ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಿನ್ಸಿಪಾಲ್ ಸಸ್ಪೆಂಡ್

| Updated By: ಸಾಧು ಶ್ರೀನಾಥ್​

Updated on: Nov 12, 2021 | 8:27 PM

ನಿನ್ನೆ ಹಯ್ಯಾಳಪ್ಪ ವಿರುದ್ಧ ಯಾದಗಿರಿ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್​ ದಾಖಲಾಗಿತ್ತು. ಪೊಲೀಸರು ಹಯ್ಯಾಳಪ್ಪ ಜಾಗೀರ್​ದಾರ್​ರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ಯಾದಗಿರಿ ಎಸ್​ಪಿ ಡಾ. ವೇದಮೂರ್ತಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಿನ್ಸಿಪಾಲ್ ಸಸ್ಪೆಂಡ್
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಿನ್ಸಿಪಾಲ್ ಸಸ್ಪೆಂಡ್
Follow us on

ಯಾದಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಸಂಬಂಧ ಕರ್ತವ್ಯಲೋಪ ಹಿನ್ನೆಲೆ ಪ್ರಭಾರ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲ ಹಯ್ಯಾಳಪ್ಪ ಜಾಗೀರ್​ದಾರ್ ಸಸ್ಪೆಂಡ್ ಆದವರು. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ದೇಸಾಯಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಯಾದಗಿರಿ ತಾಲೂಕಿನ ಮುಂಡರಗಿ ಬಳಿಯಿರುವ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡುವುದಾಗಿ ಆಮಿಷಯೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ನಿನ್ನೆ ಹಯ್ಯಾಳಪ್ಪ ವಿರುದ್ಧ ಯಾದಗಿರಿ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್​ ದಾಖಲಾಗಿತ್ತು. ಪೊಲೀಸರು ಹಯ್ಯಾಳಪ್ಪ ಜಾಗೀರ್​ದಾರ್​ರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ಯಾದಗಿರಿ ಎಸ್​ಪಿ ಡಾ. ವೇದಮೂರ್ತಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(physical assault on hostel girl principal suspended in mundargi in yadgir district)