೆದ ತಿಂಗಳು ಮೀಸಲಾತಿ ಘೋಷಣೆಯ ದಿನ ಇದೇ ಪಂಚಾಯತಿಯ ಇಬ್ಬರು ಸದಸ್ಯರು ನಾಪತ್ತೆಯಾಗಿದ್ದರು. ಮೂರು ದಿನಗಳ ಬಳಿಕ ಸದಸ್ಯರು ಪತ್ತಯಾಗಿದ್ದರು. ಬಳಿಕ ಘಟನೆ ಸುಖಾಂತ್ಯಗೊಂಡಿತ್ತು.

ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ

ಚುನಾವಣೆ ಹಿನ್ನಲೆ ಯಾದಗಿರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿ‌ ಯಾದಗಿರಿ ಡಿಸಿ ಸುಶೀಲಾ ಬಿ ಆದೇಶ ಹೊರಡಿಸಿದ್ದರು. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​

ಚುನಾವಣೆ ವೇಳೆ ಗಲಾಟೆ ನಡೆಯುವ ಸಾಧ್ಯತೆ ಹಿನ್ನಲೆ ಹುಣಸಗಿ ಹಾಗೂ ಸುರಪುರ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿಂದೆ‌ ಎರಡು ತಾಲೂಕಿನ ಕೆಲ‌ ಕಡೆ ಗಲಾಟೆಗಳು ನಡೆದಿದ್ದವು. ಇವತ್ತು ಮತ್ತೆ ಗಲಾಟೆ ನಡೆಯಬಹುದು ಅಂತ ಜಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:35 pm, Fri, 4 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ