ಯಾದಗಿರಿಯಲ್ಲಿ ಹಿಜಾಬ್ಗಾಗಿ ಪಿಯು ಪರೀಕ್ಷೆ ಬಹಿಷ್ಕರಿಸಿದ 6 ವಿದ್ಯಾರ್ಥಿನಿಯರು
ಇವತ್ತು ಕಲಾ ವಿಭಾಗದ ಮೊದಲ ವಿಷಯ ಅರ್ಥಶಾಸ್ತ್ರ ಪರೀಕ್ಷೆ ಇತ್ತು. ವಿದ್ಯಾರ್ಥಿನಿಯರು ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಹಿಜಾಬ್ಗೆ ಅವಕಾಶ ನೀಡದ ಹಿನ್ನೆಲೆ ವಾಪಸ್ ಆಗಿದ್ದಾರೆ.
ಯಾದಗಿರಿ: ಉಡುಪಿಯಿಂದ ಪ್ರಾರಂಭವಾದ ಹಿಜಾಬ್ (Hijab) ಗಲಾಟೆ ಇಡೀ ರಾಜ್ಯವನ್ನೇ ಆವರಿಸಿದೆ. ಹಿಜಾಬ್ಗಾಗಿ ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು (Students) ಪರೀಕ್ಷೆಯನ್ನೇ ಬಹಿಷ್ಕರಿಸುತ್ತಿದ್ದಾರೆ. ಯಾದಗಿರಿಯ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಹಿಜಾಬ್ ಮುಖ್ಯವೆಂದು ದ್ವಿತೀಯ ಪಿಯು ಪರೀಕ್ಷೆ ಬಹಿಷ್ಕರಿಸಿ ಆರು ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಕೇಳಿದ್ದರು. ಆದರೆ ಪರೀಕ್ಷಾ ಮೇಲ್ವಿಚಾರಕರು ಅವಕಾಶ ನೀಡಲಿಲ್ಲ.
ಇವತ್ತು ಕಲಾ ವಿಭಾಗದ ಮೊದಲ ವಿಷಯ ಅರ್ಥಶಾಸ್ತ್ರ ಪರೀಕ್ಷೆ ಇತ್ತು. ವಿದ್ಯಾರ್ಥಿನಿಯರು ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಹಿಜಾಬ್ಗೆ ಅವಕಾಶ ನೀಡದ ಹಿನ್ನೆಲೆ ವಾಪಸ್ ಆಗಿದ್ದಾರೆ.
ಏಪ್ರಿಲ್ 23ಕ್ಕೆ ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಏಪ್ರಿಲ್ 23ಕ್ಕೆ ಗಣಿತ ಪರೀಕ್ಷೆ ನಡೆದಿದೆ. ಆದರೆ ಹಿಜಾಬ್ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿರಲಿಲ್ಲ. ಅಲ್ಮಾಸ್, ಹಜ್ರಾ, ಆಯೇಷಾ ಪರೀಕ್ಷೆಗೆ ಗೈರಾಗಿದ್ದರು. ಅಲ್ಮಾಸ್ ಹಾಲ್ ಟಿಕೆಟ್ ಪಡೆದು ಪರೀಕ್ಷೆಗೆ ಗೈರಾಗಿದ್ದರು. ಇನ್ನು ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆಯುವುದಕ್ಕೂ ಬಂದಿಲ್ಲ.
ಪರೀಕ್ಷೆಗೆ ಗೈರಾಗಿದ್ದ ಆಲಿಯಾ ಅಸಾದಿ ಟ್ವೀಟ್ ಕೂಡಾ ಮಾಡಿದ್ದಳು. ನನಗೆ, ರೇಷಂಗೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಇದರಿಂದ ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ. ಬಿಜೆಪಿ ಶಾಸಕ ರಘುಪತಿ ಭಟ್ ನಮಗೆ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್, ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಕೇಸ್ ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ. ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಆಲಿಯಾ ಅಸಾದಿ ಟ್ವೀಟ್ ಮಾಡಿದ್ದಳು.
ಇದನ್ನೂ ಓದಿ
ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
ಕ್ಲಾರೆನ್ಸ್ ಶಾಲೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್: ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಪೊಲೀಸರು
Published On - 2:19 pm, Mon, 25 April 22