ಪ್ರತ್ಯೇಕ ಘಟನೆ: ಉಡುಪಿ, ಯಾದಗರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಕುಸಿದು ಬಿದ್ದ ವಿದ್ಯಾರ್ಥಿಗಳು

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪರೇಡ್ ನಿರ್ಗಮನದ ವೇಳೆ ಮೂವರು ಶಾಲಾ ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದಾರೆ. ಹಾಗೂ ಉಡುಪಿ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದಾರೆ.

ಪ್ರತ್ಯೇಕ ಘಟನೆ: ಉಡುಪಿ, ಯಾದಗರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಕುಸಿದು ಬಿದ್ದ ವಿದ್ಯಾರ್ಥಿಗಳು
ಅಸ್ಚಸ್ಥರಾದ ಮಕ್ಕಳು
Follow us
| Updated By: ವಿವೇಕ ಬಿರಾದಾರ

Updated on:Aug 15, 2023 | 11:40 AM

ಯಾದಗಿರಿ: ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಆಚರಿಸಲಾಗುತ್ತಿದೆ. ಕರುನಾಡಿನ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಧ್ವಜಾರೋಹಣ ನೆರವೇರಿಸಿದರು. ಅದೇ ರೀತಿಯಾಗಿ ಯಾದಗಿರಿ (Yadgiri) ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪರೇಡ್ ನಿರ್ಗಮನದ ವೇಳೆ ಮೂವರು ಶಾಲಾ ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಉಸ್ತುವಾರಿ ಸಚಿವ ಶರಣಬಸಪ್ಪ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಪಥಸಂಚಲನ ನಡೆದ ದಳದಲ್ಲಿ ನಗರದ ಆದರ್ಶ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿವಿಧ ದಳದಲ್ಲಿ ಪರೇಡ್ ನಡೆಸಿ ಸುಸ್ತಾಗಿದ್ದ ಈ ಮೂವರು ವಿದ್ಯಾರ್ಥಿಗಳು ಪಥಸಂಚಲನ ಮುಕ್ತಾಯದ ವೇಳೆ ಕುಸಿದು ಬಿದ್ದಿದ್ದಾರೆ. ಬೆಳಿಗ್ಗೆ ಬೇಗನೆ ಬಂದಿದ್ದರಿಂದ ಉಪಹಾರ ಸೇವಿಸದೆ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ತಕ್ಷಣವೇ ಗ್ಲೂಕೋಸ್ ನೀಡಿ ಆರೈಕೆ ಮಾಡಿದ್ದಾರೆ. ಇದೀಗ ವಿದ್ಯಾರ್ಥಿಗಳ ಸ್ಥಿತಿ ಸುಧಾರಣೆಯಾಗಿದೆ.

ಲಕ್ಷ್ಮಿ ಹೆಬ್ಬಾಳ್ಕಾರ್ ಭಾಷಣದ ವೇಳೆ ಕುಸಿದು ಬಿದ್ದ ವಿದ್ಯಾರ್ಥಿಗಳು

ಉಡುಪಿ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಹಿನ್ನಲೆ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಭಾಷಣದ ವೇಳೆಯಲ್ಲಿ ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದಾರೆ. ವಿದ್ಯಾರ್ಥಿಗಳು ಪಥ ಸಂಚಲನ ದಳದಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳು ವಿವಿಧ ದಳದಲ್ಲಿ ಪರೇಡ್ ನಡೆಸಿ ಸುಸ್ತಾಗಿದ್ದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ಲೂಕೋಸ್ ನೀಡಿ ಅರೈಕೆ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:17 am, Tue, 15 August 23