PM Modi Yadgiri visit: ಜನವರಿ 19 ರಂದು ಪ್ರಧಾನಿ ಮೋದಿ ಯಾದಗಿರಿಗೆ: ಹುಣಸಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

| Updated By: ವಿವೇಕ ಬಿರಾದಾರ

Updated on: Jan 17, 2023 | 9:45 AM

PM Narendra Modi: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್​ನಲ್ಲಿ ಬೆಳಿಗ್ಗೆ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

PM Modi Yadgiri visit: ಜನವರಿ 19 ರಂದು ಪ್ರಧಾನಿ ಮೋದಿ ಯಾದಗಿರಿಗೆ: ಹುಣಸಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಹುಣಸಗಿ ಪದವಿ ಪೂರ್ವ ಕಾಲೇಜ್​, ಪ್ರಧಾನಿ ನರೇಂದ್ರ ಮೋದಿ
Follow us on

ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರಥಮ ಬಾರಿಗೆ ಯಾದಗಿರಿ (Yadgiri) ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜನವರಿ 19ರಂದು ಪ್ರಧಾನಿ ಮೋದಿ ಹುಣಸಗಿ ತಾಲೂಕಿನ ಕೊಡೆಕಲ್​​ನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಜ.19ರಂದು ಹುಣಸಗಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ತಾಲೂಕಿನ ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ನೀಡಾಗಿದೆ ಎಂದು ಹುಣಸಗಿ ತಹಶೀಲ್ದಾರ್​​ ಜಗದೀಶ್ ಚೌರ್ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿಯವರು 1,050 ಕೋಟಿ ರೂ. ವೆಚ್ಚದಲ್ಲಿ ಬಸವಸಾಗರ ಜಲಾಶಯಕ್ಕೆ ನಿರ್ಮಾಣ ಮಾಡಿರುವ 365 ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಹಾಗೇ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಜಲಧಾರೆ ಯೋಜನೆಯ 2,004 ಕೋಟಿ ರೂ. ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.

ಇದನ್ನೂ ಓದಿ: ಜ. 19 ಕಲಬುರಗಿಗೆ ಪ್ರಧಾನಿ ಮೋದಿ ಪ್ರವಾಸ ಫಿಕ್ಸ್, ತವರಿನಲ್ಲಿ ಖರ್ಗೆಗೆ ಟಕ್ಕರ್ ಕೊಡಲು ಕಮಲ ನಾಯಕರು ಸಜ್ಜು

ಇದರಿಂದ ಜಿಲ್ಲೆಯ ಹುಣಸಗಿ ತಾಲ್ಲೂಕು, ಸುರಪುರ ತಾಲ್ಲೂಕು, ಶಹಾಪುರ, ವಡಗೇರಾ ತಾಲ್ಲೂಕು, ಯಾದಗಿರಿ ತಾಲ್ಲೂಕು ಹಾಗೂ ಗುರುಮಠಕಲ್ ತಾಲ್ಲೂಕಿನ ಒಟ್ಟು ಜಿಲ್ಲೆಯ 710 ಗ್ರಾಮೀಣ ಜನವಸತಿಗಳಿಗೆ ಹಾಗೂ 3 ಸ್ಥಳೀಯ ಸಂಸ್ಥೆಗಳಿಗೆ ಮತ್ತು ಹುಣಸಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Tue, 17 January 23