AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆ ಕುರ್ಚಿಗಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳ ಗುದ್ದಾಟ, ನಾನೇ ಇಲ್ಲಿಯ ಅಧಿಕಾರಿ ಎಂದು ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕುಳಿತ ಅಧಿಕಾರಿಗಳು!

ಒಂದೆ ಕುರ್ಚಿಗಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳ ಗುದ್ದಾಟ, ನಾನೇ ಇಲ್ಲಿಯ ಅಧಿಕಾರಿ ಎಂದು ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕುಳಿತ ಅಧಿಕಾರಿಗಳು! ಸಂಗಪ್ಪ ಅವರು ಫೆಬ್ರವರಿ 01 2023 ರಿಂದ ಅಕ್ಟೋಬರ್ 16 ರ ವರೆಗೆ ಸಹಾಯಕ ನಿರ್ದೇಶಕನ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇನ್ನು ರಾಜಕುಮಾರ ಅವರು ಇದೇ ಹುದ್ದೆಗೆ ಸರ್ಕಾರದಿಂದ ಆದೇಶ ತಂದು ಅಕ್ಟೋಬರ್ 16 ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಒಂದೆ ಕುರ್ಚಿಗಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳ ಗುದ್ದಾಟ, ನಾನೇ ಇಲ್ಲಿಯ ಅಧಿಕಾರಿ ಎಂದು ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕುಳಿತ ಅಧಿಕಾರಿಗಳು!
ಒಂದೆ ಕುರ್ಚಿಗಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳ ಗುದ್ದಾಟ
ಅಮೀನ್​ ಸಾಬ್​
| Edited By: ಸಾಧು ಶ್ರೀನಾಥ್​|

Updated on:Nov 23, 2023 | 1:16 PM

Share

ಯಾದಗಿರಿ: ಒಂದೆ ಸರ್ಕಾರಿ ಹುದ್ದೆಗಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳು ಗುದ್ದಾಟ ನಡೆಸಿ, ಅಧಿಕಾರ ಚಲಾಯಿಸುತ್ತಿದ್ದಾರೆ. ನಾನೇ ಇಲ್ಲಿಯ ಅಧಿಕಾರಿ ಎಂದು ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕುಳಿತುಬಿಟ್ಟಿದ್ದಾರೆ! ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹುದ್ದೆಗೆ (social welfare department in yadgir) ಈ ಫೈಟ್ ನಡೆದಿದೆ. ಯಾದಗಿರಿ ನಗರ ಹೊಸಹಳ್ಳಿ ಕ್ರಾಸ್ ಬಳಿಯಿರುವ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರ ಕಚೇರಿ ಇದೆ. ಇಲ್ಲಿ ಸಂಗಪ್ಪ ಪೂಜಾರಿ ಹಾಗೂ ಡಿ. ರಾಜಕುಮಾರ ಎಂಬಿಬ್ಬರ ಮಧ್ಯೆ ಕುರ್ಚಿಗಾಗಿ ಕಿತ್ತಾಟ ನಡೆದಿದೆ.

ಇನ್ನು ಇಲಾಖೆಯಲ್ಲಿನ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಿರುವ ಸಾರ್ವಜನಿಕರು ಒಂದೇ ಹುದ್ದೆಯಲ್ಲಿ ಇಬ್ಬರು ಅಧಿಕಾರಿಗಳನ್ನ ಕಂಡು ಗೊಂದಲದಲ್ಲಿ ಸಿಲುಕಿದ್ದಾರೆ. ಇವರ ರಗಳೆ ನೋಡಲಾರದೆ, ಪರಿಸ್ಥಿತಿ ತಿಳಿಯಾದ ಮೇಲೆ ಬರೋಣ ಎಂದು ಕಚೇರಿಗೆ ಬಂದೂ, ವಾಪಸ್ ಹೋಗುತ್ತಿದ್ದಾರೆ.

ಸಂಗಪ್ಪ ಅವರು ಫೆಬ್ರವರಿ 01 2023 ರಿಂದ ಅಕ್ಟೋಬರ್ 16 ರ ವರೆಗೆ ಸಹಾಯಕ ನಿರ್ದೇಶಕನ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇನ್ನು ರಾಜಕುಮಾರ ಅವರು ಇದೇ ಹುದ್ದೆಗೆ ಸರ್ಕಾರದಿಂದ ಆದೇಶ ತಂದು ಅಕ್ಟೋಬರ್ 16 ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

Also Read: ಚಳಿಗಾಲದ ಅಧಿವೇಶನ ಇಲ್ಲಿಯೇ ಯಾಕಾದರೂ ನಡೆಯುತ್ತದೋ ಎಂದು ಇಲ್ಲಿನ ರೈತರಿಗೆ ಧುತ್ತನೆ ಎದುರಾಗಿದೆ ಟೆನ್ಷನ್! ಏನದು ವಿಷಯ?

ರಾಜಕುಮಾರಗೆ ಆಗಿರುವ ಆದೇಶವನ್ನು ಪ್ರಶ್ನಿಸಿ ಸಂಗಪ್ಪ ಪೂಜಾರಿ ಅವರು ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠದ ಮೊರ ಹೋಗಿದ್ದಾರೆ. ಅವಧಿಗೂ ಮುನ್ನವೆ ನನ್ನ ಜಾಗಕ್ಕೆ ಮತ್ತೊಬ್ಬರಿಗೆ ಆದೇಶ ಆಗಿದೆ ಎಂದು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದಾರೆ.

ಕೊನೆಗೂ ಕೋರ್ಟ್ ಸಂಗಪ್ಪ ಪರ ತೀರ್ಪು ನೀಡಿ, ಹುದ್ದೆಯಲ್ಲಿ ಮುಂದೆವರೆಯುವಂತೆ ಆದೇಶ ಹೊರಡಿಸಿದೆ. ಇದೇ ವೇಳೆ, ರಾಜಕುಮಾರಗೆ ಆಗಿರುವ ಆದೇಶವನ್ನ ಕೋರ್ಟ್ ರದ್ದು ಮಾಡಿದೆ ಎಂದು ಸಂಗಪ್ಪ ಅವರು ತಮ್ಮ ವಾದ ಮಂಡಿಸಿದ್ದಾರೆ. ಆದ್ರೆ ನನಗೆ ಸರ್ಕಾರದಿಂದ ಆದೇಶ ಇದೆಯಲ್ಲವಾ ಎಂದು ರಾಜಕುಮಾರ ಹುದ್ದೆ ಹಿಡಿದು ಕೂತಿದ್ದಾರೆ. ಇತ್ತ ನ್ಯಾಯಾಲಯ ನನ್ನ ಪರ ತೀರ್ಪು ನೀಡಿದೆ ಎಂದು ಕುರ್ಚಿಯಲ್ಲಿ ಕುಳಿತಿದ್ದಾರೆ ಸಂಗಪ್ಪ. ಮುಂದೇನೋ!?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Thu, 23 November 23

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ