
ಯಾದಗಿರಿ: ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ವಿಫ್ಟ್ ಕಾರು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಸುರಪುರ ತಾಲೂಕಿನ ಪೇಟ ಅಮ್ಮಪುರ ಗ್ರಾಮದ ಕುಮಾರಸ್ವಾಮಿ ಎಂಬುವರಿಗೆ ಸೇರಿದ ಕಾರು ಬೆಂಕಿಗಾಹುತಿಯಾಗಿದೆ.
ಡಿಕ್ಕಿಯ ರಭಸಕ್ಕೆ ಮತ್ತೊಂದು ಕಾರು ಸಹ ಜಖಂಗೊಂಡಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಐದು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.