AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಯಾದಗಿರಿಯಲ್ಲಿ ದುರಂತ ಸುದ್ದಿಗಳು ವರದಿಯಾಗಿವೆ. ಸುರಪುರ ತಾಲೂಕಿನ ಏವೂರದ ಬಳಿ ಬಸವಸಾಗರ ಜಲಾಶಯದ ಜೆಸಿಬಿ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿದ್ದಾರೆ. ನೀರುಪಾಲಾಗಿರುವ ಯುವಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಅಲ್ಲದೆ, ಕೌಟುಂಬಿಕ ಕಲಹದಿಂದಾಗಿ ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಯಾದಗಿರಿ: ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
ಕಾಲುವೆಯಲ್ಲಿ ಶೋಧ ಕಾರ್ಯ
ಅಮೀನ್​ ಸಾಬ್​
| Edited By: |

Updated on:May 18, 2025 | 2:42 PM

Share

ಯಾದಗಿರಿ, ಮೇ 18: ಸುರಪುರ (Surapura) ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿದ್ದಾರೆ. ವಿಜಯಪುರ ಮೂಲದ ಜಟ್ಟೆಪ್ಪ (19), ಕರಿಯಪ್ಪ (19) ಮೃತರು. ರವಿವಾರ (ಮೇ.18) ಒಟ್ಟು ಆರು ಮಂದಿ ಕುರಿಗಾಯಿಗಳು ಕುರಿ ಮೇಯಿಸಲು ತೆರಳಿದ್ದರು. ಆರೂ ಮಂದಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರುಪಾಲಾಗಿದ್ದು, ನಾಲ್ವರು ಪಾರಾಗಿದ್ದಾರೆ. ನೀರುಪಾಲಾಗಿರುವ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾ ನಡೆಯುತ್ತಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ನಗರದ ಅಶೋಕ್ ನಗರ ಬಡಾವಣೆಯಲ್ಲಿ ನಡೆದಿದೆ. ಪವನ್ (30) ಮೃತ ದುರ್ದೈವಿ. ಪವನ್​ ಅವರ ಪತ್ನಿ ಪರ ಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ವೃದ್ಧನ ಕಾಲು ಮುರಿದ ಮಹಿಳೆಯರು
Image
ರಾಮನಗರ ಬಾಲಕಿ ಸಾವು ಕೇಸ್​: FSL ​ ವರದಿಯಲ್ಲಿ ಸ್ಫೋಟಕ ಅಂಶ ಬಯಲು
Image
ಪಂಜಾಬ್​​ನಲ್ಲಿ ಧರ್ಮಸ್ಥಳ ಯುವತಿ ನಿಗೂಢ ಸಾವು
Image
ಬೆಂಗಳೂರು: ಸಿಗರೇಟ್​ ತಂದು ಕೊಡದಿದ್ದಕ್ಕೆ ಕಾರಿನಿಂದ ಗುದ್ದಿ ಯುವಕನ ಕೊಲೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sun, 18 May 25

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ