ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ

ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್​​​ ಉಗ್ರನನ್ನು ಎನ್​ಐಎ ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ
ಬಂಧಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ ಯಾದಗಿರಿಯ ಶಹಾಪುರ ನಗರದ ವ್ಯಕ್ತಿಯ ಮನೆಗೆ ಆಗಮಿಸಿ ವಿಚಾರಣೆ ನಡೆಸಿದ ಎನ್​ಐಎ
Follow us
| Updated By: Rakesh Nayak Manchi

Updated on:Sep 14, 2023 | 11:46 AM

ಯಾದಗಿರಿ, ಸೆ.14: ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್ (ISIS)​​​ ಉಗ್ರನನ್ನು ಎನ್​ಐಎ (NIA) ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ(Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ

ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿದೆ. ಇಂದು ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.

ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Thu, 14 September 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ