ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಕೇಸ್; ಮೂವರು ಪಿಸಿಗಳು ಸಸ್ಪೆಂಡ್, ಈ ಬಗ್ಗೆ ಮಾಹಿತಿ ಇಲ್ಲ ಎಂದ ಭಗವಂತ ಖೂಬಾ

ಯಾದಗಿರಿ ತಾಲೂಕಿನ ಯರಗೋಳ್ ಬಳಿ ನಡೆದಿದ್ದ ಈ ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮೂವರು ಪಿಸಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆಂದು ಬಳ್ಳಾರಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಕೇಸ್; ಮೂವರು ಪಿಸಿಗಳು ಸಸ್ಪೆಂಡ್, ಈ ಬಗ್ಗೆ ಮಾಹಿತಿ ಇಲ್ಲ ಎಂದ ಭಗವಂತ ಖೂಬಾ
ಗಾಳಿಯಲ್ಲಿ ಗುಂಡು
Follow us
TV9 Web
| Updated By: ಆಯೇಷಾ ಬಾನು

Updated on:Aug 19, 2021 | 1:57 PM

ಯಾದಗಿರಿ: ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ ಮಾಡಿದ ಕೇಸ್ಗೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಗರಂ ಆಗಿದೆ. ಬಂದೂಕು ಹಿಡಿದು ಅಟ್ಟಹಾಸಗೈದಿದ್ದು ಬಿಜೆಪಿ ಮುಖಂಡರು. ಮಾಜಿ ಸಚಿವ ಬಾಬುರಾವ್ ಚಿಂಚನಸೂರು. ಆದರೆ ಪೊಲೀಸರು ಬಂಧಿಸಿದ್ದು ಕೇವಲ ಕಾರ್ಯಕರ್ತರನ್ನು. ಮಾಜಿ ಸಚಿವರನ್ನು ಏಕೆ ಬಂಧಿಸಿಲ್ಲ, ಕೇಸ್ ದಾಖಲಿಸಿಲ್ಲ? ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ.

ಬಂದೂಕು ಹಿಡಿದು ಅಟ್ಟಹಾಸಗೈದಿದ್ದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತು ಇತರೆ ಬಿಜೆಪಿ ಮುಖಂಡರು, ಆದರೆ ಪೊಲೀಸರು ಬಂಧಿಸಿದ್ದು ಕೇವಲ ಕಾರ್ಯಕರ್ತರನ್ನ ಮಾತ್ರ. ಮಾಜಿ ಸಚಿವರ ಮೇಲೆ ಕೇಸ್ ದಾಖಲಿಸಿ, ಬಂಧಿಸದಿರುವುದೇಕೆ? ರಾಜಕೀಯ ಹಿತಾಸಕ್ತಿಗೆ ಅಮಾಯಕ ಕಾರ್ಯಕರ್ತರನ್ನು ಬಲಿ ಕೊಡುವುದು ತಾಲಿಬಾನ್ ಸಂಸ್ಕೃತಿ. ತಾಲಿಬಾನ್ ಸಂಸ್ಕೃತಿಯ ಬಿಜೆಪಿಗೆ ಇದು ಹಳೆಯ ಚಾಳಿ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.

ತಾಲಿಬಾನಿ ಬಿಜೆಪಿಯ ಭಯೋತ್ಪಾದಕ ಯಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣದಲ್ಲಿ ಭಗವಂತ್ ಖೂಬಾ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್‌, ಜಿಲ್ಲಾ ಬಿಜೆಪಿ ಅಧ್ಯಕ್ಷರ ಮೇಲೆ ಕೇಸ್ ದಾಖಲಿಸಿ ಬಂಧಿಸಿ. ಇವರೇ ಈ ಪ್ರಕರಣದ ಹೊಣೆಗಾರರು. ಬಿಜೆಪಿ ಪಕ್ಷ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿರುವ ಶಂಕೆ ಇದ್ದು ಪೊಲೀಸರು ಬಿಜೆಪಿ ಕಚೇರಿಗಳನ್ನು ಶೋಧಿಸಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇನ್ನು ಯಾದಗಿರಿ ತಾಲೂಕಿನ ಯರಗೋಳ್ ಬಳಿ ನಡೆದಿದ್ದ ಈ ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮೂವರು ಪಿಸಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆಂದು ಬಳ್ಳಾರಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಬಿಜೆಪಿಯಿಂದ ಬಳ್ಳಾರಿ ನಗರದಲ್ಲಿ ಜನಾರ್ಶಿವಾದ ಯಾತ್ರೆ ಹಿನ್ನಲೆಯಲ್ಲಿ ಬಳ್ಳಾರಿ ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಭಗವಂತ ಖೂಬಾ ನಗರದ ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಘಟನೆ ಸಂಬಂಧ ಪ್ರರಿಕ್ರಿಯೆ ನೀಡಲು ನಿರಾಕರಿಸಿದ್ದು ಈ ಪ್ರಕರಣ ಸಂಬಂಧ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಬಂದುಕು ವ್ಯವಸ್ಥೆ ಮಾಡಿದ್ದ ಮಾಜಿ ಸಚಿವರ ವಿರುದ್ಧ ಯಾಕಿಲ್ಲ ಕ್ರಮ? ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರೇ ಬಂದುಕು ವ್ಯವಸ್ಥೆ ಮಾಡಿದ್ರು. ಅಮಾಯಕ ರೈತರನ್ನ ಹಿಡಿದು ಕೇಸ್ ಜಡಿದು ಪೊಲೀಸ್ ಕಾನ್ ಸ್ಟೇಬಲ್​ಗಳಿಗೆ ಸಸ್ಪೆಂಡ್ ಶಿಕ್ಷೆ ಏಕೆ. ಕೇಂದ್ರ ಸಚಿವರನ್ನ ಮೆಚ್ಚಿಸಲು ಬಂದುಕು ವ್ಯವಸ್ಥೆ ಮಾಡಿದ್ದು ಚಿಂಚನಸೂರ್. ಹೀಗಾಗಿ ಚಿಂಚನಸೂರ್​ರ ವಿರುದ್ದ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ: ಮೂವರ ಬಂಧನ; ಘಟನೆ ಸಮರ್ಥಿಸಿಕೊಂಡ ಭಗವಂತ್ ಖೂಬಾ

Published On - 1:56 pm, Thu, 19 August 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ