AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಅಕ್ರಮವಾಗಿ ಮಾರಲು ಮುಂದಾಗಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಜಪ್ತಿ

ಕಾಳ ಸಂತೆಯಲ್ಲಿ ಹಾಲಿನ ಪೌಡರ್ ಮಾರಾಟಕ್ಕೆ ಯತ್ನಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕಲಬುರಗಿ, ಯಾದಗಿರಿ-ಬೀದರ್ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಆರ್​ಕೆ ಪಾಟೀಲ್ ಯಾದಗಿರಿ ಡಿಸಿಗೆ ಪತ್ರ ಬರೆದಿದ್ದಾರೆ.

ಯಾದಗಿರಿಯಲ್ಲಿ ಅಕ್ರಮವಾಗಿ ಮಾರಲು ಮುಂದಾಗಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಜಪ್ತಿ
ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್​ನ ಪೊಲೀಸರು ಜಪ್ತಿ ಮಾಡಿದ್ದಾರೆ
TV9 Web
| Edited By: |

Updated on: Dec 16, 2021 | 11:12 AM

Share

ಯಾದಗಿರಿ: ಅಕ್ರಮವಾಗಿ ಮಾರಲು ಮುಂದಾಗಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್​ನ ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಸುರಪುರ ನಗರದಲ್ಲಿ ಅಕ್ರಮವಾಗಿ ಮಾರಲು ಮುಂದಾಗಿದ್ದ ಹಾಲಿನ ಪೌಡರ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಲಾ ಮಕ್ಕಳಿಗೆ ಸೇರಬೇಕಿದ್ದ ಹಾಲಿನ ಪೌಡರ್ ಕಾಳ ಸಂತೆಯಲ್ಲಿ ಮಾರಲು ಯತ್ನಿಸಿದ್ದಾರೆ. ಸದ್ಯ 22 ಚೀಲದಲ್ಲಿ ತುಂಬಿದ ಹಾಲಿನ ಪೌಡರ್ ಮತ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾಲಿನ ಪೌಡರ್​ನ ಕಲಬುಗರಿ ಜಿಲ್ಲೆಯ ಮೂಲದವರು ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡಲು ಹಾಲು ನೀಡಲಾಗುತ್ತದೆ. ಆದರೆ ಮಕ್ಕಳಿಗೆ ಸೇರಬೇಕಾಗಿರುವ ಹಾಲಿಗೆ ಕನ್ನ ಹಾಕುತ್ತಿರುವ ಖದೀಮರು ಈ ಕೃತ್ಯಕ್ಕೆ ಎಸಗಲು ಮುಂದಾಗಿದ್ದಾರೆ. ಕಳ್ಳ ದಂಧೆಯಲ್ಲಿ ಯಾದಗಿರಿ ಜಿಲ್ಲೆಯ ಅಕ್ಷರ ದಾಸೋಹ ಅಧಿಕಾರಿ ಸಹ ಶಾಮೀಲು ಆಗಿರುವ ಆರೋಪ ಕೇಳಿಬಂದಿದೆ.

ಕಾಳ ಸಂತೆಯಲ್ಲಿ ಹಾಲಿನ ಪೌಡರ್ ಮಾರಾಟಕ್ಕೆ ಯತ್ನಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕಲಬುರಗಿ, ಯಾದಗಿರಿ-ಬೀದರ್ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಆರ್​ಕೆ ಪಾಟೀಲ್ ಯಾದಗಿರಿ ಡಿಸಿಗೆ ಪತ್ರ ಬರೆದಿದ್ದಾರೆ. ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2 ಮನೆಗಳಲ್ಲಿ ಕಳವು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುರದ ಹೊಸ ಬಡಾವಣೆಯ 2 ಮನೆಗಳಲ್ಲಿ ಕಳ್ಳತನವಾಗಿದೆ. ಚಿನ್ನಮ್ಮ, ಶಾಂತಮ್ಮ ಎಂಬುವರ ಮನೆ ಬೀಗ ಒಡೆದು ಕೃತ್ಯ ಎಸಗಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಮನೆಯಿಂದ ಸುಮಾರು 40 ಸಾವಿರ ರೂ. ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ; ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ನಗರದ ಬದುಕಿನ ಅಲಾರಾಂ ಟೈಮ್ ಮತ್ತು ಹಳ್ಳಿ ಮನೆಯ ಗೋಡೆ ಗಡಿಯಾರ