ಯಾದಗಿರಿ: ವೈದ್ಯರ ನಿರ್ಲಕ್ಷ್ಯ ಆರೋಪ, ಹೊಟ್ಟೆಯಲ್ಲಿ ಮಗು ಸಹಿತ ತುಂಬು ಗರ್ಭಿಣಿ ಸಾವು

ಹೆರಿಗೆಗೆಂದು ಹೋಗಿದ್ದ ಗರ್ಭಿಣಿ(Pregnant) ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆಯ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತ ರ್ದುದೈವಿ.

ಯಾದಗಿರಿ: ವೈದ್ಯರ ನಿರ್ಲಕ್ಷ್ಯ ಆರೋಪ, ಹೊಟ್ಟೆಯಲ್ಲಿ ಮಗು ಸಹಿತ ತುಂಬು ಗರ್ಭಿಣಿ ಸಾವು
ಮೃತ ಗರ್ಭಿಣಿ
Follow us
|

Updated on:May 05, 2023 | 12:00 PM

ಯಾದಗಿರಿ: ಹೆರಿಗೆಗೆಂದು ಹೋಗಿದ್ದ ಗರ್ಭಿಣಿ(Pregnant) ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತ ರ್ದುದೈವಿ. ಮೇ 3ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿ ನಾರ್ಮಲ್ ಹೆರಿಗೆ ಮಾಡೋದಾಗಿ ವೈದ್ಯರು ಹೇಳಿದ್ದರು. ಇಡೀ ದಿನ ಆರೋಗ್ಯವಾಗಿಯೇ ಇದ್ದ ಸಂಗೀತಾ ನಿನ್ನೆ(ಮೇ.4) ಸಂಜೆ ಮೃತಪಟ್ಟಿದ್ದಾರೆಂದು ವೈದ್ಯರು ಹೇಳಿದ್ದಾರೆ. ಇದನ್ನ ಕೇಳಿದ ಪೋಷಕರು ಶಾಕ್​ ಆಗಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು, ಕುಟುಂಬಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ವೈದ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Delhi Crime: ಗರ್ಭಿಣಿ ಮೇಲೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಕರ್ಕಶ ಸಂಗೀತವನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಗರ್ಭಿಣಿ ಎಂದೂ ನೋಡದೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣದಲ್ಲಿ, ಮಹಿಳೆಯೂ ಕೊನೆಯುಸಿರೆಳೆದಿದ್ದರು. ದೆಹಲಿಯ ಸಿರಸ್​ಪುರದಲ್ಲಿ ಈ ಘಟನೆ ನಡೆದಿತ್ತು, ಪಕ್ಕದ ಮನೆಯಲ್ಲಿ ಕರ್ಕಶ ಮ್ಯೂಸಿಕ್ ಹಾಕಲಾಗಿತ್ತು, ಅದನ್ನು ವಿರೋಧಿಸಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ್ದರು. ಏಪ್ರಿಲ್ 3 ರಂದು ಘಟನೆ ನಡೆದಿತ್ತು.

ಇದನ್ನೂ ಓದಿ:ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಪೊಲೀಸರು ಆರೋಪ್ ಹರೀಶ್ ವಿರುದ್ಧ ಸೆಕ್ಷನ್ 302(ಕೊನೆ) ಪ್ರಕರಣವನ್ನೂ ದಾಖಲಿಸಿದ್ದಾರೆ. ಏಪ್ರಿಲ್ 3 ರಂದು ಘಟನೆಗೆ ಸಂಬಂಧಿಸಿದಂತೆ ಪಿಸಿಆರ್​ಗೆ ಕರೆ ಬಂದಿತ್ತು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ರಂಜು ಅವರನ್ನು ಶಾಲಿಮಾರ್​ ಬಾಗ್​ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಕುತ್ತಿಗೆಗೆ ಗುಂಡೇಟು ತಗುಲಿತ್ತು. ಬಳಿಕ ಗರ್ಭಪಾತವೂ ಆಗಿತ್ತು. ಹರೀಶ್ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಎಂಬಾತನಿಂದ ಗನ್ ತೆಗೆದುಕೊಂಡು ಆಕೆಯ ಮೇಲೆ ಗುಂಡು ಹಾರಿಸಿದ್ದನು. ಮಹಿಳೆಯ ಪತಿ ಕೂಲಿ ಕೆಲಸ ಮಾಡುತ್ತಿದ್ದು, ಬಿಹಾರ ಮೂಲದ ಕುಟುಂಬ ಅಲ್ಲಿ ನೆಲೆಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:51 am, Fri, 5 May 23

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘