ಯಾದಗಿರಿ: ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ, ಹೆಡ್​ಮಾಸ್ಟರ್ ಸಸ್ಪೆಂಡ್

ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ ಹಿನ್ನೆಲೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಶಾಲೆಯ ಹೆಡ್​ಮಾಸ್ಟರ್​ನನ್ನು ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ ಮೇರೆಗೆ ಸಸ್ಪೆಂಡ್ ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಯಾದಗಿರಿ: ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ, ಹೆಡ್​ಮಾಸ್ಟರ್ ಸಸ್ಪೆಂಡ್
Follow us
ಅಮೀನ್​ ಸಾಬ್​
| Updated By: ರಮೇಶ್ ಬಿ. ಜವಳಗೇರಾ

Updated on: Jan 11, 2024 | 4:37 PM

ಯಾದಗಿರಿ, (ಜನವರಿ 11): ವಿದ್ಯಾರ್ಥಿನಿಯರ  (Students) ಜತೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಯಾದಗಿರಿ(Yadagir)  ಜಿಲ್ಲೆಯ ಗುರುಮಠಕಲ್  ತಾಲೂಕಿನ ಅನಪುರ ಶಾಲೆಯ ಹೆಡ್​ಮಾಸ್ಟರ್​ನನ್ನು ಅಮಾನತು ಮಾಡಲಾಗಿದೆ. 10ನೇ ತರಗತಿ ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ ಆರೋಪ ಮೇಲೆ ಶಾಲೆಯ ಹೆಡ್​ಮಾಸ್ಟರ್​ ಹನುಮೇಗೌಡ ಅವರನ್ನ ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಶಿಕ್ಷಕ ಹಣಮೇಗೌಡ ಹತ್ತನೇ ತರಗತಿ ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ. ಶಿಕ್ಷಕನ ಅನುಚಿತ ವರ್ತನೆಗೆ ಬೇಸತ್ತು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಅಳಲು ತೋಡಿಕೊಂಡಿದ್ದರು.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು, ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡು ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು.

ನಂತರ ಪೋಷಕರ ದೂರಿನನ್ವಯ ಅಧಿಕಾರಿಗಳು, ಶಾಲೆಗೆ ಭೇಟಿ ನೀಡಿ ಮಕ್ಕಳಿಂದ ಮಾಹಿತಿ ಪಡೆದುಕೊಂಡಿದ್ದರು. ಇದೀಗ ಮಕ್ಕಳು ಹಾಗೂ ಪೋಷಕರ ಹೇಳಿಕೆಯ ಆಧಾರದ ಮೇಲೆ ಹನುಮೇಗೌಡನನ್ನು ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರೀಮಾ ಪನ್ವಾರ್ ಆದೇಶಿಸಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ