ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ ವೇನಲ್ಲಿ ದುರಂತ: ಗೋಡೆಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ಯುವಕರು ಸಾವು

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿ ನಿರ್ಮಾಣ ಹಂತದ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ ವೇನಲ್ಲಿ ದುರಂತ: ಗೋಡೆಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ಯುವಕರು ಸಾವು
ಕಾರು ಅಪಘಾತ
Edited By:

Updated on: Nov 07, 2026 | 4:04 PM

ಮುಖ್ಯಾಂಶಗಳು

  • ನಿರ್ಮಾಣ ಹಂತದ ಎಕ್ಸ್​ಪ್ರೆಸ್​ ವೇನಲ್ಲಿ ಕಾರು ಅಪಘಾತ
  • ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ
  • ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಯಾದಗಿರಿ, ನವೆಂಬರ್​​ 07: ನಿರ್ಮಾಣ ಹಂತದ ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್​ ಕ್ಯಾಂಪ್ ಬಳಿ ನಡೆದಿದೆ. ಗುರುರಾಜ್ ಚವ್ಹಾಣ್(35), ರೆಡ್ಡಿ ರಾಠೋಡ್(33),
ಗೋವಿಂದ ಚವ್ಹಾಣ್(28) ಮತ್ತು ಕುಮಾರ್​ ರಾಠೋಡ್(26) ಮೃತರು. ಅಪಘಾತ ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಲಿಂಗೇರಿ ತಾಂಡಾದ ಓರ್ವ ಯುವಕ ಸೇರಿ ಮಲ್ಹಾರ್ ತಾಂಡಾದ ಮೂವರು ನಿವಾಸಿಗಳು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ನಿರ್ಮಾಣ ಹಂತದ ಚೆನ್ನೈ-ಸೂರತ್​ ಎಕ್ಸ್‌ಪ್ರೆಸ್‌ ವೇನಲ್ಲಿ ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಿಂದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

Loading...

ಆಯತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಬೈಕ್:​ ಸವಾರ ಸಾವು 

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್​ ಸವಾರ ಆಯತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನ ಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಪ್ರವೀಣ್ (45) ಮೃತ ವ್ಯಕ್ತಿ. ನೆಲಮಂಗಲದಲ್ಲಿ ಖಾಸಗಿ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು.

ರಾತ್ರಿ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಪ್ರವೀಣ್, ಈ ವೇಳೆ ಮಾದನಾಯಕನಹಳ್ಳಿಗೆ  ಬರುತ್ತಿದ್ದಂತೆ ಬೈಕ್​ ಡಿವೈಡರ್​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಗೆ ತೆರಳುವ ಭರದಲ್ಲಿ ಹೆಲ್ಮೆಟ್ ಧರಿಸದೆ ಚಾಲನೆ ಮಾಡಿದ್ದು, ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪ್ರೀತಿ ಕೊಲೆಯಲ್ಲಿ ಅಂತ್ಯ! ಗೋಕಾಕ್ ಫಾಲ್ಸ್‌ಗೆ ಕರೆತಂದು ಪ್ರೇಯಸಿಯನ್ನೇ ಕೊಂದ ಪೇದೆ

ಘಟನೆ ಸಂಬಂಧ ಚಿಕ್ಕಬಾಣಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಿದ್ದಾರೆ. ಆದರೆ ಈ ಅಪಘಾತ ಬೈಕ್ ಸವಾರನ ದುಡುಕಿನಿಂದಲೇ ನಡೆದಿರುವುದು ಎನ್ನುವುದು ಗೊತ್ತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:03 pm, Sat, 7 November 26

ಅಮೀನ್​ ಸಾಬ್​

ಅಮೀನ್​ ಸಾಬ್​ ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದಾರೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿಸಿದ್ದಾರೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಕ್ರಿಕೆಟ್ ಆಡುವುದು, ಮಾನವೀಯ ಮೌಲ್ಯಗಳುಳ್ಳ ಸುದ್ದಿಗಳನ್ನ ವರದಿ ಮಾಡುವುದು.

Read More
Loading...
Unable to load recommendations.
Follow Us