
ಯಾದಗಿರಿ: ಕಾರು, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ಬಳಿ ಸಂಭವಿಸಿದೆ. ಕಾಮನಟಗಿ ಗ್ರಾಮದ ನಿವಾಸಿ ಹನುಮಂತ(40), ಸಾಬಣ್ಣ(38) ಮೃತ ದುರ್ದೈವಿಗಳು.
ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.