AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿ ಸೇರುತ್ತಿದೆ ವಿಷಕಾರಿ ನೀರು, ತ್ಯಾಜ್ಯ: ಜನ-ಜಾನುವಾರುಗಳ ಜೀವಕ್ಕೇ ಕುತ್ತು

ಯಾದಗಿರಿಯ ಕಡೇಚೂರ್-ಬಾಡಿಯಾಳ್ ಕೈಗಾರಿಕಾ ಪ್ರದೇಶದಿಂದ ಹೊರಬರುವ ಕೆಮಿಕಲ್ ಮಿಶ್ರಿತ ತ್ಯಾಜ್ಯ ನೀರು ಚರಂಡಿ ಮೂಲಕ ಹಳ್ಳ ಸೇರಿ ಭೀಮಾ ನದಿಗೆ ಸೇರುತ್ತಿದೆ ಎಂಬ ಆರೋಪ ಕೇಳಿಬಂದಿದೆ. 50ಕ್ಕೂ ಅಧಿಕ ಕೆಮಿಕಲ್ ಕಾರ್ಖಾನೆಗಳಿರುವ ಪ್ರದೇಶದಲ್ಲಿ ತ್ಯಾಜ್ಯ ನಿರ್ವಹಣೆ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, ಜನ-ಜಾನುವಾರು ಹಾಗೂ ಜಲಚರಗಳ ಸುರಕ್ಷತೆಗಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಭೀಮಾ ನದಿ ಸೇರುತ್ತಿದೆ ವಿಷಕಾರಿ ನೀರು, ತ್ಯಾಜ್ಯ: ಜನ-ಜಾನುವಾರುಗಳ ಜೀವಕ್ಕೇ ಕುತ್ತು
ಭೀಮಾ ನದಿ ಸೇರುತ್ತಿರುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರುImage Credit source: tv9
ಅಮೀನ್​ ಸಾಬ್​
| Edited By: |

Updated on:Sep 28, 2026 | 8:14 AM

Share

ಮುಖ್ಯಾಂಶಗಳು

  • ಭೀಮಾ ನದಿಗೆ ಸೇರುತ್ತಿದೆ ಕೆಮಿಕಲ್ ತ್ಯಾಜ್ಯ
  • 50ಕ್ಕೂ ಅಧಿಕ ಕೆಮಿಕಲ್ ಕಾರ್ಖಾನೆಗಳಿಂದ ಸಮಸ್ಯೆ
  • ತ್ಯಾಜ್ಯ ನಿರ್ವಹಣೆಗೆ ಕಠಿಣ ಕ್ರಮಕ್ಕೆ ಒತ್ತಾಯ

ಯಾದಗಿರಿ, ಸೆಪ್ಟೆಂಬರ್ 28: ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಕೈಗಾರಿಕಾ ಪ್ರದೇಶ ಆರಂಭಿಸಿದ್ದರೂ, ಇದೀಗ ಅದೇ ಕೈಗಾರಿಕಾ ಪ್ರದೇಶದಿಂದ ಹೊರಬರುತ್ತಿರುವ ತ್ಯಾಜ್ಯದಿಂದ ಸ್ಥಳೀಯರು ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಾದಗಿರಿ ತಾಲೂಕಿನ ಕಡೇಚೂರ್-ಬಾಡಿಯಾಳ್ ಕೈಗಾರಿಕಾ ಪ್ರದೇಶದಿಂದ ಕೆಮಿಕಲ್ ಮಿಶ್ರಿತ ತ್ಯಾಜ್ಯ ನೀರು ಹೊರಬರುತ್ತಿದ್ದು, ಅದು ಚರಂಡಿ ಮೂಲಕ ಹಳ್ಳ ಸೇರಿ ಅಲ್ಲಿಂದ ಭೀಮಾ ನದಿಗೆ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೈಗಾರಿಕಾ ಪ್ರದೇಶದಿಂದ ಹೊರಬರುತ್ತಿರುವ ತ್ಯಾಜ್ಯ ನೀರಿನಿಂದ ಭೀಮಾ ನದಿ ಮಲಿನವಾಗುತ್ತಿದೆ. ಇದರಿಂದ ಜನರು, ಜಾನುವಾರುಗಳು ಹಾಗೂ ಜಲಚರಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.

50ಕ್ಕೂ ಅಧಿಕ ಕೆಮಿಕಲ್ ಕಾರ್ಖಾನೆಗಳಿಂದ ಸಂಕಷ್ಟ

ಕಡೇಚೂರ್-ಬಾಡಿಯಾಳ್ ಕೈಗಾರಿಕಾ ಪ್ರದೇಶದಲ್ಲಿ 50ಕ್ಕೂ ಅಧಿಕ ಕೆಮಿಕಲ್ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಕಾರ್ಖಾನೆಗಳಲ್ಲಿ ಬಳಕೆಯಾಗುವ ಕೆಮಿಕಲ್ ಮಿಶ್ರಿತ ನೀರನ್ನು ಸಮರ್ಪಕವಾಗಿ ಸಂಸ್ಕರಣೆ ಮಾಡದೆ ಹೊರಬಿಡಲಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಈ ತ್ಯಾಜ್ಯ ನೀರು ಚರಂಡಿ ಮೂಲಕ ಹಳ್ಳಕ್ಕೆ ಹರಿದು, ಬಳಿಕ ಭೀಮಾ ನದಿಯನ್ನು ಸೇರುತ್ತಿದೆ. ಇದರಿಂದ ನದಿಯ ನೀರು ಮಲಿನವಾಗುತ್ತಿದ್ದು, ನದಿ ನೀರು ಅವಲಂಬಿಸಿರುವ ಜನರಲ್ಲಿ ಆತಂಕ ಮೂಡಿದೆ.

ಮೆಡಿಕಲ್ ವೇಸ್ಟ್ ಡಂಪಿಂಗ್ ಯಾರ್ಡ್‌ಗೂ ಆಕ್ಷೇಪ

ಕೈಗಾರಿಕಾ ಪ್ರದೇಶದಲ್ಲಿರುವ ಮದರ್ ಅರ್ಥ್ ಮೆಡಿಕಲ್ ವೇಸ್ಟ್ ಡಂಪಿಂಗ್ ಯಾರ್ಡ್ ಬಗ್ಗೆಯೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತ್ಯಾಜ್ಯದಿಂದ ದುರ್ವಾಸನೆ ಬರುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕೈಗಾರಿಕೆಗಳಿಂದ ಹೊರಬರುವ ತ್ಯಾಜ್ಯ ನೀರು ನದಿಗೆ ಸೇರದಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಜನರು, ಜಾನುವಾರುಗಳು ಮತ್ತು ಜಲಚರಗಳ ಮೇಲೆ ಗಂಭೀರ ಪರಿಣಾಮ ಬೀರುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

LIVE TV

ಅಲ್ಲದೆ, ಮೆಡಿಕಲ್ ವೇಸ್ಟ್ ಡಂಪಿಂಗ್ ಯಾರ್ಡ್‌ನಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆಯೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 am, Mon, 28 September 26

Follow Us
ಅಮೀನ್​ ಸಾಬ್​
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು