Raja Venkatappa Nayaka: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
Raja Venkatappa Nayaka Death: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಈ ಬಾರಿ ಸಚಿವಸ್ಥಾನದ ಆಕಾಂಕ್ಷಿಯಾಗಿದ್ದ ಜಾ ವೆಂಕಟಪ್ಪ ನಾಯಕ ಅವರಿಗೆ ಉಗ್ರಾಣ ನಿಗಮ ನೀಡಲಾಗಿತ್ತು.
ಯಾದಗಿರಿ, (ಫೆಬ್ರವರಿ 25): ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ (shorapur assembly constituency) ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) (Congress MLA raja venkatappa nayaka) ನಿಧನರಾಗಿದ್ದಾರೆ. ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 22) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸಂತಾಪ ಸೂಚಿಸಿದ ಸಿದ್ದರಾಮಯ್ಯ
ರಾಜಾ ವೆಂಕಟಪ್ಪ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜಾ ವೆಂಕಟಪ್ಪ ನಾಯಾಕ್ ರಾಜಕೀಯ ಜರ್ನಿ
1994ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ 1999, 2013 ಹಾಗೂ 2023 ರಲ್ಲೂ ಸಹ ಕಾಂಗ್ರೆಸ್ನಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಇನ್ನು ಇವರ ತಂದೆ ರಾಜಾ ಕುಮಾರ್ ನಾಯಕ ಸಹ ಕಾಂಗ್ರೆಸ್ನಿಂದ ಎರಡು(1957,1978 ರಲ್ಲಿ) ಬಾರಿ ಶಾಸಕರಾಗಿದ್ದರು.
2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಈ ಬಾರಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಆದ್ರೆ, ಹೈಕಮಾಂಡ್ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಉಗ್ರಾಣ ನಿಗಮ ನೀಡಲಾಗಿತ್ತು. ಅದರಂತೆ ಮೊನ್ನೇ ಅಷ್ಟೇ ಅವರು ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:51 pm, Sun, 25 February 24