AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ಪರಶುರಾಮ ಸಾವು: ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿಯನ್ನು ಬಂಧಿಸುವಂತೆ ಸಿಎಂಗೆ ಪತ್ರ

ಯಾದಗಿರಿ ಪಿಎಸ್​ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ರಾಜಕೀಯ ವಾಗ್ಯುದ್ಧಗಳಿಗೂ ಕಾರಣವಾಗಿತ್ತು. ಪಿಎಸ್​ಐ ಪರಶುರಾಮ ಮೃತಪಟ್ಟು 45 ದಿನಗಳು ಕಳೆದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ವಿಧಾನ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಿಎಸ್​ಐ ಪರಶುರಾಮ ಸಾವು: ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿಯನ್ನು ಬಂಧಿಸುವಂತೆ ಸಿಎಂಗೆ ಪತ್ರ
ಛಲುವಾದಿ ನಾರಾಯಣಸ್ವಾಮಿ, ಪಿಎಸ್​ಐ ಪರಶುರಾಮ
ಅಮೀನ್​ ಸಾಬ್​
| Edited By: |

Updated on:Sep 23, 2024 | 2:56 PM

Share

ಯಾದಗಿರಿ, ಸೆಪ್ಟೆಂಬರ್​ 23: ಪಿಎಸ್ಐ ಪರಶುರಾಮ (PSI Parashuram) ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ (Chenna Reddy) ಹಾಗೂ ಪುತ್ರ ಪಂಪನಗೌಡರನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ವಿಧಾನ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಪತ್ರ ಬರೆದಿದ್ದಾರೆ. ಅಲ್ಲದೇ, ಪಿಎಸ್​ಐ ಪರಶುರಾಮ ಅವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದರು. ಆದರೆ ಇನ್ನುವರೆಗೂ ಪರಿಹಾರ ನೀಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್‌ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆಗಸ್ಟ್ 08 ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ಸೂಕ್ತ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿರುವುದು ಗಮನಿಸಿದ್ದೇನೆ. ಆದರೆ ಆಶ್ವಾಸನೆಯನ್ನು ನೀಡಿ ಸುಮಾರು 45 ದಿನಗಳು ಕಳೆದರೂ ಕೂಡ ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿದೇ ಇರುವುದು ಮತ್ತು ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಇರುವುದೇ ಖೇಧಕರ ವಿಷಯವಾಗಿದೆ.

ಮೃತ ಪಿಎಸ್‌ಐ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ಇವರುಗಳ ವಿರುದ್ಧ ಜಾತಿ ನಿಂದನೆ (ಭಾರತೀಯ ನೀತಿ ಸಂಹಿತೆ  2023 (ಯು/ಎಸ್​-352, 108, 3(5)); ಅಟ್ರಾಸಿಟಿ ಕಾಯ್ದೆ, 1989 (ಯು/ಎಸ್​- 3(2(ವಿ), 3(1)(ಆರ್​(ಎಸ್​)) ಅಡಿಯಲ್ಲಿ ದೂರು ದಾಖಲಾದರೂ ಸಹ ಇದುವರೆಗೂ ಅವರ ವಿಚಾರಣೆ ನಡೆದಿಲ್ಲ ಹಾಗೂ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸುವ ಕಾರ್ಯವು ಆಗಿಲ್ಲ.

ಇದನ್ನೂ ಓದಿ: ಪಿಎಸ್​ಐ ಪರಶುರಾಮ ಸಾವು ಕೇಸ್​: ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಆದ್ದರಿಂದ ಮೃತ ಪಿಎಸ್‌ಐ ಪರಶುರಾಮ್ ಅವರ ಕುಟುಂಬಕ್ಕೆ ಅಪಾರವಾದ ಅನ್ಯಾಯವಾಗಿದೆ. ಹೀಗಾಗಿ ತಾವುಗಳು ನೀಡಿರುವ ಆಶ್ವಾಸನೆಗಳನ್ನು ಹಾಗೂ ಪರಿಹಾರಗಳನ್ನು ತಕ್ಷಣ ಪೂರೈಸಬೇಕು ಮತ್ತು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ಇವರ ವಿರುದ್ಧ ವಿಳಂಬ ನೀತಿ ಅನುಸರಿಸದೇ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಏನಿದು ಪ್ರಕರಣ?

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಸಾವು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗುತ್ತಿದೆ. ಪಿಎಸ್‌ಐ ವರ್ಗಾವಣೆ ವಿಚಾರವಾಗಿ ಶಾಸಕ ಚೆನ್ನಾರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ವರ್ಗಾವಣೆಗಾಗಿ ಭಾರೀ ಲಂಚದ ಬೇಡಿಕೆ ಇಡಲಾಗಿತ್ತು. ಈ ವಿಚಾರವಾಗಿಯೇ ಪಿಎಸ್​ಐ ಪರಶುರಾಮ ಮೃತಪಟ್ಟಿದ್ದಾರೆ ಎಂದು ಪರಶುರಾಮ ಅವರ ಕುಟುಂಬಸ್ಥರು ಆರೋಪಿಸಿದ್ದರು. ಹೀಗಾಗಿ, ಈ ನಿಗೂಢ ಸಾವಿನ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Mon, 23 September 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು