ಎಸ್​​​ಎಸ್​​ಎಲ್​ಸಿ ಫಲಿತಾಂಶದಲ್ಲಿ ಕಳಪೆ ಸಾಧನೆ: ಯಾದಗಿರಿ ಶಿಕ್ಷಕರ ವಾರ್ಷಿಕ ಬಡ್ತಿಗೆ ಕೊಕ್, ಇತರ ಜಿಲ್ಲೆಗಳ ಶಿಕ್ಷಕರಿಗೂ ಆತಂಕ

ಈ ಬಾರಿ ಎಸ್​​​ಎಸ್​​ಎಲ್​ಸಿ ಫಲಿತಾಂಶ ಕಳಪೆಯಾಗಿರುವುದು ಶಿಕ್ಷಕರಿಗೆ ದುಬಾರಿಯಾಗಲಿದೆ. ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ವಾರ್ಷಿಕ ಬಡ್ತಿಗೆ ತಡೆ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಇದಕ್ಕೆ ಉದಾಹರಣೆಯಾಗಿ, ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಜಿಲ್ಲೆಯ ಶಿಕ್ಷಕರ ಬಡ್ತಿಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಉಳಿದ ಜಿಲ್ಲೆಗಳಲ್ಲಿಯೂ ಇಂಥ ಆದೇಶ ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಎಸ್​​​ಎಸ್​​ಎಲ್​ಸಿ ಫಲಿತಾಂಶದಲ್ಲಿ ಕಳಪೆ ಸಾಧನೆ: ಯಾದಗಿರಿ ಶಿಕ್ಷಕರ ವಾರ್ಷಿಕ ಬಡ್ತಿಗೆ ಕೊಕ್, ಇತರ ಜಿಲ್ಲೆಗಳ ಶಿಕ್ಷಕರಿಗೂ ಆತಂಕ
ಎಸ್​​​ಎಸ್​​ಎಲ್​ಸಿ ಫಲಿತಾಂಶದಲ್ಲಿ ಕಳಪೆ ಸಾಧನೆ: ಯಾದಗಿರಿ ಶಿಕ್ಷಕರ ವಾರ್ಷಿಕ ಬಡ್ತಿಗೆ ಕೊಕ್ (ಸಾಂದರ್ಭಿಕ ಚಿತ್ರ)
Follow us
ಅಮೀನ್​ ಸಾಬ್​
| Updated By: Ganapathi Sharma

Updated on: Jun 27, 2024 | 7:50 AM

ಯಾದಗಿರಿ, ಜೂನ್ 27: ಎಸ್​​​ಎಸ್​​ಎಲ್​ಸಿ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತ ಕಾರಣ ಪ್ರೌಢಶಾಲೆ ಶಿಕ್ಷಕರಿಗೆ ಜಿ.ಪಂ ಸಿಇಓ ಗರೀಮಾ ಫನ್ವಾರ್ ಶಾಕ್ ನೀಡಿದ್ದಾರೆ. ಶಿಕ್ಷಕರ ವಾರ್ಷಿಕ ಬಡ್ತಿಗೆ (ಇಂಕ್ರಿಮೆಂಟ್) ತಡೆ ನೀಡಿ ಸಿಇಓ ಗರೀಮಾ ಫನ್ವಾರ್ ಆದೇಶ ಹೊರಡಿಸಿದ್ದಾರೆ. ಫಲಿತಾಂಶ ಸುಧಾರಣೆಗೆ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಎಲ್ಲಾ ರೀತಿಯ ಸವಲತ್ತು ನೀಡಲಾಗಿದೆ. ಆದರೂ ಫಲಿತಾಂಶವು ತೃಪ್ತಿಕರವಾಗಿಲ್ಲ. ಇದರಿಂದ ಯಾದಗಿರಿ ಜಿಲ್ಲೆ ಕೊನೆ ಸ್ಥಾನ ಬಂದಿದೆ. ಜಿಲ್ಲೆಯ ಫಲಿತಾಂಶವು ಸರಾಸರಗಿಂತ ಶೇ 54.43 ರಷ್ಟು ಕಡಿಮೆ ಬಂದಿದೆ. ಜೊತೆಗೆ ವಿಷಯವಾರುಗಿಂತಲೂ ಕಡಿಮೆ ಫಲಿತಾಂಶ ಬಂದಿದೆ. ಹಾಗಾಗಿ ಈ ಬಾರಿ ಯಾದಗಿರಿ ಜಿಲ್ಲೆಯು ಕಳಪೆ ಫಲಿತಾಂಶ ದಾಖಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಷಯವಾರು ಶಿಕ್ಷಕರಿಗೆ ಒಂದು ವರ್ಷದ ಬಡ್ತಿಯನ್ನು ತಡೆ ನೀಡಿ ಆದೇಶ ಹೊರಡಿಸಲಾಗಿದೆ. ಸಂಬಂಧಪಟ್ಟ ಪ್ರೌಢಶಾಲಾ ಮುಖ್ಯಶಿಕ್ಷಕರ ಹಂತದಲ್ಲಿ ಕ್ರಮವಹಿಸಲು ಗರೀಮಾ ಫನ್ವಾರ್ ಆದೇಶ‌ ಹೊರಡಿಸಿದ್ದಾರೆ.

ಶಿಕ್ಷಕರ ಸಂಘ ಬೇಸರ

ಸಿಇಓ ಆದೇಶದಿಂದ ಶಿಕ್ಷಕರ ಸಮುದಾಯಕ್ಕೆ ಭಯ, ಹಿಂಜರಿಕೆ ಹಾಗೂ ಮಾನಸಿಕ ನೆಮ್ಮದಿ ಕಳೆದು ಹೋಗಿದೆ. ಈ ಫಲಿತಾಂಶ ಕಡಿಮೆ ಆಗಲು ಶಿಕ್ಷಕರೇ ಕಾರಣರಲ್ಲ. ಜಿಲ್ಲೆಯಲ್ಲಿ ಶೇ 50 ರಷ್ಟು ಶಿಕ್ಷಕರ ಕೊರತೆಯಿದೆ. ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ನಮ್ಮ ಭಾಗದಲ್ಲಿ ಪಾಲಕರು ಗುಳೆ ಹೋಗುವುದರಿಂದ ಮಕ್ಕಳ ಗೈರು ಹಾಜರಿಯಿದೆ. ಇಷ್ಟೆಲ್ಲಾ ಕಾರಣವಿದ್ದರೂ ನಮ್ಮ ಬಡ್ತಿಗೆ ತಡೆ ಹಿಡಿದಿದ್ದಾರೆ. ನಮ್ಮ ಶಿಕ್ಷಕರ ಸಂಘದಿಂದ ಸಿಇಓ ಅವರಿಗೆ ಮನವಿ ಮಾಡಿ ಮುಂದಿನ ಹೋರಾಟ ಮಾಡುತ್ತೇವೆ ಎಂದು ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ್ ಕೆಂಭಾವಿ ಹೇಳಿದ್ದಾರೆ.

ರಾಜ್ಯದಾದ್ಯಂತ ಅನ್ವಯವಾಗಲಿದೆಯೇ?

ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಕಳಪೆ ಫಲಿತಾಂಶದ ಕಾರಣ ಇನ್​​ಕ್ರಿಮೆಂಟ್​​ ತಡೆಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕಾ ವರದಿಯೊಂದು ತಿಳಿಸಿದೆ.

ಇದನ್ನೂ ಓದಿ: ಅಂಗನವಾಡಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ: ಸಮವಸ್ತ್ರ- ಪುಸ್ತಕ, ಬ್ಯಾಗ್ ವಿತರಣೆ: ಗೊಂದಲಕ್ಕೆ ತೆರೆ ಎಳೆದ ಸಿಎಂ

ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಲಭ್ಯವಾಗಿರುವ ಮಾಹಿತಿಯಂತೆ, ಜಿಲ್ಲಾ ಸರಾಸರಿಗಿಂತ ಕಡಿಮೆ ಅಂಕ ಪಡೆದಿರುವ ವಿಷಯಗಳಲ್ಲಿ ಶಿಕ್ಷಕರ ವಾರ್ಷಿಕ ವೇತನ ಹೆಚ್ಚಳ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇದರಂತೆ ಯಾದಗಿರಿ ಜಿ.ಪಂ ಸಿಇಒ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ